ETV Bharat / state

ಏನನ್ನೂ ತಿಳಿದುಕೊಳ್ಳದೇ ಕೋರ್ಟ್​​ ವಿಚಾರದ ಬಗ್ಗೆ ಮಾತನಾಡಲ್ಲ: ಡಿ ಕೆ ಶಿವಕುಮಾರ್​

ನಿಗಮ ಮಂಡಳಿ ನೇಮಕಾತಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡುವ ಸಲುವಾಗಿ ಸಿದ್ದರಾಮಯ್ಯ, ಸುರ್ಜೆವಾಲ ಸೇರಿ ಮಾತನಾಡಿದ್ದು, ಮುಂದಿನ ಪಟ್ಟಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

DCM DK Shivakumar spoke.
ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.
author img

By ETV Bharat Karnataka Team

Published : Nov 29, 2023, 4:46 PM IST

Updated : Nov 29, 2023, 5:01 PM IST

ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದವರ ಜೊತೆ ಮಾತನಾಡಿದರು.

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿ ಇಲ್ಲ. ನ್ಯಾಯಾಲಯದ ವಿಚಾರದಲ್ಲಿ ವಕೀಲರಿಂದ ಸರಿಯಾದ ಮಾಹಿತಿ ಇಲ್ಲದೇ ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ಹೈಕೋರ್ಟ್ ತೀರ್ಪಿನ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ವಕೀಲರು ಮಾಹಿತಿ ನೀಡದ ಹೊರತು ಮಾತನಾಡಲ್ಲ: ಅರಮನೆ ಆವರಣದಲ್ಲಿ ನಡೆದ ಟೆಕ್ ಸಮಿಟ್ ಕಾರ್ಯಕ್ರಮದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಆದೇಶ ನೀಡಿದೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸದ್ಯ ನಾನು ಟೆಕ್ ಸಮಿಟ್​​​ನಲ್ಲಿ ಭಾಗವಹಿಸಲು ಬಂದಿದ್ದೇನೆ. ಹಾಗಾಗಿ ನ್ಯಾಯಾಲಯದಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ಗೊತ್ತಿಲ್ಲದೇ ಮಾತನಾಡುವುದು ಸರಿಯಲ್ಲ. ವಕೀಲರು ನಮಗೆ ಮಾಹಿತಿ ನೀಡದ ಹೊರತಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ನಾನೇನು ತಪ್ಪು ಮಾಡಿಲ್ಲ. ಎಲ್ಲ ಬೆಳವಣಿಗೆಗಳನ್ನು ನೀವು (ಮಾಧ್ಯಮದವರು) ಜನರು ನೋಡಿದ್ದಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತ ಇದ್ದಾನೆ, ಈ ನಾಡಿನ ಜನರಿದ್ದಾರೆ. ನನಗೆ ತೊಂದರೆ ಕೊಟ್ಟ ಕಾರಣಕ್ಕೆ ಈ ರಾಜ್ಯದಲ್ಲಿ ಏನಾಯಿತು ಎಂದು ತಿಳಿದಿದೆ. ನನ್ನ ಪರವಾಗಿ ನಿಂತವರು ಹಾಗೂ ಪ್ರಾರ್ಥನೆ ಮಾಡಿದ ಜನರಿಗೆ ಕೋಟಿ ನಮಸ್ಕಾರ ಎಂದರು.

ಯತ್ನಾಳ್ ಮೇಲ್ಮನವಿ: ನನ್ನ ಪ್ರಕರಣದಲ್ಲಿ ಯತ್ನಾಳ್ ಮೇಲ್ಮನವಿ ಸಲ್ಲಿಸಿದ್ದಾರೆ, ಎಲ್ಲರ ಆಚಾರ ವಿಚಾರ, ಭಾವನೆ ಮತ್ತು ಅವರುಗಳ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಬಹಳ ನಮ್ರತೆಯಿಂದ ಗಮನಿಸಿದ್ದೇನೆ. ಸೂಕ್ತ ಕಾಲದಲ್ಲಿ ಇದಕ್ಕೆಲ್ಲ ಉತ್ತರ ಕೊಡುತ್ತೇನೆ.

ನಿಗಮ ಮಂಡಳಿ ನೇಮಕ ಪಟ್ಟಿ : ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಮೊದಲ ಪಟ್ಟಿಯಲ್ಲಿ ಫಸ್ಟ್​ ಟೈಂ ಶಾಸಕರಾದವರಿಗೆ ಅವಕಾಶ ನೀಡಿಲ್ಲ. ಮುಂದಿನ ಪಟ್ಟಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲು ತೀರ್ಮಾನವಾಗಿದೆ. ನಿಗಮ ಮಂಡಳಿ ನೇಮಕಾತಿ, ಕಾರ್ಯಕರ್ತರಿಗೂ ಅವಕಾಶ ನೀಡುವ ಸಂಬಂಧ ನಾನು ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಮಾತನಾಡಿದ್ದೇವೆ. ನಾವು ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದು, ಅವರು ಅದನ್ನು ದೆಹಲಿಗೆ ತೆಗದುಕೊಂಡು ಹೋಗಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದ ನಂತರ ಹೈಕಮಾಂಡ್ ನಾಯಕರು ನಮ್ಮ ಪಟ್ಟಿ ಪರಿಶೀಲಿಸಿ ಎರಡ್ಮೂರು ದಿನಗಳಲ್ಲಿ ಅಂತಿಮ ಪಟ್ಟಿ ರವಾನಿಸುತ್ತಾರೆ. ನಾವು ನೀಡಿದ ಪಟ್ಟಿಯನ್ನು ಪಕ್ಷದ ಹೈಕಮಾಂಡ್ ಪರಿಶೀಲಿಸಬೇಕು. ಏಕೆಂದರೆ ಚುನಾವಣೆ ಹೊತ್ತಿನಲ್ಲಿ ಒಂದಿಷ್ಟು ಮಾತುಗಳನ್ನು ಕೊಟ್ಟಿರುತ್ತಾರೆ. ಹೈಕಮಾಂಡ್ ಯಾರಿಗೆ ಏನು ಸೂಚನೆ ನೀಡಿತ್ತೋ ಅದರ ಪ್ರಕಾರ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದು ತಿಳಿಸಿದರು.

ಶಾಸಕರಿಗೆ ದನಿ ಎತ್ತಲು ಅವಕಾಶವಿದೆ: ಬಿ.ಆರ್. ಪಾಟೀಲ್ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಪತ್ರ ಬರೆದಿರುವ ವಿಚಾರ ತಿಳಿದಿಲ್ಲ. ಅದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಮಾಹಿತಿ ಗೊತ್ತಿಲ್ಲದೇ ಮಾತನಾಡಲು ನನಗೆ ಇಷ್ಟವಿಲ್ಲ. ಯಾವುದೇ ಶಾಸಕರಾಗಲಿ ಮಾತನಾಡಲು, ದನಿ ಎತ್ತಲು ಅವಕಾಶವಿದೆ. ಸದನದಲ್ಲಿ ಮಾತನಾಡುವಾಗ ತನಿಖೆಯಾಗಲಿ ಎಂದು ಹೇಳಿರಬಹುದು.

ಕಂದಾಯ ಸಚಿವ ಕೃಷ್ಣಬೈರೇಗೌಡರು ಈಗಾಗಲೇ ತನಿಖೆ ಮಾಡಲು ಸೂಕ್ತ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ, ತನಿಖೆಗಳು ನಡೆಯುತ್ತಿರುವ ವಿಚಾರ ನನಗೂ ಗೊತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಮಾತನಾಡುತ್ತೇನೆ. ಬಿ.ಆರ್.ಪಾಟೀಲ್ ಅವರನ್ನು ಕರೆದು ಖಂಡಿತಾ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ ಪಾಟೀಲ್ ಅವರು ರಾಜ್ಯದಲ್ಲಿ ಬಂಡವಾಳ ಆಕರ್ಷಿಸಿ ರಾಜ್ಯದ ಯುವಕರಿಗೆ ಉದ್ಯೋಗ ಸೃಷ್ಟಿ, ರಾಜ್ಯವನ್ನು ಸಮೃದ್ಧಿಗೊಳಿಸಲು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅವರಿಗೆ ಬೆಂಬಲವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ನಮ್ಮ ಸರ್ಕಾರ ಬಿಟಿ ನೀತಿ ಹಾಗೂ ಅನ್ವೇಷಣಾ ನೀತಿಗಳನ್ನು ಇಂದು ಪರಿಚಯಿಸಿದೆ. ಇಂದು ಸಾವಿರಾರು ಮಂದಿ ವಿದೇಶಿ ಬಂಡವಾಳ ಹೂಡಿಕೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದರು.

ಇದನ್ನೂಓದಿ:ಸಿಬಿಐಗೆ ತನಿಖೆಗೆ ನೀಡಿದ್ದ ಕ್ರಮವನ್ನು ಪ್ರಶ್ನಿಸಿದ್ದ ಮೇಲ್ಮನವಿ ಹಿಂಪಡೆದ ಡಿಕೆಶಿ; ಅನುಮತಿ ನೀಡಿದ ಹೈಕೋರ್ಟ್​

Last Updated : Nov 29, 2023, 5:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.