ಬೆಂಗಳೂರು: ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕೂಡಲೇ ನೀರು ಹರಿಸಬೇಕು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ.
ಘಟಪ್ರಭಾ ನದಿಯಲ್ಲಿ ನೀರು ಖಾಲಿಯಾಗಿರುವುದರಿಂದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು ಮತ್ತು ಜನ ಜಾನುವಾರುಗಳಿಗೆ ತೊಂದರೆಯಾಗಬಾರದು. ಹಾಗಾಗಿ, ತಕ್ಷಣವೇ ನೀರು ಬಿಡುಗಡೆ ಮಾಡಬೇಕೆಂದು ಅವರು ನಿರ್ದೇಶಿಸಿದ್ದಾರೆ.
ಓದಿ:ಅನುದಾನ ಬಳಕೆಯಲ್ಲಿ ಕೇಂದ್ರಕ್ಕೆ ತಪ್ಪು ಮಾಹಿತಿ ನೀಡಿಲ್ಲ; ಸದನದಲ್ಲಿ ಶಂಕರ್ ಬೆಂಬಲಕ್ಕೆ ಬಂದ ಡಿಸಿಎಂ ಕಾರಜೋಳ