ETV Bharat / state

ನಿಗಮ ಮಂಡಳಿ ನೇಮಕದಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ: ಡಿಸಿಎಂ ಡಿ ಕೆ ಶಿವಕುಮಾರ್

ನಿಗಮ ಮಂಡಳಿ ನೇಮಕದಲ್ಲಿ ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

Etv Bharatdcm-dk-sivakumar-reaction-on-corporation-board-appointment
ನಿಗಮ ಮಂಡಳಿ ನೇಮಕದಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ: ಡಿಸಿಎಂ ಡಿ ಕೆ ಶಿವಕುಮಾರ್
author img

By ETV Bharat Karnataka Team

Published : Dec 30, 2023, 3:23 PM IST

Updated : Dec 30, 2023, 3:38 PM IST

ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: "ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ" ಎಂದರು.

"ಜನಸಾಮಾನ್ಯರು ತಮ್ಮ ಕಷ್ಟಗಳನ್ನು ಹೇಳಿಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು. ಅವರ ಒತ್ತಡ ಕಡಿಮೆ ಮಾಡುವ ಉದೇಶದಿಂದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ. ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಸಂಸದರು ಭಾಗವಹಿಸುವಂತೆ ಆಹ್ವಾನ ನೀಡುತ್ತೇವೆ" ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಸಿದ್ಧತೆಗೆ ಜ. 10 ರಂದು ಸಭೆ: "ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜನವರಿ 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ" ಎಂದರು. ಜ. 4 ರಂದು ದೆಹಲಿ ಪ್ರವಾಸ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, "ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಭೆ ಇದೆ. ಚುನಾವಣೆ ಅಭ್ಯರ್ಥಿ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚೆ ಮಾಡಲು ದೆಹಲಿಗೆ ಹೋಗುತ್ತಿದ್ದೇವೆ" ಎಂದು ಹೇಳಿದರು.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಭೇಟಿ ವಿಚಾರವಾಗಿ ಮಾತನಾಡಿ, "ನಾನು ಆಂಧ್ರಕ್ಕೆ ಹೋಗಿ ಅವರನ್ನು ಭೇಟಿ ಆಗಲಿಲ್ಲ. ಅವರು ಬೆಂಗಳೂರಿಗೆ ಬಂದು ಹೋಗುವಾಗ ವಿಮಾನ ನಿಲ್ದಾಣದಲ್ಲಿ ಸಿಕ್ಕರು. ಅವರ ಆರೋಗ್ಯ ವಿಚಾರಿಸಿದೆ. ಇದೊಂದು ಸೌಜನ್ಯದ ಭೇಟಿಯಷ್ಟೇ" ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: 'ಹಿಂದುಳಿದವರಿಗೆ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕ': ಸಿಎಂ ಸಿದ್ದರಾಮಯ್ಯ

Last Updated : Dec 30, 2023, 3:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.