ETV Bharat / state

ಸಾರಿಗೆ ಇಲಾಖೆಯಲ್ಲಿ ಇಸ್ರೋದ ನಾವಿಕ ತಂತ್ರಜ್ಞಾನ ಬಳಸಲು ಚಿಂತನೆ: ಸವದಿ - ISRO President K Shivan

ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ನಾವಿಕ ತಂತ್ರಜ್ಞಾನ ಬಳಸಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದು, ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Lakshamana savadi
ಲಕ್ಷ್ಮಣ ಸವದಿ
author img

By

Published : Apr 30, 2020, 1:23 PM IST

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಮಾಹಿತಿ ಸೋರಿಕೆ ತಡೆಯುವ ದೃಷ್ಟಿಯಿಂದ ನಾವಿಕ ಎಂಬ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಸ್ರೋ ಬಳಿ ನಾವಿಕ ತಂತ್ರಜ್ಞಾನ ಇದೆ. ನಿನ್ನೆ ಇಸ್ರೋಗೆ ಭೇಟಿ ನೀಡಿ, ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ನಾವಿಕ ತಂತ್ರಜ್ಞಾನ ಬಳಸಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದು, ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ

ಅಲ್ಲದೇ ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುವಂತಹ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯವಾದ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಇಸ್ರೋದ ಮುಖ್ಯಸ್ಥರಲ್ಲಿ ಮನವಿ ಮಾಡಲಾಗಿದೆ ಎಂದರು.

ಅದೇ ರೀತಿ ಸಾರಿಗೆ ಸಂಸ್ಥೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ಒದಗಿಸಲು ಮತ್ತು ಸೋರಿಕೆಯನ್ನು ತಡೆಗಟ್ಟಲು ಇಸ್ರೋದಿಂದ ಮಾರ್ಗದರ್ಶನ ಒದಗಿಸಿಕೊಡಬೇಕೆಂದು ಕೋರಲಾಗಿದ್ದು, ಅದಕ್ಕೆ ಇಸ್ರೋ ಅಧ್ಯಕ್ಷರು ಸ್ಪಂದಿಸಿರುವುದಾಗಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.