ETV Bharat / state

ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿಸಿಎಂ ಡಿ ಕೆ ಶಿವಕುಮಾರ್ - DCM DK Shivakumar slams BJP and JDS

ಬಿಜೆಪಿ ಮತ್ತು ಜೆಡಿಎಸ್​ ವಿರುದ್ಧ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ವಾಗ್ದಾಳಿ ನಡೆಸಿದ್ದಾರೆ.

dcm-dk-shivakumar-slams-bjp-and-jds
ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್
author img

By ETV Bharat Karnataka Team

Published : Oct 18, 2023, 11:25 AM IST

Updated : Oct 18, 2023, 12:29 PM IST

ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: : "ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಯತ್ನಿಸುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿ, "ನನಗೆ ಎಲ್ಲಾ ಗೊತ್ತಿದೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಏನು ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ. "ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ" ಎಂದು ತಿಳಿಸಿದರು.

ಇದನ್ನೂ ಓದಿ : ಅವರೇ ಒರಿಜಿನಲ್ ಅಂತ ಬರೆದುಕೊಳ್ಳಿ: ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಹೆಚ್​.ಡಿ.ಕುಮಾರಸ್ವಾಮಿ ಗರಂ

Last Updated : Oct 18, 2023, 12:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.