ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ ಎಂಬುದು ನಿರೀಕ್ಷಿತ. ಹೀಗಾಗಿ ಅಗತ್ಯ ಪೂರ್ವಭಾವಿ ತಯಾರಿಯನ್ನು ಸರ್ಕಾರ ಮಾಡಿಕೊಂಡಿದೆ ಎಂದು ಹೇಳಿದರು.
ಮಳೆಯಿಂದಾಗುವ ಅನಾಹುತದ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಎಲ್ಲಾ ಸೂಚನೆಗಳನ್ನು ನೀಡುತ್ತಿದ್ದಾರೆ. ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.