ETV Bharat / state

ತೆರಿಗೆ ಹೊರೆ ವಿಚಾರದಲ್ಲಿ ಕಾಲಾವಕಾಶ ಕೊಟ್ಟು ಪರಿಹಾರ ಒದಗಿಸುತ್ತೇವೆ : ಡಿಸಿಎಂ - ತೆರಿಗೆ ವಿಚಾರ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್​ ಅವರಿಗೆ ತೆರಿಗೆ ಹೊರೆ ಬಗ್ಗೆ ಜನರು ದೂರಿದರು.

ಡಿಸಿಎಂ ಡಿ.ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್
author img

By ETV Bharat Karnataka Team

Published : Jan 11, 2024, 10:57 PM IST

ತೆರಿಗೆ ಹೊರೆಯ ವಿಚಾರದಲ್ಲಿ ಕಾಲಾವಕಾಶ ನೀಡಿ ಪರಿಹಾರ

ಬೆಂಗಳೂರು : ವೃದ್ಧಾಪ್ಯ ವೇತನ, ವಿಧವಾ ವೇತನ, ಖಾತೆ ಸಮಸ್ಯೆ, ತೆರಿಗೆ ಹೊರೆ ಹೆಚ್ಚಾಗಿದೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬಂದಿವೆ. ಜನರ ತೆರಿಗೆ ಹೊರೆ ಇಳಿಸುವ ವಿಚಾರದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಪರಿಶೀಲಿಸಿ ಕಾನೂನಿಗೆ ತಿದ್ದುಪಡಿ ತರಬೇಕಾಗಿದೆ. 2020ರಲ್ಲಿ ಜಾರಿಗೆ ತಂದಿರುವ ಕಾಯ್ದೆಯಲ್ಲಿ ದುಪ್ಪಟ್ಟು ದಂಡ ಕಟ್ಟುವಂತಾಗಿದೆ. ಇದನ್ನು ಕಡಿಮೆ ಮಾಡಲು ಚರ್ಚೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜನರಿಗೆ ಕಾಲಾವಕಾಶ ನೀಡಿ ಪರಿಹಾರವನ್ನು ನೀಡಬೇಕಿದೆ ಎಂದು ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ, ಜರಗನಹಳ್ಳಿ ಸರ್ಕಾರಿ ಶಾಲಾ ಆಟದ ಮೈದಾನದಲ್ಲಿ ನಡೆದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಈ ವೇಳೆ ಮಾತನಾಡಿದ ಅವರು, ವಸತಿ ಪಡೆಯಲು ಹಣ ಕಟ್ಟಿದ್ದರೂ ಹಲವರಿಗೆ ಮನೆ ಸಿಕ್ಕಿಲ್ಲ. ಮತ್ತೆ ಕೆಲವರು ವೈಯಕ್ತಿಕ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಇವರೆಲ್ಲರನ್ನು ಭೇಟಿ ಮಾಡಿ ಅವರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ತಿಳಿಸಿದರು.

ಅಹವಾಲು ಸ್ವೀಕಾರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್​

110 ಹಳ್ಳಿಗಳ ಅಭಿವೃದ್ಧಿ ವಿಚಾರವಾಗಿ ಸ್ಥಳೀಯ ಶಾಸಕರು ಹಾಗೂ ಸಂಸದರು ಬೇಡಿಕೆ ಇಟ್ಟಿರುವ ಬಗೆಗಿನ ಪ್ರಶ್ನೆಗೆ ಈ ಭಾಗದಲ್ಲಿ ಸಂಪರ್ಕ ಹಾಗೂ ಕುಡಿಯುವ ನೀರಿನ ಯೋಜನೆಗೆ ಆದ್ಯತೆ ನೀಡುತ್ತೇವೆ. ವಿಧವಾ ವೇತನ ನೀಡಲು ವೃದ್ಧೆ ಬಳಿ 4 ಸಾವಿರ ಲಂಚ ಕೇಳಿದ ಅಧಿಕಾರಿ ವಿರುದ್ಧ ಕ್ರಮಜರುಗಿಸಲಾಗಿದೆ. ಸರ್ಕಾರಿ ಪ್ರೌಢಶಾಲಾ ಶಾಲೆ ಕಟ್ಟಿಸಿಕೊಡಿ, ನಮ್ಮ ಏರಿಯಾ ಜನರಿಗೆ ಕುಡಿಯುವ ನೀರು, ಸ್ಮಶಾನಕ್ಕೆ ಜಾಗ ಬೇಕು. ಅಂಗನವಾಡಿ, ಸಂಚಾರ ದಟ್ಟಣೆ, ಪಾರ್ಕ್ ಸಮಸ್ಯೆ ಬಗೆಹರಿಸಿ ಎಂದು ಸಲ್ಲಿಸಿದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದಕ್ಕೆ ಕಾನೂನಾತ್ಮಕ ಪರಿಹಾರ ನೀಡಲಾಗುವುದು. ಒಂದಷ್ಟು ಹೊತ್ತು ವೇದಿಕೆಯ ಮೇಲೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಅಹವಾಲು ಸಲ್ಲಿಸಲು ಬಂದಿದ್ದನ್ನು ಕಂಡು ವೇದಿಕೆಯಿಂದ ಇಳಿದು ಜನರು ಇದ್ದಲಿಯೇ ತೆರಳಿ ಅವರ ಮನವಿಗಳನ್ನು ಆಲಿಸಿ ಪರಿಹಾರ ಸೂಚಿಸಿದ್ದೇನೆ ಎಂದರು.

ಅಮಾನತಿಗೆ ಸೂಚಿಸಿದ್ದೇನೆ- ಶಿವಕುಮಾರ್: ಬನಶಂಕರಿ ತಾಲೂಕು ಕಚೇರಿಯಲ್ಲಿ ಪಿಂಚಣಿ ಪಡೆಯಲು ಗೊಟ್ಟಿಗೆರೆಯ ಮಣಿಯಮ್ಮ ಅವರು ಹೋದಾಗ ಅಧಿಕಾರಿಗಳೇ ಏಜೆಂಟರ ಬಳಿ ಕಳುಹಿಸಿದ್ದಾರೆ. ಗೇಟ್ ಬಳಿ ರಮೇಶ್ ಎಂಬುವವರು ಹಾಗು ಕೊಠಡಿ ಸಂಖ್ಯೆ 24 ರಲ್ಲಿರುವ ಅಧಿಕಾರಿ ನಾಲ್ಕು ಸಾವಿರ ಲಂಚ ಕೇಳುತ್ತಾರೆ ಎಂದು ದೂರು ನೀಡಿದಾಗ, ಬನಶಂಕರಿ ಉಪ ತಹಶೀಲ್ದಾರಿಗೆ ಕೂಡಲೇ ಆ ಮಹಿಳೆಯಿಂದ ಲಂಚ ಕೇಳಿದ ಅಧಿಕಾರಿ ಮಾಹಿತಿ ಪಡೆದು ಆತನನ್ನು ಅಮಾನತು ಮಾಡಿ ಎಂದು ಸೂಚಿಸಿದ್ದೇನೆ ಎಂದು ಡಿ.ಕೆ ಶಿವಕುಮಾರ್​ ಹೇಳಿದರು.

ಈ ಮೊದಲು ಯಾವ ಅಧಿಕಾರಿಗಳೂ ತಮ್ಮ ಹುದ್ದೆ ಮತ್ತು ಹೆಸರಿನ ಬೋರ್ಡನ್ನು ಹಾಕಿಕೊಳ್ಳುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಜೆ.ಪಿ.ನಗರದ ಸುರೇಂದ್ರನಾಥ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಕೊರೋನಾ ಸಮಯದಲ್ಲಿ ಮುಚ್ಚಿರುವ ಉದ್ಯಾನಗಳನ್ನು ತೆರೆಯಿರಿ ಎಂದು ಸುರೇಂದ್ರನಾಥ್​ ಮನವಿ ನೀಡಿದಾಗ. ಉದ್ಯಾನಗಳನ್ನು ಸಾರ್ವಜನಿಕರ ಬಳಕೆಗೆ ತೆರೆಯಿರಿ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ರಿಗೆ ಸೂಚನೆ ನೀಡಿದ್ದೇನೆ ಎಂದು ಡಿಕೆಶಿ ಮಾಹಿತಿ ನೀಡಿದರು.

ಎಸ್‌ಡಿಎಂಸಿ, ಸಿಡಿಸಿ ಸಮಿತಿಗಳಲ್ಲಿ ಕಳೆದ 15 ವರ್ಷಗಳಿಂದ ಒಂದೇ ಪಕ್ಷದವರು ಆಡಳಿತ ಮಾಡುತ್ತಿದ್ದಾರೆ. ನಮಗೂ ಅವಕಾಶ ನೀಡಿ ಎಂಬ ಬೊಮ್ಮನಹಳ್ಳಿಯ ಅನಿಲ್ ಅವರ ಮನವಿಗೆ ಸಮಿತಿಗಳಿಗಳಲ್ಲಿ ಎಲ್ಲಾ ಸಾರ್ವಜನಿಕರಿಗೂ ಅವಕಾಶ ಕಲ್ಪಿಸುವಂತೆ ನೋಡಿಕೊಳ್ಳಲಾಗುವುದು. ರೋಗ ರುಜಿನಗಳು, ಅಂಗವಿಕಲವಾಗಿರುವ ಪ್ರಾಣಿಗಳನ್ನು ಸಾಕಲು ಒಂದು ಜಾಗ ನೀಡಿ ಎಂದು ವೀಣಾ ಕೇಶವಮೂರ್ತಿ ಎಂಬುವವರು ಮನವಿ ಸಲ್ಲಿಸಿದಾಗ ಜಾಗ ನೀಡುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದು ಮಾಧ್ಯಮಗಳಿಗೆ ಡಿಸಿಎಂ ಪ್ರತಿಕ್ರಿಯಿಸಿದರು.

ಧರ್ಮದ ವಿಚಾರದಲ್ಲಿ ರಾಜಕೀಯ ಮಾಡಬಾರದು : ರಾಮ ಮಂದಿರ ವಿಚಾರದಲ್ಲಿ ರಾಜಕೀಯ ನಡೆಯುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ರಾಜಕೀಯದಲ್ಲಿ ಧರ್ಮ ಪಾಲನೆ ಮಾಡಬೇಕು. ಆದರೆ ಧರ್ಮದಲ್ಲಿ ರಾಜಕಾರಣ ಮಾಡಬಾರದು. ಈ ವಿಚಾರವನ್ನು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ ಎಂದು ಡಿ.ಸಿ.ಎಂ ಡಿಕೆಶಿ ತಿಳಿಸಿದರು.

ಇದನ್ನೂ ಓದಿ : ಫೆಬ್ರವರಿಯಲ್ಲೇ ಲೋಕಸಭೆ ಅಭ್ಯರ್ಥಿಗಳ ಅಂತಿಮಕ್ಕೆ ಹೈಕಮಾಂಡ್ ಜೊತೆ ಚರ್ಚೆ: ವಿಜಯೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.