ETV Bharat / state

ಇನ್ಮುಂದೆ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸುವಂತೆ ಒತ್ತಡ ಹಾಕ್ತೇವೆ: ಡಿಸಿಎಂ ಸವದಿ

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬಂತಹ ಉದ್ಧಟತನದ ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಕುರಿತಂತೆ ಡಿಸಿಎಂ ಲಕ್ಷ್ಮಣ್​ ಸವದಿ ಅವರು ಪ್ರತಿಕ್ರಿಯಿಸಿದ್ದು, ಇನ್ಮುಂದೆ ಮುಂಬೈ ಅನ್ನು ನಮ್ಮ ಕರ್ನಾಟಕಕ್ಕೆ ಸೇರಿಸುವಂತೆ ಒತ್ತಡ ಹಾಕುವುದಾಗಿ ಹೇಳಿಕೆ ನೀಡಿದ್ದಾರೆ.

ಲಕ್ಷ್ಮಣ ಸವದಿ
DCM Lakshman Savadi
author img

By

Published : Jan 28, 2021, 12:35 PM IST

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಉದ್ಧಟತನದ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮುಂಬೈ ಅನ್ನು ನಮ್ಮ ಕರ್ನಾಟಕಕ್ಕೆ ಸೇರಿಸುವಂತೆ ಒತ್ತಡ ಹಾಕುತ್ತೇವೆ ಎಂದು ಡಿಸಿಎಂ ಲಕ್ಷ್ಮಣ್​ ಸವದಿ ಹೇಳಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ಧವ್​ ಠಾಕ್ರೆ ನೀಡಿರುವ ಹೇಳಿಕೆಗೆ ಡಿಸಿಎಂ ಲಕ್ಷ್ಮಣ್​ ಸವದಿ ಟಾಂಗ್​

ಓದಿ: ಉದ್ಧವ್​ ಠಾಕ್ರೆ 'ಉದ್ಧ'ಟತನ: ಮತ್ತೆ ವಿವಾದಕ್ಕೆ ಎಡೆ ಮಾಡಿಕೊಡುತ್ತಾ 'ಮಹಾ' ಸಿಎಂ ನಡೆ

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿರುವ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಮುಂಬೈ ಕರ್ನಾಟಕ ಭಾಗದಲ್ಲಿ ಅನೇಕ ಜಿಲ್ಲೆಗಳಿವೆ. ಹೈದರಾಬಾದ್ ಮತ್ತು ಮುಂಬೈ ಕರ್ನಾಟಕ ಎರಡು ವಿಭಾಗಗಳಿವೆ. ನಮ್ಮ ಕ್ಷೇತ್ರ ಮುಂಬೈ ಕರ್ನಾಟಕಕ್ಕೆ ಸೇರಲಿದೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ, ಕೇಂದ್ರಾಡಳಿತ ಪ್ರದೇಶ ಅಂತ ಘೋಷಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಡ ತರುತ್ತೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.