ETV Bharat / state

ಬೇಡಿಕೆ ಆಲಿಸಲು ಸಿದ್ಧ, ಮುಷ್ಕರ ನಿಲ್ಲಿಸುವಂತೆ ಸಾರಿಗೆ ನೌಕರರಿಗೆ ಡಿಸಿಎಂ ಸವದಿ ಮನವಿ

ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರ ಪ್ರತಿಭಟನೆಯಿಂದ ಜನ ಸಾಮಾನ್ಯರಿಗೆ ತೊಂದರೆ ಆಗುವುದು ಬೇಡ. ಕೋವಿಡ್ ಸಮಯದಲ್ಲಿ ಪ್ರತಿಭಟನೆ ಮಾಡುವುದು ಸಲ್ಲದು. ನಿಮ್ಮ ಬೇಡಿಕೆ ಬಗ್ಗೆ ಸರ್ಕಾರ ಚರ್ಚೆ ಮಾಡುತ್ತದೆ. ಧರಣಿ ವಾಪಸ್ ಪಡೆದು ಕೆಲಸಕ್ಕೆ ಹಾಜರಾಗಿ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಮನವಿ ಮಾಡಿದರು.

dcm laxman savadi
ಡಿಸಿಎಂ ಲಕ್ಷ್ಮಣ ಸವದಿ
author img

By

Published : Dec 11, 2020, 3:55 AM IST

ಬೆಂಗಳೂರು: ನಿಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ. ಕೋವಿಡ್ ಸಂದರ್ಭದಲ್ಲಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಿ ಆಗುವಂತೆ ಡಿಸಿಎಂ ಲಕ್ಷ್ಮಣ ಸವದಿ ಅವರು ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರಿಗೆ ಮನವಿ ಮಾಡಿದರು.

ಕೋವಿಡ್ ಸಂದರ್ಭದಲ್ಲಿ ಪ್ರತಿಭಟನೆ ಬೇಡ. ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ‌ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ನಾಲ್ಕು ನಿಗಮಗಳ ನೌಕರರಿಗೂ ಮನವಿ ಮಾಡಿದ್ದು, ಜನತೆಗೆ ಯಾವುದೇ ತೊಂದರೆ ಆಗಬಾರದು ಎಂದು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಹೇಳಿದರು.

ನೌಕರರ ಇಂದಿನ ಪ್ರತಿಭಟನೆಯಿಂದ ಸಂಚಾರದಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ: ಕೆಎಸ್‌ಆರ್‌ಟಿಸಿ ಸ್ಪಷ್ಟನೆ

ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರ ಪ್ರತಿಭಟನೆಯಿಂದ ಜನ ಸಾಮಾನ್ಯರಿಗೆ ತೊಂದರೆ ಆಗುವುದು ಬೇಡ. ಕೋವಿಡ್ ಸಮಯದಲ್ಲಿ ಪ್ರತಿಭಟನೆ ಮಾಡುವುದು ಸಲ್ಲದು. ನಿಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ಚರ್ಚೆ ಮಾಡುತ್ತದೆ. ಧರಣಿ ವಾಪಸ್ ಪಡೆದು ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.

ಸಾರಿಗೆ ನೌಕರರು ಧರಣಿ ನಡೆಸಿದರೂ ಜನರ ಸಂಚಾರಕ್ಕೆ ಸಮಸ್ಯೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.