ETV Bharat / state

ನಾವು ಬಸವಣ್ಣ, ಕುವೆಂಪು, ಶಿಶುನಾಳ ಶರೀಫರು, ಕನಕದಾಸರ ನಾಡಿನವರು... ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ: ಡಿಸಿಎಂ ಡಿಕೆಶಿ - DCM DK Shivakumar reaction

ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

DCM DK Shivakumar reaction
DCM DK Shivakumar reaction
author img

By

Published : Jun 2, 2023, 8:01 PM IST

Updated : Jun 2, 2023, 8:34 PM IST

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಜನ ವಿಶ್ವಾಸ ಇಟ್ಟು ನಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣ, ಕುವೆಂಪು, ಶಿಶುನಾಳ ಶರೀಫರು, ಕನಕದಾಸರ ನಾಡಿನವರು. ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ನಂತರ ಗ್ಯಾರಂಟಿ ಯೋಜನೆ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 5 ಗ್ಯಾರಂಟಿಗಳನ್ನು ನೀಡಲು ತೀರ್ಮಾನ ಮಾಡಿ, ದಿನಾಂಕ ನಿಗದಿ ಮಾಡಿದ್ದೇವೆ ಎಂದರು.

  • ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ @siddaramaiah ಅವರ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ.

    ಈ ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ… pic.twitter.com/MzROuL9D4V

    — CM of Karnataka (@CMofKarnataka) June 2, 2023 " class="align-text-top noRightClick twitterSection" data=" ">

ಗೃಹಜ್ಯೋತಿ: 200 ಯೂನಿಟ್ ಉಚಿತ ವಿದ್ಯುತ್. ಜುಲೈ ತಿಂಗಳ ವಿದ್ಯುತ್ ಬಳಕೆ ಉಚಿತವಾಗಲಿದ್ದು, ಆಗಸ್ಟ್ ತಿಂಗಳಿನಿಂದ ಬಿಲ್ ಕಟ್ಟುವಂತಿಲ್ಲ. ಸ್ವಂತ ಮನೆ ಹಾಗೂ ಬಾಡಿಗೆದಾರರಿಗೂ ಈ ಯೋಜನೆ ಅನ್ವಯ. ಯೋಜನೆ ದುರ್ಬಳಕೆ ತಡೆಯಲು 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇ. 10 ರಷ್ಟು ಸೇರಿಸಿ, ಅದಕ್ಕೆ ಸಂಪೂರ್ಣ ಶುಲ್ಕ ವಿನಾಯಿತಿ. ಇಷ್ಟು ದಿನಗಳ ಕಾಲ 100 ಯೂನಿಟ್ ಬಳಸುತ್ತಿದ್ದವರು ಏಕಾಏಕಿ 200 ಯುನಿಟ್ ಬಳಕೆಗೆ ಅವಕಾಶವಿಲ್ಲ. ಇದುವರೆಗೂ ಅವರ ದೈನಂದಿನ ಜೀವನದಲ್ಲಿ ಬಳಸಲಾಗುತ್ತಿದ್ದಷ್ಟು ವಿದ್ಯುತ್ ಉಚಿತವಾಗಿ ಬಳಸಬಹುದಾಗಿದೆ ಎಂದು ಹೇಳಿದರು.

  • ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ @siddaramaiah ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.

    ಬಿಪಿಎಲ್ ಅಥವಾ ಎಪಿಎಲ್ ಕುಟುಂಬದ ಮಹಿಳೆಯು ತಮ್ಮ ಬ್ಯಾಂಕ್ ಖಾತೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್‌ನ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ,… pic.twitter.com/G5bKiWVjQz

ಗೃಹಲಕ್ಷ್ಮಿ: ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ಮೂಲಕ ಆನ್ಲೈನ್ ಹಾಗೂ ಆಫ್ಲೈನ್​ ಅರ್ಜಿ ಆಧರಿಸಿ ಆಗಸ್ಟ್ 15 ರಿಂದ ಜಾರಿ ಮಾಡಲಾಗುತ್ತದೆ. ಜೂನ್ 15 ರಿಂದ ಜುಲೈ 15 ರೊಳಗೆ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಬೇಕು. ನಂತರ ಅರ್ಜಿ ಹಾಗೂ ದಾಖಲೆ ಪರಿಶೀಲಿಸಿ ಯೋಜನೆ ಜಾರಿಗೆ ಬರುತ್ತದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದವರಿಗೂ ಈ ಯೋಜನೆ ಸಿಗುತ್ತದೆ. ಮನೆ ಯಜಮಾನಿಯನ್ನು ಕುಟುಂಬದವರೇ ತೀರ್ಮಾನ ಮಾಡಬೇಕು. ಅಂಗವಿಕಲ, ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ ಈ 2000 ರೂ. ಕೊಡಲಾಗುವುದು ಎಂದು ತಿಳಿಸಿದರು.

  • ಬಡತನ ರೇಖೆಗಿಂತ ಕೆಳಗಿನ ಹಾಗೂ ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ರಾಜ್ಯದ ಎಲ್ಲಾ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ ತಲಾ 10 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ @siddaramaiah ಅವರ ನೇತೃತ್ವದ ಸಂಪುಟ ಸಭೆಯು ನಿರ್ಧರಿಸಿದೆ.

    ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ಹಿಂದಿನ ನಮ್ಮ ಸರ್ಕಾರ ಜಾರಿಗೆ ತಂದಿದ್ದ… pic.twitter.com/TTwbcXqQ5W

ಅನ್ನಭಾಗ್ಯ: ಜುಲೈ 1 ರಿಂದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ತಲಾ 10 ಕೆಜಿ ಆಹಾರ ಧಾನ್ಯ ಕೊಡುತ್ತೇವೆ. ಈ ತಿಂಗಳ ಪಡಿತರ ಆಹಾರ ಸಾಮಗ್ರಿ ರವಾನೆ ಆಗಿದ್ದು, ಈ ತಿಂಗಳಿಂದ ಅಕ್ಕಿ ಹಾಗೂ ಆಹಾರ ಧಾನ್ಯ ಸಂಗ್ರಹಣೆ ಮಾಡಲಾಗುವುದು. ಹೀಗಾಗಿ ಈ ಯೋಜನೆಯನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುವುದು ಎಂದು ಹೇಳಿದರು.

  • ಶಾಲಾ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಬಸ್ ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ನೀಡಲು ಮುಖ್ಯಮಂತ್ರಿ @siddaramaiah ಅವರ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.

    ಜೂನ್ 11 ರಂದು "ಶಕ್ತಿ" ಯೋಜನೆಗೆ ಚಾಲನೆ ನೀಡಲಿದ್ದು, ಶೇ. 94 ರಷ್ಟು… pic.twitter.com/EhcX7FtZAb

ಶಕ್ತಿ: ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ರಾಜ್ಯದೊಳಗೆ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ ಸೇವೆಯನ್ನು ಬಳಸಬಹುದು. ಎಸಿ ಮತ್ತು ಐಶಾರಾಮಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್​ಗಳಿಗೆ ಮಾತ್ರ ಅನ್ವಯ. ಕೆಎಸ್​ಆರ್​ಟಿಸಿಯಲ್ಲಿ 50% ಸೀಟು ಪುರುಷರಿಗೆ ಮೀಸಲು.

ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಐಶಾರಾಮಿ ಬಸ್, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್​ಗಳಿಗೆ ಈ ಯೋಜನೆ ಅನ್ವಯ ಆಗುವುದಿಲ್ಲ. ಜೂನ್ 11 ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ದಂಪತಿ ಸಮೇತ ತೆರಳಿ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಡಿಸಿಎಂ ತಿಳಿಸಿದರು.

  • 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಮುಖ್ಯಮಂತ್ರಿ @siddaramaiah ಅವರ ನೇತೃತ್ವದ ಸಂಪುಟ ಸಭೆಯು ನಿರ್ಧರಿಸಿದೆ.

    ಪದವಿ ಪಡೆದು 180… pic.twitter.com/5pddF8umGr

ಯುವನಿಧಿ: 2002-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಾಸ್ ಮಾಡಿದವರಿಗೆ 24 ತಿಂಗಳು ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೋಮದಾರರಿಗೆ 1500 ರೂ. ಭತ್ಯೆ. ತೃತೀಯ ಲಿಂಗಿಗಳಿಗೂ ಅನ್ವಯ. 18 ವರ್ಷದಿಂದ 25 ವರ್ಷದವರಿಗೆ ಅನ್ವಯವಾಗುತ್ತದೆ. ಅವರು ಅರ್ಜಿ ಹಾಕಬೇಕು. ಅರ್ಜಿ ಕೊಟ್ಟಾಗಿಂದ ಜಾರಿಯಾಗಲಿದೆ. ಅರ್ಜಿ ಸಲ್ಲಿಸಲು 6 ತಿಂಗಳುಗಳ ಕಾಲಾವಕಾಶ ಇರುತ್ತದೆ. ಎರಡು ವರ್ಷದ ನಂತರ ಅವರ ಹಣ ನೀಡುವುದಿಲ್ಲ. ಅಷ್ಟರಲ್ಲಿ ಅವರು ಕೆಲಸ ಹುಡುಕಬೇಕು. ಸರ್ಕಾರಿ ನೌಕರರು ಹಾಗೂ ಇತರ ಸಂಘಸಂಸ್ಥೆಗಳು ನಮಗೆ ಈ ಯೋಜನೆಗಳು ಬೇಡ ಎಂದು ಅನೇಕರು ಸ್ವ-ಇಚ್ಛೆಯಿಂದ ನಮಗೆ ಪತ್ರ ಬರೆದಿದ್ದು, ಅದಕ್ಕೂ ಅವಕಾಶ ನೀಡಲಾಗುವುದು. ಯೋಜನೆಯ ಲಾಭ ತ್ಯಜಿಸಲು ಇಚ್ಛಿಸಿದರೆ ಅದನ್ನು ಸರ್ಕಾರ ಸ್ವಾಗತ ಮಾಡಲಿದೆ ಎಂದರು.

  • ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಲು ಬಿಜೆಪಿಗೆ

    ಅವಕಾಶವೂ ಇಲ್ಲ,
    ಯೋಗ್ಯತೆಯೂ ಇಲ್ಲ,
    ವಿಷಯವೂ ಇಲ್ಲ,
    ನೈತಿಕತೆಯೂ ಇಲ್ಲ.

    ಹಾಗಾಗಿಯೇ @BJP4Karnataka ಪಕ್ಷ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ!

    — Karnataka Congress (@INCKarnataka) June 2, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಕರಾವಳಿಯಲ್ಲಿ ಖಾಸಗಿ ಬಸ್​ಗಳಲ್ಲಿ ಸಂಚರಿಸುವವರಿಗೆ ಏನು ವ್ಯವಸ್ಥೆ?: ನಳಿನ್ ಕುಮಾರ್ ಕಟೀಲು ಪ್ರಶ್ನೆ!

  • ,@nalinkateel ಅವರೇ,
    ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!

    ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!

    ಇದು ನಮ್ಮ ಗ್ಯಾರಂಟಿ.

ಟ್ವೀಟ್​ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್:​ ಈ ಬಗ್ಗೆ ಟ್ವೀಟ್​ ಮಾಡಿಕೊಂಡಿರುವ ಕಾಂಗ್ರೆಸ್​ ಪಕ್ಷ, ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದಿದೆ.

  • ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.

    ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ.

    ಇದು ನಮ್ಮ ಬದ್ಧತೆ,

ಬಿಜೆಪಿ ನಾಯಕರ ಕಾಲೆಳೆದ ಕೈ ಪಡೆ, ನಳೀನ್​ ಕುಮಾರ್​ ಕಟೀಲ್​ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ! ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ!, ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ!, ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ ಎಂದು ಮತ್ತೊಂದು ಟ್ವೀಟ್​ ಮಾಡಿಕೊಂಡಿದೆ.

ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಲು ಬಿಜೆಪಿಗೆ ಅವಕಾಶವೂ ಇಲ್ಲ, ಯೋಗ್ಯತೆಯೂ ಇಲ್ಲ, ವಿಷಯವೂ ಇಲ್ಲ, ನೈತಿಕತೆಯೂ ಇಲ್ಲ. ಹಾಗಾಗಿಯೇ ರಾಜ್ಯ ಬಿಜೆಪಿ ಪಕ್ಷ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ! ಎಂದು ಮಗದೊಂದು ಟ್ವೀಟ್​ ಮಾಡಿ ವ್ಯಂಗ್ಯ ಮಾಡಿದೆ.

Last Updated : Jun 2, 2023, 8:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.