ETV Bharat / state

ಕೆಶಿಪ್​​ ಪ್ರಗತಿ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್), ಕರ್ನಾಟಕ ರಾಜ್ಯ ನಿರ್ಮಾಣ ನಿಗಮ(ಕೆಎಸ್‍ಸಿಸಿ)ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ  ಡಿಸಿಎಂ ಗೋವಿಂದ ಕಾರಜೋಳ, ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿದರು.

ಕೆಶಿಪ್ ಪ್ರಗತಿ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ
author img

By

Published : Sep 24, 2019, 1:48 AM IST

ಬೆಂಗಳೂರು: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್)ಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚಿಸಿದರು.

ವಿಕಾಸಸೌಧದಲ್ಲಿ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್), ಕರ್ನಾಟಕ ರಾಜ್ಯ ನಿರ್ಮಾಣ ನಿಗಮ(ಕೆಎಸ್‍ಸಿಸಿ)ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೆಶಿಪ್ ಮೊದಲನೇ ಹಂತದಲ್ಲಿ 4615 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, ಅದರಲ್ಲಿ 4162 ಕಿ.ಮೀ. ಉದ್ದದ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ. ಎರಡನೇ ಹಂತದಲ್ಲಿ ₹ 4522 ಕೋಟಿ ವೆಚ್ಚದ 1195 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಗುರಿ ಹೊಂದಿದ್ದು, ಅದರಲ್ಲಿ 1163 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸಲಾಗಿದೆ. ಸೇಫ್ ಕಾರಿಡಾರ್ ಡೆಮಾನ್‍ಸ್ಟ್ರೇಷನ್ ಪ್ರಾಜೆಕ್ಟ್ ಯೋಜನೆಯಡಿ ಬೆಳಗಾವಿಯಿಂದ ಎರಗಟ್ಟಿಯವರೆಗೆ ನಿರ್ಮಿಸಲಾಗಿದ್ದು, ಈ ರಸ್ತೆ ಮಾರ್ಗದಲ್ಲಿ ಅಪಘಾತಗಳ ಪ್ರಮಾಣ ಶೇ. 65ಕ್ಕಿಂತ ಕಡಿಮೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗೂ ವಿಶ್ವ ಬ್ಯಾಂಕ್​​ನಿಂದ ಪ್ರಶಸ್ತಿಯೂ ದೊರೆತಿದೆ ಎಂದು ತಿಳಿಸಿದರು.

ಇದೇ ಮಾದರಿಯಲ್ಲಿ ಇತರ ರಾಜ್ಯಗಳಲ್ಲಿ ರಸ್ತೆಗಳನ್ನು ನಿರ್ಮಿಸಲು ವರದಿ ಪಡೆದುಕೊಂಡು ಮುಂದಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕೆಆರ್​ಇಡಿಎಲ್​ ಸಹಾಯಧನದಿಂದ ನಿರ್ಮಿಸುತ್ತಿರುವ ವಿವಿಧ 6 ಕಾಮಗಾರಿಗಳು ಶೇ. 94ರಷ್ಟು ಪೂರ್ಣಗೊಂಡಿವೆ. ನೆರೆ ಪೀಡಿತ ಪ್ರದೇಶಗಳಲ್ಲಿ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು. ಈ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

Intro:Body:KN_BNG_02_KSHIP_KARAJOLAMEETING_SCRIPT_7201951

ಕೆಶಿಪ್ ಪ್ರಗತಿ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್ ) ಯಡಿ ಪ್ರಗತಿಯ ಹಂತದಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಅವರು ಸೂಚಿಸಿದರು.

ವಿಕಾಸಸೌಧದಲ್ಲಿಂದು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್) ಕರ್ನಾಟಕ ರಾಜ್ಯ ನಿರ್ಮಾಣ ನಿಗಮ(ಕೆಎಸ್‍ಸಿಸಿ)ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಕೆಶಿಪ್ ಮೊದಲನೇ ಹಂತದಲ್ಲಿ 4615 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, ಅದರಲ್ಲಿ 4162 ಕಿ.ಮೀ ಉದ್ದದ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ. ಎರಡನೇ ಹಂತದಲ್ಲಿ 4522 ಕೋಟಿ ರೂ. ವೆಚ್ಚದ 1195 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಗುರಿಹೊಂದಿದ್ದು, ಅದರಲ್ಲಿ 1163 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸಲಾಗಿದೆ. ಸೇಫ್ ಕಾರಿಡಾರ್ ಡೆಮಾನ್‍ಸ್ಟ್ರೇಷನ್ ಪ್ರೊಜೆಕ್ಟ್ ಯೋಜನೆಯಡಿ ಬೆಳಗಾವಿಯಿಂದ ಎರಗಟ್ಟಿ ಯವರೆಗೆ ನಿರ್ಮಿಸಲಾಗಿದ್ದು, ಈ ರಸ್ತೆ ಮಾರ್ಗದಲ್ಲಿ ಅಪಘಾತಗಳ ಪ್ರಮಾಣವು ಶೇ. 65 ಪ್ರಮಾಣಕ್ಕಿಂತ ಕಡಿಮೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗು ವಿಶ್ವಬ್ಯಾಂಕ್ ನಿಂದ ಪ್ರಶಸ್ತಿಯೂ ದೊರೆತಿದೆ ಎಂದು ತಿಳಿಸಿದರು.

ಇದೇ ಮಾದರಿಯಲ್ಲಿ ಇತರ ರಾಜ್ಯಗಳಲ್ಲಿ ರಸ್ತೆಗಳನ್ನು ನಿರ್ಮಿಸಲು ವರದಿಯನ್ನು ಪಡೆದುಕೊಂಡು ಮುಂದಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕೆ ಆರ್ ಇಡಿ ಎಲ್ ಸಹಾಯ ಧನದಿಂದ ನಿರ್ಮಿಸುತ್ತಿರುವ ವಿವಿಧ 6 ಕಾಮಗಾರಿಗಳು ಶೇ. 94 ರಷ್ಟು ಪೂರ್ಣಗೊಂಡಿವೆ. ನೆರೆಪೀಡಿತ ಪ್ರದೇಶಗಳಲ್ಲಿ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು. ಈ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್, ಕೆಶಿಪ್ ಕಾರ್ಯದರ್ಶಿ( ಪಿಡಬ್ಯೂಪಿ), ಕೆ.ಎಸ್. ಕೃಷ್ಣರೆಡ್ಡಿ, ಸೇರಿದಂತೆ ವಿವಿಧ ಹಿರಿಯ ಅಭಿಯಂತರರು ಹಾಜರಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.