ಬೆಂಗಳೂರು: ನನ್ನನ್ನು ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿ ಮಾಡಿದ್ದಕ್ಕೆ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ವಿಧಾನಸೌಧದಲ್ಲಿ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಕಳೆದ ಐದು ತಿಂಗಳಿಂದ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದೇನೆ. ಮೇಲ್ಮನೆ ಅಥವಾ ಕೆಳಮನೆ ಸದಸ್ಯರಾಗಬೇಕಾದ ಅನಿವಾರ್ಯತೆ ಇತ್ತು. ಪಕ್ಷ ಅದಕ್ಕೆ ಅವಕಾಶ ಮಾಡಿ ಕೊಟ್ಟಿದೆ. ಹಾಗಾಗಿ ನಾಮ ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಎಲ್ಲಾ ಬಿಜೆಪಿ ಸದಸ್ಯರು ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರೂ ಬೆಂಬಲ ನೀಡುವ ವಿಶ್ವಾಸವಿದೆ. ಅವಿರೋಧ ಆಯ್ಕೆ ಆಗುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಯಾವುದೇ ಸಂಖ್ಯೆ ಹೇಳಿಲ್ಲ. ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತ್ರ ಹೇಳಿದ್ದಾರೆ. ಆದರೆ ಮಾಧ್ಯಮಗಳಲ್ಲಿ 10+ 3 ಎಂದು ಹೇಳುತ್ತಿದ್ದಾರೆ. ಇದಕ್ಕೆಲ್ಲಾ ನಾಳೆ ಬೆಳಗ್ಗೆ ಉತ್ತರ ಸಿಗಲಿದೆ ಎಂದರು.