ETV Bharat / state

ಸರ್ಕಾರ ಸೆಂಚುರಿ ಬಾರಿಸಿ ಮುನ್ನುಗ್ಗಿದೆ, ಕೆಲಸ ಜನರ ಕಣ್ಣಿಗೆ ಕಾಣುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್ - ಈಟಿವಿ ಭಾರತ್​ ಕನ್ನಡ ನ್ಯೂಸ್

ರಾಜ್ಯ ಸರ್ಕಾರ ಆಡಳಿತದಲ್ಲಿ 100 ದಿನಗಳನ್ನು ಪೂರೈಸಿರುವುದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಸ ವ್ಯಕ್ತಪಡಿಸಿದರು.

Etv Bharat
Etv Bharat
author img

By ETV Bharat Karnataka Team

Published : Aug 27, 2023, 5:48 PM IST

ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ರಾಜ್ಯ ಸರ್ಕಾರಕ್ಕೆ ನೂರು ದಿನಗಳು ಪೂರ್ಣಗೊಂಡಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ನಮ್ಮ ಸರ್ಕಾರ ನೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆಲ್ಲೆಡೆ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.10 ಕೋಟಿ ಮನೆ ಯಜಮಾನಿಯರಿಗೆ ಆ. 30 ರಿಂದ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪಲಿದೆ. 1 ಕೋಟಿ 36 ಲಕ್ಷ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ. 1.41 ಕೋಟಿ ಗ್ರಾಹಕರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆ. ಡಿಸೆಂಬರ್ ವೇಳೆಗೆ ನಿರುದ್ಯೋಗಿ ಯುವಕರಿಗೆ ಭತ್ಯೆ ಯೋಜನೆ ಜಾರಿ ಮಾಡುತ್ತೇವೆ ಎಂದರು.

ಇದು ಸಿದ್ದರಾಮಯ್ಯ ಅವರ ಮುನ್ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ. ನಾವು ಕೊಟ್ಟ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ದೇಶದಲ್ಲೇ ಯಾವ ರಾಜ್ಯ ಯಾವ ಸರ್ಕಾರ ಇಷ್ಟು ಕೆಲಸ ಮಾಡಿದೆ ಹೇಳಿ? ಎಂದು ಡಿಸಿಎಂ ಪ್ರಶ್ನಿಸಿದರು.

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಸುಳ್ಳು ಸುದ್ದಿ ನಿಯಂತ್ರಣ ವಿಚಾರವಾಗಿ ಮಾತನಾಡಿದ ಅವರು, "ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, "ಪ್ರಿಯಾಂಕ್ ಖರ್ಗೆ ಅವರ ಜತೆ ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಇತರೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಎನ್​ಆರ್​ಐ ವಿಚಾರ, ಬೆಂಗಳೂರಿನಲ್ಲಿ ಉಚಿತ ವೈ-ಫೈ ವಲಯ ನಿರ್ಮಾಣ ಸಂಬಂಧ ಸಭೆಯ ದಿನಾಂಕ ಪ್ರಕಟಿಸುತ್ತೇವೆ ಎಂದು ಡಿಕೆಶಿ ತಿಳಿಸಿದರು.

ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆದುಕೊಂಡಿದೆ : ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್, ರಾಜ್ಯ ಸರ್ಕಾರದ 100 ದಿನಗಳ ಆಡಳಿತದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ನಾವು ಜನತೆಗೆ ಒಳ್ಳೆಯದನ್ನೇ ಬಯಸಿದ್ದೇವೆ. ಆದರೆ ಕೆಲವರು ಮೊಸರಲ್ಲಿ ಕಲ್ಲು ಹುಡುಕುವಂತಹ ಕೆಲಸ ಮಾಡಿದ್ದಾರೆ. ಈವರೆಗೂ ಯಾವುದೇ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಇದು‌ ನಮಗೆ ತುಂಬಾ ಹೆಮ್ಮೆಯ ವಿಚಾರ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಸಿದ್ದರಾಮಯ್ಯ ಸರ್ಕಾರದ 'ಶತಕ'ದಾಟ: ಗ್ಯಾರಂಟಿಗಳ ಜಾರಿಗೆ ಪಂಚ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.