ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ವಿಕಾಸಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಸಭೆಯಲ್ಲಿ ಸಿಐಟಿಯು, ಎಐಟಿಸಿ, ನೌಕರರ ಮಹಾ ಮಂಡಳ, ಬಿಎಂಎಸ್ ಪ್ರತಿನಿಧಿಗಳು, ನಾಲ್ಕು ಸಾರಿಗೆ ನಿಗಮಗಳ ಎಂಡಿಗಳು ಭಾಗವಹಿಸಿದ್ದಾರೆ. ಲಾಕ್‌ಡೌನ್ ಹಿನ್ನೆಲೆ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಸಂದರ್ಭ ಸಾರಿಗೆ ನೌಕರರನ್ನು ಸರ್ಕಾರಿ ಉದ್ಯೋಗಿಗಳಾಗಿ ಮಾಡಲು ಅಸಾಧ್ಯ.
ಇದರಿಂದ ಸರ್ಕಾರದ ಮೇಲೆ ಭಾರಿ ಹೊರೆ ಬೀಳಲಿದೆ. ಹಾಗಾಗಿ ಅವರ ಪ್ರಮುಖ ಬೇಡಿಕೆಯಾದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ ಎಂಬುದನ್ನು ನೌಕರರ ಒಕ್ಕೂಟಕ್ಕೆ ಮನವರಿಕೆ ಮಾಡುತ್ತಿದ್ದಾರೆ.
ಇದನ್ನೂ ಓದಿ:ಬಸ್ಗಳಿಲ್ಲದೆ ಪರದಾಡುತ್ತಿರುವ ಪ್ರಯಾಣಿಕರು : ಸುಲಿಗೆ ಮಾಡ್ತಿರುವ ಖಾಸಗಿ ವಾಹನಗಳು
ಕೋವಿಡ್ ಕರ್ತವ್ಯ ವೇಳೆ ಮೃತಪಟ್ಟ ಸಾರಿಗೆ ನೌಕರರಿಗೆ 30 ಲಕ್ಷ ರೂ. ಪರಿಹಾರ ನೀಡುವ ಬೇಡಿಕೆ ಪರಿಗಣಿಸಬಹುದು. ಉಳಿದಂತೆ ನೌಕರರ ಇತರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇವೆ ಎಂದು ಸಾರಿಗೆ ನೌಕರರ ಸಂಘಟನೆಗಳಿಗೆ ಸಚಿವರು ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ.