ETV Bharat / state

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹವಾದಷ್ಟೇ ಬೇಗ ಆದೇಶ ತೆರವಾಗಬೇಕು: ಡಿಕೆಶಿ - Hhhh

ರಾಹುಲ್​ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ ಮಾತನಾಡಿದರು.

ಡಿಸಿಎಂ ಡಿಕೆ ಶಿವಕುಮಾರ್​
ಡಿಸಿಎಂ ಡಿಕೆ ಶಿವಕುಮಾರ್​
author img

By

Published : Aug 4, 2023, 10:34 PM IST

ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಪ್ರತಿಕ್ರಿಯೆ

ಬೆಂಗಳೂರು : ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟ್​ನ ಇಂದಿನ ತೀರ್ಪು ಸಾಕ್ಷಿ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ, ಅಷ್ಟೇ ಬೇಗ ಆ ಆದೇಶ ತೆರವಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಅಧೀನ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದ ಬಗ್ಗೆ ಡಿಕೆಶಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ದೇಶ ಹಾಗೂ ಜನರ ಹಿತಕ್ಕಾಗಿ ರಾಹುಲ್ ಗಾಂಧಿ ಎತ್ತುತ್ತಿರುವ ಧ್ವನಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಮಹತ್ವದ್ದಾಗಿದೆ. ಅವರು ಎಂಪಿ ಆಗಿರಬೇಕು. ಜೊತೆಗೆ ದೇಶದ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.

ನ್ಯಾಯ ನೀಡುವ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ಮಾತನ್ನು ನಾನು ಹಿಂದೆಯೇ ಹೇಳಿದ್ದೆ. ಈ ದೇಶದ ಅತ್ಯುನ್ನತ ನ್ಯಾಯಾಲಯದ ತೀರ್ಮಾನ ಪ್ರಜಾಪ್ರಭುತ್ವದಲ್ಲಿ ದ್ವೇಷದ ರಾಜಕಾರಣಕ್ಕೆ ಜಾಗವಿಲ್ಲ ಎಂಬ ಸಂದೇಶ ಸಾರಿದೆ ಎಂದರು.

ಇದನ್ನೂ ಓದಿ : Modi surname row: ಕ್ಷಮೆ ಕೇಳಲ್ಲ, ಹಾಗನ್ನಿಸಿದ್ದರೆ ಮೊದಲೇ ಕೇಳಿರುತ್ತಿದ್ದೆ; ಸುಪ್ರೀಂಕೋರ್ಟ್​ಗೆ ರಾಹುಲ್​ ಗಾಂಧಿ ಅಫಿಡವಿಟ್​

ಈ ವಿಚಾರವನ್ನು ಲೋಕಸಭೆ ಚುನಾವಣೆ ವಿಷಯವಾಗಿ ಬಳಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ. ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಂತಹವರ ಸದಸ್ಯತ್ವವನ್ನು ಯಾವ ರೀತಿ ಕುತಂತ್ರದ ಮೂಲಕ ಅನರ್ಹ ಮಾಡಿಸಿದ್ದಾರೆ ಎಂದು ಜನ ಹಾಗೂ ಇಡೀ ವಿಶ್ವ ಗಮನಿಸಿದೆ ಎಂದು ಹೇಳಿದರು.

ಏನಿದು ಪ್ರಕರಣ? : 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ನೀರವ್‌ ಮೋದಿಯಾಗಿರಲಿ, ಲಲಿತ್‌ ಮೋದಿಯಾಗಿರಲಿ ಅಥವಾ ನರೇಂದ್ರ ಮೋದಿ ಸೇರಿದಂತೆ ಎಲ್ಲ ಕಳ್ಳರ ಸರ್‌ನೇಮ್‌ ಮೋದಿಯೇ ಆಗಿರುವುದೇಕೆ ಎಂದು ಪ್ರಶ್ನಿಸಿದ್ದರು. ಈ ಕುರಿತು ಗುಜರಾತ್‌ನ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್​ ಮಾನಹಾನಿ ಪ್ರಕರಣ ದಾಖಲಿಸಿ ಕೋರ್ಟ್‌ ಮೆಟ್ಟಿಲೇರಿದ್ದರು. ಬಳಿಕ ಗುಜರಾತ್‌ ಹೈಕೋರ್ಟ್‌ ರಾಹುಲ್‌ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹತೆ ಗೊಳಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ : Modi surname case: ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.