ETV Bharat / state

ಭದ್ರಾ ಯೋಜನೆ... ಪ್ರಧಾನಿ ಭೇಟಿ ಮಾಡಲು ನನಗೆ ಇನ್ನು ಸಮಯ ನಿಗದಿಯಾಗಿಲ್ಲ: ಡಿಸಿಎಂ - ​ ETV Bharat Karnataka

ನವದೆಹಲಿಯ ಕರ್ನಾಟಕ ಭವನದ ಬಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದಕ್ಕೆ ಸಮಯ ನಿಗದಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್
author img

By ETV Bharat Karnataka Team

Published : Dec 18, 2023, 6:41 PM IST

ನವದೆಹಲಿ/ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕ ಭವನದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೇಟಿಗೆ ಸಮಯ ನೀಡಿದ್ದಾರೆ. ಮುಖ್ಯಮಂತ್ರಿಗಳು ಬರ ಪರಿಹಾರ, ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳ ಹೆಚ್ಚಳ ಸೇರಿದಂತೆ ಇತರ ಪ್ರಮುಖ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ. ಪ್ರಧಾನಮಂತ್ರಿಗಳ ಭೇಟಿಗೆ ನನಗೆ ಇನ್ನು ಸಮಯ ನಿಗದಿಯಾಗಿಲ್ಲ. ಹೀಗಾಗಿ ಕೆಲವು ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ ಎಂದರು.

ಪಕ್ಷದ ಹೈಕಮಾಂಡ್ ನಾಯಕರ ಜತೆಗೆ ನಡೆಯುವ ಸಭೆ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್​, ಇಂದು ಪಕ್ಷದ ನಾಯಕರ ಜತೆ ಸಭೆ ನಡೆಯಲಿದೆ. ಯಾವೆಲ್ಲಾ ವಿಷಯ ಚರ್ಚೆ ಮಾಡುತ್ತೇವೆ ಎಂಬುದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನಿಗಮ, ಮಂಡಳಿಗಳಿಗೆ ಮೊದಲು ಶಾಸಕರ ನೇಮಕ ಆಗಲಿದೆ. ಸಾಧ್ಯವಾದರೆ ಕೆಲವು ಕಾರ್ಯಕರ್ತರ ನೇಮಕವನ್ನೂ ಮಾಡುತ್ತೇವೆ. ಒಟ್ಟು ಮೂರು ಹಂತಗಳಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಇದೇ 28 ಕ್ಕೆ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ನಾಗ್ಪುರದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಅದಕ್ಕೂ ಮುನ್ನ 21 ರಂದು ದೆಹಲಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ನಾನು ಕಾರ್ಯಕಾರಿಣಿ ಸಮಿತಿ ಸದಸ್ಯನಲ್ಲ. ನಾನು ಕೇವಲ ಆಹ್ವಾನಿತ ಮಾತ್ರ. ಸಾಮಾನ್ಯವಾಗಿ ಕಾರ್ಯಕಾರಿ ಸಮಿತಿ ಸಭೆ ನಂತರ ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಸಭೆ ಮಾಡುತ್ತಾರೆ. ಕೆಲವೊಮ್ಮೆ ಕಾರ್ಯಕಾರಿ ಸಮಿತಿ ಸಭೆ ಸಮಯದಲ್ಲೇ ಕರೆಯುತ್ತಾರೆ ಎಂದು ಡಿ.ಕೆ ಶಿವಕುಮಾರ್​ ವಿವರಿಸಿದರು.

ಇನ್ನು ಕೇರಳದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಕ್ರಮಗಳನ್ನು ಕೈಗೊಳ್ಳು ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಅನಗತ್ಯ ಗಾಬರಿ ಬೇಡ. ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಎಲ್ಲ ಮಾಹಿತಿ ನೀಡುತ್ತೇವೆ. ಅನಗತ್ಯವಾಗಿ ಆತಂಕ ಸೃಷ್ಟಿಸುವ ಅಗತ್ಯವಿಲ್ಲ ಎಂದು ಮಾಧ್ಯಮಗಳಿಗೂ ಮನವಿ ಮಾಡುತ್ತೇನೆ ಎಂದು ಡಿಕೆಶಿ ನುಡಿದರು.

ಇದನ್ನೂ ಓದಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ಕೊರೊನಾ ರೂಪಾಂತರಿ ಬಗ್ಗೆ ಆತಂಕ ಬೇಡ: ದಿನೇಶ್ ಗುಂಡೂರಾವ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.