ETV Bharat / state

ಆದ್ಯತೆ ಮೇರೆಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಡಿಸಿಎಂ ಕಾರಜೋಳ ಸೂಚನೆ - ರಾಷ್ಟ್ರೀಯ ಹೆದ್ದಾರಿ ಕಾಮಗಾರಿ

ಹುಬ್ಬಳ್ಳಿ ಧಾರವಾಡ ವೃತ್ತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿರುವ ಡಿಸಿಎಂ ಕಾರಜೋಳ, ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಿಸಿಎಂ ಕಾರಜೋಳ
author img

By

Published : Sep 6, 2019, 9:09 PM IST

ಬೆಂಗಳೂರು: ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು, ಆದ್ಯತೆ ಮೇರೆಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸಂಜೆ ನಡೆದ ಹುಬ್ಬಳ್ಳಿ - ಧಾರವಾಡ ಬೈಪಾಸ್ ಮತ್ತು ಹುಬ್ಬಳ್ಳಿ ಧಾರವಾಡ ವೃತ್ತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಅತಿವೃಷ್ಠಿಯಿಂದ ₹8 ಸಾವಿರ ಕೋಟಿ ವೆಚ್ಚದ ರಸ್ತೆಗಳು ಹಾನಿಗೊಳಗಾಗಿವೆ. ₹ 2,600 ಕೋಟಿ ವೆಚ್ಚದ ಬಿಲ್ಲುಗಳ ಬಾಕಿ ಇವೆ. ಸಿಆರ್​ಎಫ್ ಯೋಜನೆಯಡಿಯಲ್ಲೂ ₹600 ಕೋಟಿ ವೆಚ್ಚದ ಬಿಲ್ಲುಗಳು ಬಾಕಿ ಇವೆ. ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮುದೋಳ್ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ನಗರ ಸಾರಿಗೆ ನಿರ್ದೇಶನಾಲಯದಿಂದ ₹ 5 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹುಬ್ಬಳ್ಳಿ- ಧಾರವಾಡ ನಗರ ವ್ಯಾಪ್ತಿಯ ₹315 ಕೋಟಿ ವೆಚ್ಚದ ರೈಲುನಿಲ್ದಾಣದಿಂದ ವಿಮಾನ ನಿಲ್ದಾಣ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲ ಹಂತದಲ್ಲಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಭಿಯಂತರರು ಉಪಸ್ಥಿತರಿದ್ದರು.

Intro:ಬೆಂಗಳೂರು : ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು, ಆದ್ಯತೆಯ ಮೇರೆಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.Body:ವಿಕಾಸಸೌಧದಲ್ಲಿ ಇಂದು ಸಂಜೆ ನಡೆದ ಹುಬ್ಬಳ್ಳಿ-ಧಾರವಾಡ ಬೈಪಾಸ್ ಮತ್ತು ಹುಬ್ಬಳ್ಳಿ ಧಾರವಾಡ ವೃತ್ತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ ಅತಿವೃಷ್ಠಿಯಿಂದ 8 ಸಾವಿರ ಕೋಟಿ ರೂ. ವೆಚ್ಚದ ರಸ್ತೆಗಳು ಹಾನಿಗೊಳಗಾಗಿವೆ. 2600 ಕೋಟಿ ರೂ. ವೆಚ್ಚದ ಬಿಲ್ಲುಗಳ ಬಾಕಿ ಇವೆ. ಸಿಆರ್ ಎಫ್ ಯೋಜನೆಯಡಿಯಲ್ಲೂ 600 ಕೋಟಿ ರೂ. ವೆಚ್ಚದ ಬಿಲ್ಲುಗಳು ಬಾಕಿ ಇವೆ. ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಮುದೋಳ್ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ನಗರ ಸಾರಿಗೆ ನಿರ್ದೇಶನಾಲಯದಿಂದ 5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ- ಧಾರವಾಡ ನಗರ ವ್ಯಾಪ್ತಿಯ 315 ಕೋಟಿ ರೂ. ವೆಚ್ಚದ ರೈಲುನಿಲ್ದಾಣ ದಿಂದ ವಿಮಾನ ನಿಲ್ದಾಣ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲ ಹಂತದಲ್ಲಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.
ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಭಿಯಂತರರು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.