ETV Bharat / state

ಕುಮಾರಣ್ಣ ಬುದ್ಧಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು - ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಡಿಸಿಎಂ ಡಿ ಕೆ ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

DCM DK Shivakumar spoke to the media.
ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು.
author img

By ETV Bharat Karnataka Team

Published : Nov 19, 2023, 9:06 PM IST

ಬೆಂಗಳೂರು: ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಬುದ್ಧಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಇಂದಿರಾ ಗಾಂಧಿ ಹೆಸರಿನಲ್ಲಿ ಟೂರಿಂಗ್ ಟಾಕೀಸ್‌ ಗಳನ್ನು ಇಟ್ಟಿದ್ದೆ. ಒಂದಲ್ಲ ಮೂರ್ನಾಲ್ಕು ಕಡೆ ಟೆಂಟ್‌ಗಳನ್ನು ಇಟ್ಟಿದ್ದೆ. ದೊಡ್ಡಆಲಹಳ್ಳಿ, ಹಾರೋಬೆಲೆ, ಕೋಡಿಹಳ್ಳಿಗಳಲ್ಲಿ ನಡೆಸುತ್ತಿದ್ದೆ. ಹುಣಸೇಹಳ್ಳಿಯಲ್ಲಿ ಈಗಲೂ ಟೆಂಟ್ ಇದೆ. ಈ ಊರುಗಳಿಗೆ ಹೋಗಿ ಮಾಧ್ಯಮದವರೇ ಸಮೀಕ್ಷೆ ನಡೆಸಿ, ನಾನು ಯಾವ ಚಿತ್ರಗಳ ಪ್ರದರ್ಶನ ಮಾಡಿಸುತ್ತಿದ್ದೆ ಎಂದು ಜನರ ಬಳಿ ಕೇಳಿ. ಕುಮಾರಸ್ವಾಮಿ ಅವರಿಗೆ ನೀವೆ ಉತ್ತರಿಸಿ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಪದೇ ಪದೆ ನಿಮ್ಮ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಿರುವುದರ ಹಿಂದಿನ ಕಾರಣವೇನು ಎಂದು ಕೇಳಿದಾಗ ಅವರು ದೊಡ್ಡವರು, ಏನೇ ಹೇಳಿದರು ನಾವು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಬಳಸುತ್ತಾರೆ ಎಂದು ನಾನು ಏಕವಚನ ಬಳಸುವುದಿಲ್ಲ. ಅದು ಅವರ ಸಂಸ್ಕೃತಿ. ಅವರು ಕುಳಿತಿದ್ದ ಸ್ಥಾನ ದೊಡ್ಡದು, ಅದಕ್ಕೆ ಅವರಿಗೆ ಗೌರವ ಕೊಡುತ್ತೇನೆ ಎಂದು ಹೇಳಿದರು.

ಪ್ರತಿದಿನ‌ ವೈಯಕ್ತಿಕ ದಾಳಿ ನಡೆಸುತ್ತಲೇ ಇದ್ದಾರಲ್ಲ ಎಂದಾಗ ಇದರಿಂದ ಅವರಿಗೆ ಯಶಸ್ಸು ದೊರೆಯುವುದಿದ್ದರೆ ದೊರೆಯಲಿ ಎಂದು ಹಾರೈಸಿದರು.

ಕುಮಾರಸ್ವಾಮಿ ಆರೋಪ : ಚಿಕ್ಕಮಗಳೂರಿನಲ್ಲಿ ಮಾಧ್ಯಮಗೋಷ್ಟಿಯನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು. ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆತ ಆ ರೀತಿ ಪೋಸ್ಟರ್ ಪ್ರಿಂಟ್‌ ಮಾಡಿಸುವುದು ಬಿಟ್ಟು ದೇವರದ್ದು ಹಾಕಿಸುತ್ತಾನಾ? ದೊಡ್ಡ ಆಲದಹಳ್ಳಿಯ ಸಾತನೂರಿನಲ್ಲಿ 2 ಟೆಂಟ್ ಇದ್ವಲ್ಲಾ, ಮಲಯಾಳಿ ಸಿನಿಮಾಗೆ ಕಟ್ಟಿಂಗ್ ಸೇರಿಸುತ್ತಿದ್ದರಲ್ಲ. ಅದನ್ನೇ ಮುಂದುವರೆಸುತ್ತಿದ್ದಾರೆ.

ಅವರು ಬಂದಿರುವುದೇ ಆ ಸಂಸ್ಕೃತಿಯಲ್ಲಿ. ಅಂತವರನ್ನು ಈ ರಾಜ್ಯದ ಜನ ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನವರು ಅಂತವರಿಗೆ ಅಧಿಕಾರ ನೀಡಿದ್ದಾರೆ. ಅವರ ಜೀವನ, ಸಂಸ್ಕೃತಿ, ಬದುಕೇ ಅಷ್ಟು. ಏನು ಮಾಡುವುದು ಎಂದು ವ್ಯಂಗ್ಯವಾಡಿದರು.

ಸಿಎಂ ಸಿದ್ದರಾಮಯ್ಯ ಕುರಿತು ಮಾತನಾಡಿದ ಅವರು, ಹಲೋ ಅಪ್ಪ.. ಅವರ ಶ್ರಮ ನೋಡ್ತಿದ್ದೇನೆ. ಇವತ್ತು ಮಾತಾಡಲ್ಲ, ಎಲ್ಲಾ ಕ್ರಿಕೆಟ್ ನೋಡ್ತಿದ್ದಾರೆ. 2 ದಿನದಿಂದ ಅವರ ಗೋಳಾಟ ನೋಡಿದ್ದೇನೆ. ನಿಮ್ಮ ಮಗ ರಾಜಕೀಯ ಮಾಡಲಿ, ನೋ ಪ್ರಾಬ್ಲಂ. ಆಶ್ರಯ ಕಮಿಟಿ ಅಧ್ಯಕ್ಷ ಕೆಡಿಪಿ ಮೀಟಿಂಗ್​ಗೆ ಅವಕಾಶ ಇದೆಯೇ?. ಜನ ಸಂಪರ್ಕ ಸಭೆಯಲ್ಲಿ ಆಶ್ರಯ ಕಮಿಟಿ ಅಧ್ಯಕ್ಷನಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಲು ಸಾಧ್ಯನಾ. ನಾನು 2 ಬಾರಿ ಸಿಎಂ, ನನ್ನ ಮಗನಿಗೆ ಕ್ಷೇತ್ರ ಬಿಟ್ಟಿದ್ದೆನಾ ಎಂದು ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದರು.

ಇದನ್ನೂಓದಿ:ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.