ಬೆಂಗಳೂರು: ಕೋವಿಡ್-19 ಪರಿಸ್ಥಿತಿ ನಿಭಾಯಿಸಲು ಆರೋಗ್ಯ ವಿಭಾಗಗಳ ಅಗತ್ಯತೆ ಕುರಿತು ಡಿಸಿಎಂ ಅಶ್ವತ್ಥ್ ನಾರಾಯಣ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ್ರು.
ಪಾಲಿಕೆ ಆಸ್ಪತ್ರೆಯಲ್ಲಿ ಸದ್ಯ ಟೆಸ್ಟಿಂಗ್, ಕ್ವಾರಂಟೈನ್ ಹಾಗೂ ಪ್ರೈಮರಿ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ, ಕ್ವಾರಂಟೈನ್ ಮಾಡುವ ಕೆಲಸ ನಡೆಯುತ್ತಿದ್ದು, ಅಗತ್ಯವಿರುವಷ್ಟು ಸಿಬ್ಬಂದಿ ಇದ್ದಾರೆ. ಸುರಕ್ಷತಾ ಕಿಟ್, ಸರ್ವೇ, ಸ್ಕ್ರೀನಿಂಗ್ಗೆ ಬೇಕಾದ ಪರಿಕರಗಳು ಇವೆ ಎಂದು ಪಾಲಿಕೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಆಕ್ಸಿಜನ್ ಸಿಲಿಂಡರ್ ಸಿದ್ಧತೆ ಮಾಡಿಕೊಂಡಿರುವಂತೆ ಡಿಸಿಎಂ ಸೂಚನೆ ನೀಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಒಂದು ವರ್ಷದಲ್ಲಿ ಆರೋಗ್ಯ ವಿಭಾಗದಲ್ಲಿ ಏನೆಲ್ಲಾ ಆಗಬೇಕಿದೆ ಎಂಬ ಬಗ್ಗೆ ಚರ್ಚೆ ನಡೆಯಿತು. ಆಸ್ಪತ್ರೆ, ಆರೋಗ್ಯ ವಿಭಾಗಗಕ್ಕೆ ಬೇಕಾದ ಸಾಮಗ್ರಿಗಳ ಬಗ್ಗೆ ಮಾಹಿತಿ ಪಡೆಯಲಾಯಿತು ಎಂದು ತಿಳಿಸಿದರು.