ETV Bharat / state

ನಾವು ಕೇಂದ್ರದ ಬಳಿ ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಲಿ: ಡಿಕೆಶಿ - ಬರ ಪರಿಹಾರ ಬಿಡುಗಡೆ

ಈಗಾಗಲೇ ರಾಜ್ಯ ಸರ್ಕಾರ ಉತ್ತಮ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದೆ. ನಾವು ಕೇಂದ್ರದ ಬಳಿ ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

dk shivakumar
ಡಿಸಿಎಂ ಡಿ ಕೆ ಶಿವಕುಮಾರ್
author img

By ETV Bharat Karnataka Team

Published : Nov 10, 2023, 2:17 PM IST

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಬೆಂಗಳೂರಿನಲ್ಲಿಂದು ‌ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬಿಜೆಪಿ-ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಅದರ ಬದಲು ಬರದ ಹಿನ್ನೆಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನು ಆಗುವುದಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ?. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದರು.

ಇದನ್ನೂ ಓದಿ: ಬರ ಪರಿಹಾರದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಕಳವಳ : ಹೆಚ್​ ಕೆ ಪಾಟೀಲ್

ಈಗಾಗಲೇ ಸರ್ಕಾರ ಉತ್ತಮ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನು ಸ್ವೀಕಾರ ಮಾಡಿದ ಕೇಂದ್ರ ಸರ್ಕಾರ, ಅಧ್ಯಯನಕ್ಕೆ ಅಧಿಕಾರಿಗಳನ್ನು ಕಳುಹಿಸಿದ್ರು. 26 ಸಂಸದರು, 19 ಜೆಡಿಎಸ್ ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಭೇಟಿ ಮಾಡಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ತರುವ ಪ್ರಯತ್ನ ಮಾಡಿ : ಕಟೀಲ್​ಗೆ ಸಚಿವ ಆರ್ ಬಿ ತಿಮ್ಮಾಪೂರ ಟಾಂಗ್

ಸಚಿವ ಸಂಪುಟದಲ್ಲಿ ಈಗಾಗಲೇ 800 ಕೋಟಿ ರೂ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದೇವೆ. ಕುಡಿಯುವ ನೀರು, ಮೇವು, ಬರ ನಿರ್ವಹಣೆ ಸೇರಿದಂತೆ ಎಲ್ಲದಕ್ಕೂ ಉಪಯೋಗ ಮಾಡಬೇಕು ಎಂದು ಹಣ ಕೊಟ್ಟಿದ್ದೇವೆ. ಬರಗಾಲ ಸಂದರ್ಭದಲ್ಲಿ ನರೇಗಾ ಮಾನವ ದಿನಗಳನ್ನು ಹೆಚ್ಚಿಸಬೇಕು ಎಂದು ಹೇಳಿದ್ದೇವೆ. ಪ್ರಸ್ತುತ ಇರುವ 100 ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಬೇಕು ಎಂದು ಪತ್ರ ಬರೆಯಲಾಗಿದೆ. ಆದರೆ ಎರಡು ಮೂರು ತಿಂಗಳು ಆದರೂ ಪ್ರಾರಂಭಿಸಿಲ್ಲ.‌ ಕೂಡಲೇ ಬಿಜೆಪಿ ಸಂಸದರು ಹಾಗೂ ಅವರ ನೆಂಟಸ್ಥಿಕೆಯಲ್ಲಿರುವ ದಳದವರು ಹೋಗಲಿ.‌ ಹೋಗಿ ಮನವಿ ಮಾಡಲಿ, ರಾಜಕಾರಣ ಮಾಡಲಿ ನಾವು ಬೇಡ ಎನ್ನಲ್ಲ ಎಂದು‌ ತಿರುಗೇಟು ನೀಡಿದರು.

ಇದನ್ನೂ ಓದಿ: ' ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ' : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರ ಹಣ ಕೊಡಲಿಲ್ಲ ಎಂದರೂ, ನಮ್ಮ ಸರ್ಕಾರ ಕೊಡುವ ಬಗ್ಗೆ ಚಿಂತನೆ ನಡೆಸಿದೆ. ಆದರೆ, ಕೇಂದ್ರ ಸರ್ಕಾರ ನಮ್ಮಿಂದ ಬರ ಪರಿಹಾರ ಕೊಡಲು ಆಗಲ್ಲ ಎಂದು ಹೇಳಬೇಕೆಂದು ಸವಾಲು ಹಾಕಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.