ETV Bharat / state

ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಕಾಮಗಾರಿ ಮುಗಿಸಿ: ಅಧಿಕಾರಿಗಳಿಗೆ ಡಿಸಿಎಂ ಖಡಕ್​​ ವಾರ್ನಿಂಗ್​ - ಸಮಾಜ ಕಲ್ಯಾಣ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ ಸುದ್ದಿ

ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಯಾವುದೇ ಅನುದಾನ ಲ್ಯಾಪ್ಸ್​​ ಆಗದಂತೆ ಕ್ರಮಕೈಗೊಳ್ಳುವಂತೆ ಡಿಸಿಎಂ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

dcm govinda karjola meeting in vikasasoudha
ಅಧಿಕಾರಿಗಳಿಗೆ ಡಿಸಿಎಂ ಸೂಚನೆ
author img

By

Published : Jan 29, 2020, 11:51 PM IST

ಬೆಂಗಳೂರು: ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆಯ ಎಲ್ಲ ಕಾರ್ಯಕ್ರಮ ಹಾಗೂ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ, ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ನಡೆದ ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಸಾಲಿನ ಎಲ್ಲ ಕಾರ್ಯಕ್ರಮ/ ಕಾಮಗಾರಿಗಳನ್ನು ಪೂರ್ಣಗೊಳಿಸಿದರೆ ಮುಂದಿನ ಆಯವ್ಯದಲ್ಲಿ ಇನ್ನೂ ಹೆಚ್ಚು ಕಾರ್ಯಕ್ರಮ/ಕಾಮಗಾರಿಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಗುತ್ತದೆ. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

dcm govinda karjola meeting in vikasasoudha
ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ಪ್ರಸಕ್ತ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯು ವಿವಿಧ ಹೆದ್ದಾರಿ ಯೋಜನೆಗಳಡಿ 2015 ಕೋಟಿ ರೂ. ವೆಚ್ಚದಲ್ಲಿ 901 ಕಿ.ಮೀ. ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸಿದೆ. ವಿವಿಧ ಯೋಜನೆಗಳಡಿ 2,578 ಕೋಟಿ ರೂ. ವೆಚ್ಚದಲ್ಲಿ 4769 ಕಿ.ಮೀ. ಜಿಲ್ಲಾ ಮುಖ್ಯರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೋನಿಗಳಲ್ಲಿ 1140 ಕಿ.ಮೀ. ಉದ್ದದ ಸಿಸಿ ರಸ್ತೆಗಳನ್ನು 1331 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸಿಎಂ ಜಿ ಆರ್ ಯೋಜನೆಯಡಿ 566 ಕಿ.ಮೀ. ಉದ್ದದ ಜಿಲ್ಲಾ ಮುಖ್ಯರಸ್ತೆಗಳನ್ನು 323 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇನ್ನು 320 ಸೇತುವೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ವಿವಿಧ ಇಲಾಖೆಗಳ 145 ಕಟ್ಟಡ ಕಾಮಗಾರಿಗಳನ್ನು 425 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ಮತ್ತು ಸೇತುವೆಗಳ ಪುನಶ್ಚೇತನ ಹಾಗೂ ದುರಸ್ತಿಗಾಗಿ 500 ಕೋಟಿ ರೂ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ 1,816 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಸ್ತೆ ಸುರಕ್ಷತಾ ಕಾರ್ಯಕ್ರಮಗಳಡಿ 353 ಕಪ್ಪು ಸ್ಥಳಗಳನ್ನು ನಿವಾರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಲೆಗಳ ಬದಿಯಲ್ಲಿ ರಸ್ತೆ ಸುರಕ್ಷತೆ ಹಾಗೂ ಬ್ಯಾರಿಕೇಡಿಂಗ್ ಕಾಮಗಾರಿಗಳನ್ನು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಬೆಂಗಳೂರು ಸುತ್ತ ಮುತ್ತಲಿನ 158 ಕಿ.ಮೀ. ಉದ್ದದ ನಾಲ್ಕು ರಸ್ತೆಗಳನ್ನು 2,095 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಪಡಿಸುವ ಕಾಮಗಾರಿಗಳು ಪ್ರಗತಿಯ ಹಂತದಲ್ಲಿವೆ ಎಂದು ಡಿಸಿಎಂ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಗಂಗಕಲ್ಯಾಣ ಯೋಜನೆಯಡಿ 1,7945 ಪರಿಶಿಷ್ಟ ಜಾತಿ ರೈತರಿಗೆ ಹಾಗೂ 10,000 ಪರಿಶಿಷ್ಟ ಪಂಗಡದ ರೈತರಿಗೆ ಕೊಳಗೆ ಬಾವಿಗಳನ್ನು ಕೊರೆಯುವ ಕಾಮಗಾರಿಯು ಪ್ರಗತಿಯಲ್ಲಿದೆ. 600 ಕೋಟಿ ರೂ ವೆಚ್ಚದಲ್ಲಿ 196 ವಸತಿ ಶಾಲೆಗಳ ಕಟ್ಟಡಗಳನ್ನು ಪ್ರಾರಂಭಿಸಲಾಗಿದ್ದು, ಈಗಾಗಲೇ 31 ಶಾಲೆಗಳ ಕಟ್ಟಡವನ್ನು ಪೂರ್ಣಗೊಳಿಸಲಾಗಿದೆ ಎಂದರು.

ಭೂ ಒಡೆತನ ಯೋಜನೆಯಡಿ ಭೂರಹಿತ ಕೃಷಿ ಕಾರ್ಮಿಕರಾದ ಪರಿಶಿಷ್ಟ ಜಾತಿಯ 1,007 ಫಲಾನುಭವಿಗಳಿಗೆ 1,312 ಎಕರೆ ಜಮೀನನ್ನು 123 ಕೋಟಿ ರೂ. ವೆಚ್ಚದಲ್ಲಿ ಹಾಗೂ ಪರಿಶಿಷ್ಟ ಪಂಗಡದ 390 ಫಲಾನುಭವಿಗಳಿಗೆ 601 ಎಕರೆ ಜಮೀನನ್ನು 41 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ನೀಡಲಾಗಿದೆ. ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದಿಂದ 2,053 ಚರ್ಮ ಕುಶಲಕರ್ಮಿಗಳಿಗೆ ಸಾಲಸೌಲಭ್ಯ ನೀಡಲಾಗಿದೆ. ಎಲ್ಲಾ ಇಲಾಖೆಗಳು, ಸಂಸ್ಥೆಗಳಲ್ಲಿ ಈವರೆಗೆ ಈಗಾಗಲೇ ಗುರುತಿಸಲಾಗಿರುವ 21,376 ಹುದ್ದೆಗಳಲ್ಲಿ 18,703 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಉಳಿದ ಹುದ್ದೆಗಳನ್ನು 4 ತಿಂಗಳೊಳಗೆ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ನಿರುದ್ಯೋಗಿ ಯುವಕ ಯುವತಿಯರಿಗೆ ವಾಹನ ಚಾಲನಾ ತರಬೇತಿಯನ್ನು ನೀಡಲು ಎಸ್ ಆರ್ ಟಿಸಿ ಮೂಲಕ 4 ಚಾಲನಾ ತರಬೇತಿ ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕಾರಜೋಳ ತಿಳಿಸಿದರು. ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗಳ ಸಲಹೆಗಾರರಾದ ವೆಂಕಟಯ್ಯ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.