ETV Bharat / state

ಮುಷ್ಕರ ಬೆಂಬಲಿಸಿ ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ: ಸಾರಿಗೆ ಸಿಬ್ಬಂದಿಗೆ ಲಕ್ಷ್ಮಣ್​ ಸವದಿ ಎಚ್ಚರಿಕೆ - ಭಾರತ್ ಬಂದ್ ಬೆಂಬಲಿಸಿ ಕೆಲಸಕ್ಕೆ ಗೈರಾದರೆ ಶಿಸ್ತು ಕ್ರಮ

ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಮುಷ್ಕರ ಬೆಂಬಲಿಸಿ ನಾಳೆ ಕೆಲಸಕ್ಕೆ ಗೈರಾದರೆ ಅಂತಹವರ ವೇತನವನ್ನು ಕಡಿತಗೊಳಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ನಿಗಮದ ಅಧಕಾರಿಗಳು ಹಾಗೂ ಸಿಬ್ಬಂದಿಗೆ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಎಚ್ಚರಿಕೆ ರವಾನಿಸಿದ್ದಾರೆ.

Laxman Savadi
ಡಿಸಿಎಂ ಲಕ್ಷ್ಮಣ ಸವದಿ ಸಂದೇಶ
author img

By

Published : Jan 7, 2020, 9:01 PM IST

Updated : Jan 7, 2020, 9:30 PM IST

ಬೆಂಗಳೂರು: ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ್ ಮುಷ್ಕರ ಬೆಂಬಲಿಸಿ ನಾಳೆ ಕೆಲಸಕ್ಕೆ ಗೈರಾದರೆ ಅಂತಹವರ ವೇತನವನ್ನು ಕಡಿತಗೊಳಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ನಿಗಮದ ಅಧಕಾರಿಗಳು ಹಾಗೂ ಸಿಬ್ಬಂದಿಗೆ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಎಚ್ಚರಿಕೆ ರವಾನಿಸಿದ್ದಾರೆ.

ನಮ್ಮ ಸಾರಿಗೆ ನಿಗಮಗಳನ್ನು ಸರ್ಕಾರವು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆ ಎಂದು ಘೋಷಿಸಿದ್ದು, ಆ ಪ್ರಕಾರ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಪ್ರತಿವೋರ್ವ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯವಾಗಿದೆ. ಇದನ್ನು ಉಲ್ಲಂಘಿಸಿ ಕೆಲಸಕ್ಕೆ ಗೈರು ಹಾಜರಾದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾಳೆ ಮುಷ್ಕರ ನಡೆಸುವುದಾಗಿ ತಿಳಿಸಿರುವುದು ನೋವಿನ‌ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಸಾರಿಗೆ ವ್ಯವಸ್ಥೆಯ ಬಹುಮುಖ್ಯ ಅಂಗವಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ನಿಗಮಗಳ ಬಸ್​ಗಳು ಎಂದಿನಂತೆ ಕಾರ್ಯ ನಿರ್ವಹಿಸಬೇಕೆಂದು ಈಗಾಗಲೇ ಸೂಚಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

DCM Lakshmana Savadi
ಡಿಸಿಎಂ ಲಕ್ಷ್ಮಣ ಸವದಿ ಸಂದೇಶ

ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಮುಷ್ಕರದಲ್ಲಿ ಭಾಗವಹಿಸುವ ಯಾರೊಬ್ಬರೂ ಸರ್ಕಾರಿ ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್​ಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ಅಹಿತಕರ ಘಟನೆಗಳಿಗೆ ಯತ್ನಿಸಿದ್ದಲ್ಲಿ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಖಡಕ್​ ಸಂದೇಶ ನೀಡಿದ್ದಾರೆ.

ಈ ರೀತಿಯ ಮುಷ್ಕರಗಳಿಂದಾಗಿ ನಮ್ಮ ಸರ್ಕಾರಿ ಸಂಸ್ಥೆಗಳಿಗೆ‌ ನಷ್ಟವಾಗುವುದಲ್ಲದೇ, ರಾಷ್ಟ್ರದ ಆರ್ಥಿಕ ಚಟುವಟಿಕೆಗಳು ಅಧೋಗತಿಗೆ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಸ್ಥೆಯ ಸಿಬ್ಬಂದಿ ಈ ಬಂದ್​ನಲ್ಲಿ ಭಾಗವಹಿಸಬಾರದು. ಮತ್ತು ಈ ಸಂಸ್ಥೆಗಳ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಬಾರದು ಎಂದು ನಾನು ಅತ್ಯಂತ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

Intro:

ಬೆಂಗಳೂರು: ನಾಳಿನ ಪ್ರತಿಭಟನೆ ಬೆಂಬಲಿ ಕೆಲಸಕ್ಕೆ ಗೈರುಹಾಜರಾದರೆ ಅಂತಹವರ ವೇತನವನ್ನು ಕಡಿತಗೊಳಿಸಿ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ನಿಗಮದ ಅಧಕಾರಿಗಳು ಹಾಗು ಸಿಬ್ಬಂದಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಸಾರಿಗೆ ನಿಗಮಗಳನ್ನು ಸರ್ಕಾರವು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆ ಎಂದು ಘೋಷಿಸಿದ್ದು, ಆ ಪ್ರಕಾರ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯವಾಗಿದೆ. ಇದನ್ನು ಉಲ್ಲಂಘಿಸಿ ಕೆಲಸಕ್ಕೆ ಗೈರುಹಾಜರಾದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ನಾಳೆ ಬಂದ್ - ಮುಷ್ಕರ ನಡೆಸುವುದಾಗಿ ತಿಳಿಸಿರುವುದು ನೋವಿನ‌ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಸಾರಿಗೆ ವ್ಯವಸ್ಥೆಯ ಬಹುಮುಖ್ಯ ಅಂಗವಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ನಿಗಮಗಳ ಬಸ್ಸುಗಳು ಎಂದಿನಂತೆ ಕಾರ್ಯ ನಿರ್ವಹಿಸಬೇಕೆಂದು ಈಗಾಗಲೇ ಸೂಚಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ, ಆದ್ದರಿಂದ ಬಂದ್ -ಮುಷ್ಕರದಲ್ಲಿ ಭಾಗವಹಿಸುವ ಯಾರೊಬ್ಬರೂ ಸರ್ಕಾರಿ
ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್ಸುಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ಅಹಿತಕರ ಘಟನೆಗಳಿಗೆ ಯತ್ನಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ರೀತಿಯ ಬಂದ್ ಗಳಿಂದಾಗಿ ನಮ್ಮ ಸರ್ಕಾರಿ ಸಂಸ್ಥೆಗಳಿಗೆ‌ ನಷ್ಟವಾಗುವುದಲ್ಲದೇ ರಾಷ್ಟ್ರದ ಆರ್ಥಿಕ ಚಟುವಟಿಕೆಗಳು ಅಧೋಗತಿಗೆ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಕೆಎಸ್ಸಾರ್ಟಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಈ ಬಂದ್ ನಲ್ಲಿ ಭಾಗವಹಿಸಬಾರದು ಮತ್ತು ಈ ಸಂಸ್ಥೆಗಳ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಬಾರದು ಎಂದು ನಾನು ಅತ್ಯಂತ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.
Body:.Conclusion:
Last Updated : Jan 7, 2020, 9:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.