ETV Bharat / state

ಮ್ಯಾನುಯಲ್ ಸ್ಕ್ಯಾವೆಂಜರ್ ಕುಟುಂಬ ಸದಸ್ಯರಿಗೆ ಅನುಕಂಪ ಆಧಾರದಲ್ಲಿ ನೌಕರಿ; ಡಿಸಿಎಂ ಕಾರಜೋಳ - Govinda Karjola made meeting

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯ ಮಾಡಿಸುವ ಅಧಿಕಾರಿ, ಗುತ್ತಿಗೆದಾರರ ಮೇಲೆ ಎಂ.ಎಸ್. ಕಾಯ್ದೆ ಅಧಿನಿಯಮ 2013 ರ ಪ್ರಕಾರ ಕಾನೂನು ಕ್ರಮಕೈಗೊಳ್ಳಲು ಕಡ್ಡಾಯವಾಗಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಬೇಕು. 2013 ರಿಂದ ಈವರೆಗೆ 25 ಪ್ರಕರಣಗಳನ್ನು ದಾಖಲಿಸಿ ಒಂದು ಪ್ರಕರಣದಲ್ಲಿ ಶಿಕ್ಷೆಗೆ ಗುರಿಪಡಿಸಲಾಗಿದೆ. 4 ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಕಾರಜೋಳ ಹೇಳಿದರು.

ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
author img

By

Published : Aug 27, 2020, 9:56 PM IST

ಬೆಂಗಳೂರು: ಸ್ಕ್ಯಾವೆಂಜರ್​ಗಳು ಕರ್ತವ್ಯ ನಿರತರಾಗಿದ್ದ ಅವಧಿಯಲ್ಲಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ಇರುವಂತೆ ಅವರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದಡಿ ಸರ್ಕಾರಿ ಉದ್ಯೋಗ ನೀಡಲು ಕ್ರಮಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರ 3ನೇ ರಾಜ್ಯ ಮಟ್ಟದ ಮೇಲ್ವಿಚಾರಣ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದಕ್ಕಾಗಿ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಿಗಳು ನಿರ್ವಹಿಸುವ ಕಾರ್ಯವನ್ನು ಮೇಲ್ವಿಚಾರಣೆ ಮಾಡಿ ಸೂಕ್ತ ಸಲಹೆಗಳನ್ನು ನೀಡಬೇಕು. ಈ ಕಾಯ್ದೆಯನ್ವಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ 30,034 ಅನೈರ್ಮಲ್ಯ ಶೌಚಾಲಯಗಳನ್ನು ನೈರ್ಮಲ್ಯ ಶೌಚಾಲಯಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿರುವ 12 ಜಿಲ್ಲೆಗಳ ವಿಶೇಷ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದ್ದು, ನಗರ ಪ್ರದೇಶಗಳಲ್ಲಿ ಪೂರ್ಣಗೊಳಿಸಲು ನಿರ್ದೇಶಿಸಿದರು. ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳ/ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್​ಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದ್ದು, ಈ ನಿಗಮದ ಮೂಲಕ 3210 ಮ್ಯಾನ್ಯುಯಲ್ ಸ್ಕಾವೆಂಜರ್​ಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸಲು ನಿರ್ದೇಶನ ನೀಡಿದರು.

ಈ ಅಧಿನಿಯಮವನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸಂಬಂಧಪಟ್ಟ ಎಲ್ಲಾ ಏಜೆನ್ಸಿಗಳ ಕಾರ್ಯಗಳನ್ನು ಸಮನ್ವಯಗೊಳಿಸಿ ಅದರ ಜೊತೆಗೆ ಪ್ರಾಸಂಗಿಕವಾಗಿ ಸಂಬಂಧಪಟ್ಟ ಇತರ ಎಲ್ಲಾ ವಿಷಯಗಳ ಮೇಲ್ವಿಚಾರಣೆ ಮಾಡಬೇಕು. ಪೌರ ಕಾರ್ಮಿಕರು, ಸ್ವೀಪರ್​ಗಳ ಬ್ಯಾಕ್ ಲಾಗ್ ನೇಮಕಾತಿಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಪೌರಕಾರ್ಮಿಕರ ಆಟೋ ಟಿಪ್ಪರ್​ಗಳನ್ನು ಕಸ ವಿಲೇವಾರಿ ಮತ್ತಿತರ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶೇ. 5 ರಷ್ಟು ಸೀಟುಗಳನ್ನು ಮೀಸಲಿಟ್ಟು, ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕ್ಯಾವೆಂಜರರ್​ಗಳ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯ ಮಾಡಿಸುವ ಅಧಿಕಾರಿ, ಗುತ್ತಿಗೆದಾರರ ಮೇಲೆ ಎಂ.ಎಸ್. ಕಾಯ್ದೆ ಅಧಿನಿಯಮ 2013 ರ ಪ್ರಕಾರ ಕಾನೂನು ಕ್ರಮಕೈಗೊಳ್ಳಲು ಕಡ್ಡಾಯವಾಗಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಬೇಕು. 2013 ರಿಂದ ಈವರೆಗೆ 25 ಪ್ರಕರಣಗಳನ್ನು ದಾಖಲಿಸಿ ಒಂದು ಪ್ರಕರಣದಲ್ಲಿ ಶಿಕ್ಷೆಗೆ ಗುರಿಪಡಿಸಲಾಗಿದೆ. 4 ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯ ನಿರ್ವಹಿಸುವಾಗ ಮೃತಪಟ್ಟ 83 ಕಾರ್ಮಿಕರ ಕುಟುಂಬದ ಅವಲಂಬಿತರಿಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ 10 ಲಕ್ಷ ರೂ.ಗಳನ್ನು ಸಂಬಂಧಟ್ಟವರಿಗೆ ಮಂಜೂರು ಮಾಡಿಸಿಕೊಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಬಿಡಬ್ಲ್ಯೂ ಎಸ್‍ ಎಸ್‍ಬಿ ಸಹಯೋಗದೊಂದಿಗೆ 170 ಜನರಿಗೆ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಖಾಸಗಿ ಸ್ವಚ್ಛತಾ ನೈರ್ಮಲೀಕರಣ ಸ್ವಚ್ಛತಾಗಾರರಿಗೆ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯವನ್ನು ತಂತ್ರಜ್ಞಾನವುಳ್ಳ ಯಂತ್ರೋಪಕರಣಗಳ ಸಹಾಯದಿಂದ ಸ್ವಚ್ಛಗೊಳಿಸುವ ಬಗ್ಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಕಾನೂನು ಶಾಲೆಯ ಮೂಲಕ ರಾಜ್ಯದಲ್ಲಿ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್​ಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯನಿರ್ವಹಿಸುವಾಗ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಭಿತರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಲು ಕ್ರಮವಹಿಸಲಾಗಿದೆ. ಹೈದ್ರಾಬಾದ್ ಮತ್ತು ಕೇರಳ ರಾಜ್ಯಗಳಲ್ಲಿ ಮ್ಯಾನ್ ಹೋಲ್, ಸೆಪ್ಟಿಕ್ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಅಳವಡಿಸಿಕೊಂಡಿರುವ ತಂತ್ರಜ್ಞಾನವುಳ್ಳ ಯಂತ್ರೋಪಕರಣಗಳನ್ನು ರಾಜ್ಯದಲ್ಲೂ ಸಹ ಅಳವಡಿಸಿಕೊಳ್ಳುವ ಬಗ್ಗೆ ಯೋಚಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ ಅವಲಂಬಿತರಿಗೆ 30 ರೂ. ಲಕ್ಷ ಕೂಡಲೇ ಪರಿಹಾರ ನೀಡಬೇಕು. ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದಡಿ ಒಬ್ಬರಿಗೆ ನೌಕರಿ ನೀಡಬೇಕು. ಪೌರಕಾರ್ಮಿಕರು ಕೋವಿಡ್ ಸೋಂಕಿತರಾದರೆ ಕ್ವಾರಂಟೈನ್ ಅವಧಿಯಲ್ಲಿ ಸಂಬಳ ನೀಡಬೇಕು. ಆರೋಗ್ಯ ಸುಧಾರಣೆಯಾದ ನಂತರ ಅವರನ್ನು ನೌಕರಿಯಲ್ಲಿ ಮುಂದುವರೆಸಬೇಕು. ಸ್ಯಾನಿಟೈಜರ್, ಮಾಸ್ಕ್, ಗ್ಲೌಸ್ ಸೇರಿದಂತೆ ಅಗತ್ಯ ಪೂರಕ ಪರಿಕರಗಳನ್ನು ನೀಡಬೇಕು ಎಂದು ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಎಸ್‍ಸಿಪಿ, ಟಿಎಸ್​ಪಿ ಯೋಜನೆಯ ಸಲಹೆಗಾರ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮನಿ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಆಯೋಗ, ಸಮಿತಿ ಸದಸ್ಯರು, ವಿವಿಧ ಪದಾಧಿಕಾರಿಗಳು, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.