ETV Bharat / state

ಮೇ.20 ರೊಳಗೆ ಕ್ರಿಯಾ ಯೋಜನೆ ಸಲ್ಲಿಸಿ:  ಅಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸೂಚನೆ - submit SCP-TSP plan

ವಿಕಾಸಸೌಧದಲ್ಲಿಂದು 2020-21 ನೇ ಸಾಲಿನ ಎಸ್‍ಸಿಪಿ ಮತ್ತು ಎಸ್‍ಟಿಪಿ ಕ್ರಿಯಾ ಯೋಜನೆಯ ಕುರಿತು ನೊಡೆಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸಭೆ ನಡೆಸಿದ್ರು. ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದ್ದಾರೆ.

ಡಿಸಿಎಂ ಕಾರಜೋಳ ಸೂಚನೆ
ಡಿಸಿಎಂ ಕಾರಜೋಳ ಸೂಚನೆ
author img

By

Published : May 12, 2020, 6:48 PM IST

ಬೆಂಗಳೂರು : 2020 - 21 ನೇ ಸಾಲಿನ ಎಸ್‍ಸಿಪಿ ಮತ್ತು ಟಿಎಸ್‍ಪಿ ಉಪಯೋಜನೆಯಡಿ ಎಲ್ಲ ಇಲಾಖೆಗಳು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಮೇ. 20ರೊಳಗೆ, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಸಚಿವರಾದ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು 2020-21 ನೇ ಸಾಲಿನ ಎಸ್‍ಸಿಪಿ ಮತ್ತು ಎಸ್‍ಟಿಪಿ ಕ್ರಿಯಾ ಯೋಜನೆಯ ಕುರಿತು ನೊಡೆಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪರಿಶಿಷ್ಟ ಜಾತಿ, ಪಂಗಡ , ಗಿರಿಜನ ಉಪಯೋಜನೆ ಕುರಿತ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾ ಯೋಜನೆಯನ್ನು ಮಂಡಿಸಿ, ಅನುಮೋದನೆ ಪಡೆಯಬೇಕಿದೆ. ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯುಷ್ಮಾನ್​​ ಭಾರತ ಯೋಜನೆಯಡಿ 200 ಕೋಟಿ ರೂ. ಖರ್ಚು ಮಾಡುತ್ತಿದೆ. ಆದರೆ, ಪರಿಶಿಷ್ಟ ಜಾತಿ ಮತ್ತು ವರ್ಗದ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎನ್ನುವುದನ್ನು ಪರಿಶೀಲಿಸಿ ತಲುಪುವಂತೆ ಮಾಡಬೇಕು. ಈ ಯೋಜನೆಯಡಿ ನಿರ್ಮಿಸಲಿರುವ ಆಸ್ಪತ್ರೆ ಕಟ್ಟಡಗಳು ಪರಿಶಿಷ್ಟ ಜಾತಿ ಮತ್ತು ವರ್ಗ ಸಮುದಾಯವು ಹೆಚ್ವಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ನಿರ್ಮಿಸಬೇಕು. ಶುಚಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಅನುದಾನವನ್ನು ಅದೇ ಸಮುದಾಯದ ಏಳಿಗೆಗೆ ಉಪಯೋಗಿಸಬೇಕು. ಕಳೆದ ವರ್ಷ ಅಪೂರ್ಣಗೊಂಡ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ ಗ್ರಾಮಗಳಲ್ಲಿದ್ದಾರೆ. ಅವರೆಲ್ಲರಿಗೂ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡ್​ಗಳನ್ನು ನೀಡಬೇಕು. ಕೃಷಿ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ರೈತರ ಕುರಿತು ಮಾಹಿತಿ ಸಂಗ್ರಹಿಸಿ, ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು. ಗಂಗಾ ಕಲ್ಯಾಣ ಯೋಜನೆಯು ಅತ್ಯುತ್ತಮವಾದ ಯೋಜನೆಯಾಗಿದ್ದು, ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಕ್ರಮಕೈಗೊಳ್ಳಬೇಕು.

ಈ ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ವಸತಿ ಶಾಲೆಗಳ ಆವರಣದಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಅಂತರ ಜಲ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳ ಆವರಣದಲ್ಲಿ ಸಸಿ ನೆಟ್ಟು ವನಸಿರಿಗೂ ಆದ್ಯತೆ ನೀಡಬೇಕು.‌ ಎಲ್ಲ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಮಾಹಿತಿಯನ್ನು ಸಂಗ್ರಹಿಸಬೇಕು. ಯೋಜನೆವಾರು ಫಲಾನುಭವಿಗಳ ವಿವರವನ್ನು ಆ್ಯಪ್​​ನಲ್ಲಿ ಅಪ್​​​ಲೋಡ್ ಮಾಡಬೇಕು. ಬಡತನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು.

ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಸಮುದಾಯದ ಕಲ್ಯಾಣಕ್ಕಾಗಿ ಸ್ವಯಂ ಪ್ರೇರಣೆಯಿಂದ ಅನುಷ್ಟಾನಗೊಳಿಸಿ, ಸಮುದಾಯದ ಏಳಿಗಾಗಿ ಶ್ರಮಿಸಬೇಕು ಎಂದು ಡಿಸಿಎಂ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.