ETV Bharat / state

Day Against Drug Abuse 2023: ಡ್ರಗ್ಸ್​​ನಂತಹ ದುಶ್ಚಟಗಳಿಂದ ದೂರವಿದ್ದರೆ ಮಾತ್ರ ಗುರಿ ಸಾಧನೆ ಸಾಧ್ಯ: ವಿದ್ಯಾರ್ಥಿಗಳಿಗೆ ಡಿಸಿಎಂ ಸಲಹೆ - ಬೆಂಗಳೂರು ನ್ಯೂಸ್​

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ 'ಡ್ರಗ್ಸ್ ವಿರೋಧಿ ಜಾಗೃತಿ ಜಾಥಾ'ದಲ್ಲಿ ಡಿಸಿಎಂ ಡಿಕೆಶಿ ಶಾಲಾ ಮಕ್ಕಳೊಂದಿಗೆ ಹೆಜ್ಜೆ ಹಾಕಿದರು.

DCM DK Shivakumar walks with school children
ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಡಿಸಿಎಂ ಡಿಕೆಶಿ
author img

By

Published : Jun 26, 2023, 1:09 PM IST

ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಡಿಸಿಎಂ ಡಿಕೆಶಿ

ಬೆಂಗಳೂರು: ನಮ್ಮ ರಾಜ್ಯದ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ಮುಂದೆ ಡಿ ಕೆ ಶಿವಕುಮಾರ್ ಕೂಡ ಆಗಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಲು ಡ್ರಗ್ಸ್ ವ್ಯಸನದಂತ ದುಶ್ಚಟಗಳಿಂದ ದೂರ ಉಳಿಯಬೇಕು. ಆಗ ಮಾತ್ರ ಗುರಿ ಸೇರಿ, ಸಾಧನೆ ಮಾಡಲು ಸಾಧ್ಯ ಎಂದು ಮಕ್ಕಳಿಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಿವಿಮಾತು ಹೇಳಿದರು.

DCM DK Shivakumar walks with school children
ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಡಿಸಿಎಂ ಡಿಕೆಶಿ

ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗ. ಇದರಿಂದ ನಮ್ಮ ಸಮಾಜವನ್ನು ರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಡಿಸಿಎಂ ಡಿಕೆಶಿ ಶಾಲಾ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದರು.

ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ "ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಿದರು. ಡ್ರಗ್ಸ್ ವಿರುದ್ಧ ಹೋರಾಡಲು ಮಕ್ಕಳಿಗೆ ಉತ್ತೇಜನ ತುಂಬಿದರು. ಮಾದಕ ವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನು ಕೊನೆಗೊಳಿಸಲು ನಾವೆಲ್ಲರೂ ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸುವ ದಿನ ಆಚರಣೆ ಮಾಡುತ್ತಿದ್ದೇವೆ" ಎಂದರು.

DCM DK Shivakumar walks with school children
ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಡಿಸಿಎಂ ಡಿಕೆಶಿ

ಮಕ್ಕಳು, ಯುವಕರು ಈ ದೇಶದ ಆಸ್ತಿ. ಅವರು ನಮ್ಮ ಸಂಸ್ಕೃತಿ ಉಳಿಸಿಕೊಂಡು, ವಿದ್ಯಾವಂತರಾಗಿ ವಿಶ್ವ ಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಂದು ಬೆಂಗಳೂರು, ರಾಜ್ಯ ಹಾಗೂ ದೇಶಕ್ಕೆ ವಿಶ್ವಮಟ್ಟದಲ್ಲಿ ಹೆಸರು ಬಂದಿದೆ. ಇಂದು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ನಾನು ನಿಮ್ಮ ಜೊತೆ ಜಾಥಾದಲ್ಲಿ ಹೆಜ್ಜೆ ಹಾಕುತ್ತೇನೆ. ಈ ಜಾಥಾ ನಿಮ್ಮ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯಲಿದೆ ಎಂದು ಹೇಳಿದರು.

ನೀವೆಲ್ಲರೂ ಇಂದು ಇತ್ತ ವಿಧಾನಸೌಧ ಅಂದರೆ ಶಾಸಕಾಂಗ ಹಾಗೂ ಅತ್ತ ಹೈಕೋರ್ಟ್ ಅಂದರೆ ನ್ಯಾಯಾಂಗದ ಮುಂದೆ ಇದ್ದೀರಿ. ಇಡೀ ವಿಶ್ವದಲ್ಲೇ ಎಲ್ಲೂ ಶಾಸಕಾಂಗ ಹಾಗೂ ನ್ಯಾಯಾಂಗದ ಎದುರು ಬದುರು ಇಲ್ಲ. ಮುಂದೆ ಅಪ್ಪಿತಪ್ಪಿ ನಿಮ್ಮ ಸ್ನೇಹಿತರು ಅಥವಾ ಪರಿಚಯದವರಲ್ಲಿ ಯಾರಾದರೂ ಡ್ರಗ್ಸ್ ವ್ಯಸನಿಗಳಾದರೆ ಪೊಲೀಸರು ಬಂಧಿಸಿ, ನ್ಯಾಯಾಲಯದಲ್ಲಿ ಶಿಕ್ಷೆ ಆಗಲಿದೆ ಎಂಬ ಸಂದೇಶ ನಿಮಗೆ ಅರಿವಾಗಲಿ ಎಂದು ಇಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ಕಳೆದೆರಡು ವರ್ಷಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ದೊಡ್ಡ, ದೊಡ್ಡವರು ಸಿಕ್ಕಿಬಿದ್ದು ಯಾವ ರೀತಿ ಅನುಭವಿಸಿದರು ಎಂದು ನೀವು ನೋಡಿದ್ದೀರಿ. ನಿಮ್ಮ ಜೀವನದಲ್ಲಿ ಇದಕ್ಕೆ ಅವಕಾಶ ಮಾಡಿಕೊಡಬೇಡಿ. ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಉತ್ತಮ ನಿಯಂತ್ರಣ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ಅನೇಕ ಪಾದಯಾತ್ರೆಗಳಲ್ಲಿ ಪಾಲ್ಗೊಂಡಿದ್ದೇನೆ. ನೀರಿಗಾಗಿ ನಡಿಗೆ, ಸ್ವಾತಂತ್ರ್ಯ ನಡಿಗೆ, ಭಾರತ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದೇವೆ. ಡ್ರಗ್ಸ್ ಸೇವನೆ ಮಾಡಿದರೆ ನೋವು, ಸಾವು ಎರಡೂ ಬರುತ್ತದೆ. ಹೀಗಾಗಿ ಇದರ ಬಗ್ಗೆ ಬಹಳ ಎಚ್ಚರಿಕೆ ಇರಬೇಕು ಎಂದು ಡಿಸಿಎಂ ಕಿವಿಮಾತು ಹೇಳಿದರು.

ನೀವು ಸಾಮಾಜಿಕ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ. ನೀವು ನಿಮ್ಮ, ನಿಮ್ಮ ಸ್ನೇಹಿತರು ಆತ್ಮೀಯರು ಹಾಗೂ ಆರೋಗ್ಯಕರ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ. ನಿಮಗೆ ಅಭಿನಂದನೆಗಳು ಎಂದರು. ಬಳಿಕ ಮಕ್ಕಳ ಜೊತೆಯಲ್ಲಿಯೇ ಕುಳಿತು ಡಿಸಿಎಂ ಡಿ.ಕೆ ಶಿವಕುಮಾರ್ ಉಪಹಾರ ಸೇವನೆ ಮಾಡಿದರು. ಕೆಲ ಸಮಯ ಮಕ್ಕಳ ಜೊತೆ ಕಳೆದು ಅಭಿಪ್ರಾಯ ಆಲಿಸಿದರು.

ಇದನ್ನೂ ಓದಿ: Day Against Drug Abuse 2023: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ: ಡ್ರಗ್ಸ್​ನಿಂದ ಮುಕ್ತವಾಗಬೇಕಿದೆ ಸಮಾಜ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.