ETV Bharat / state

ರಾಜ್ಯದಲ್ಲೂ ಡಿಆರ್​ಡಿಒ ವತಿಯಿಂದ ಕೋವಿಡ್ ಕೇಂದ್ರ ಪ್ರಾರಂಭಿಸಿ : ರಕ್ಷಣಾ ಸಚಿವರಿಗೆ ಡಿಸಿಎಂ ಸವದಿ ಪತ್ರ

author img

By

Published : May 18, 2021, 1:05 PM IST

ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ..

DCM Savadi letter to Union defense minister Rajanath Singh
ರಕ್ಷಣಾ ಸಚಿವರಿಗೆ ಡಿಸಿಎಂ ಸವದಿ ಪತ್ರ

ಬೆಂಗಳೂರು : ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್​ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ.

ದೆಹಲಿ, ವಾರಣಾಸಿ, ಅಹಮದಾಬಾದ್ ಮತ್ತು ಲಖನೌನಲ್ಲಿ ಡಿಆರ್​ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರದ ರಕ್ಷಣಾ ಸಚಿವರನ್ನು ಸವದಿ ಅಭಿನಂದಿಸಿದ್ದಾರೆ.

ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರ ಮೇಲೆ ಒತ್ತಡವೂ ತೀವ್ರವಾಗಿದೆ.

ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅನಾಥ ಮಗುವಿಗೆ ಭಾಗ್ಯಲಕ್ಷ್ಮಿ ಮಾದರಿ ಯೋಜನೆ ಜಾರಿ ಬಗ್ಗೆ ಚಿಂತನೆ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳು ಈಗ ಲಭ್ಯವಿದೆ. ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಸವದಿ ರಕ್ಷಣಾ ಸಚಿವರಲ್ಲಿ ಕೋರಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.