ETV Bharat / state

ಎಸ್ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್

author img

By

Published : May 22, 2023, 1:15 PM IST

ವಿಧಾನಸಭೆ ವಿಶೇಷ ಅಧಿವೇಶನಕ್ಕೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಎಸ್ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

sm krishna
ಎಸ್ ಎಂ ಕೃಷ್ಣ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸದಾಶಿವನಗರದ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ಇತಿಹಾಸದ ಪುಸ್ತಕವನ್ನು ಸ್ವಹಸ್ತಾಕ್ಷರದೊಂದಿಗೆ ಪ್ರೀತಿ ಪೂರ್ವಕವಾಗಿ ಉಡುಗೊರೆಯಾಗಿ ನೀಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್, "ವಿಧಾನಸಭೆ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಲಾಗುತ್ತಿದ್ದು, ನನಗೆ ರಾಜಕೀಯವಾಗಿ ಪ್ರೋತ್ಸಾಹ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಆಶೀರ್ವಾದ ಪಡೆಯುವುದು ನನ್ನ ಕರ್ತವ್ಯ. ಹೀಗಾಗಿ, ಅವರ ನಿವಾಸಕ್ಕೆ ಭೇಟಿ ನೀಡಿ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ. ಅವರು ಬೆಂಗಳೂರು ಇತಿಹಾಸವೆಂಬ ಪುಸ್ತಕ ನೀಡಿದ್ದಾರೆ. ಕೃಷ್ಣ ಅವರು ಬಹಳ ದೂರದೃಷ್ಟಿಯಿಂದ ಈ ಪುಸ್ತಕ ನೀಡಿದ್ದಾರೆ" ಎಂದು ತಿಳಿಸಿದರು.

shivakumar
ಡಿ ಕೆ ಶಿವಕುಮಾರ್​ಗೆ ಪುಸ್ತಕ ನೀಡಿದ ಎಸ್ ಎಂ ಕೃಷ್ಣ

ಇದನ್ನೂ ಓದಿ : ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು - ವಿಡಿಯೋ

ಮಳೆಗೆ ಬ್ಯಾಟರಾಯನಪುರದಲ್ಲಿ 27 ವರ್ಷದ ಯುವಕ ಕೊಚ್ಚಿ ಹೋಗಿರುವ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ ಅವರು, "ನಿನ್ನೆ ರಾತ್ರಿ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಇಂತಹ ದುರ್ಘಟನೆ ನಡೆಯುತ್ತಿರುವುದು ದುರಾದೃಷ್ಟಕರ. ಕಾಲುವೆಗಳ ಬಳಿ ಬಹಳ ಜಾಗೃತವಾಗಿ ಇರಬೇಕು. ಈ ಹಿಂದೆ ಕೇಂದ್ರ ಸರ್ಕಾರ ನರ್ಮ್ ಯೋಜನೆ ಮೂಲಕ ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಹಳ ನೆರವು ನೀಡಿದ್ದರು. ಈಗಲೂ ನಗರಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಎಷ್ಟರ ಮಟ್ಟಿಗೆ ಸದುಪಯೋಗ ಪಡಿಸಿಕೊಂಡಿವೆ ಎಂದು ನೋಡಬೇಕಿದೆ. ನಗರದ ಪ್ರಮುಖ ಅಂಡರ್ ಪಾಸ್​ಗಳ ಕುರಿತು ವರದಿ ತರಿಸಿಕೊಂಡು, ಈ ಪ್ರದೇಶಗಳಲ್ಲಿ ಮತ್ತೆ ಹೀಗೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಪ್ರತಿಯೊಂದು ಜೀವ ಕಾಪಾಡುವುದು ನಮ್ಮ ಕರ್ತವ್ಯ" ಎಂದು ತಿಳಿಸಿದರು.

ಇದನ್ನೂ ಓದಿ : ಮೊದಲ ದಿನದ ವಿಧಾನಸಭಾ ಅಧಿವೇಶನ : ಎತ್ತಿನ ಗಾಡಿಯಲ್ಲಿ ಆಗಮಿಸಿದ ನೂತನ ಶಾಸಕರು - ವಿಡಿಯೋ

ವಿಧಾನಸಭೆ ವಿಶೇಷ ಅಧಿವೇಶನ : ಇನ್ನು ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯುತ್ತಿದೆ. ಈ ಹಿನ್ನೆಲೆ ಎಲ್ಲಾ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್​. ಆಶೋಕ್, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿದರು.

ಇದನ್ನೂ ಓದಿ : ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷ ನೀಡುವ ಜವಾಬ್ದಾರಿ ನಿರ್ವಹಿಸುತ್ತೇನೆ : ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ

ಹಿಂದೆ ಸ್ಪೀಕರ್​ ಆಗಿದ್ದವರಿಗೆಲ್ಲ ಸೋಲು.. ಇಲ್ಲಿದೆ ವಿಧಾನಸಭಾಧ್ಯಕ್ಷರಾಗಿ ಬಳಿಕ ಸೋತವರ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.