ETV Bharat / state

ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಆಸ್ತಿ ತೆರಿಗೆ ವಿನಾಯಿತಿ ಕುರಿತು ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುತ್ತಿದೆ ಎಂದು ಡಿಸಿಎಂ ಹೇಳಿದ್ದಾರೆ.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ
ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ
author img

By ETV Bharat Karnataka Team

Published : Jan 16, 2024, 7:04 PM IST

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಕುರಿತ ನೋಟಿಸ್​, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30" x 40" ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗಾಂಧಿನಗರದ ಶಿರೂರ್ ಉದ್ಯಾನದಲ್ಲಿ ಮಂಗಳವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟಿಸ್​ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲಾ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

2020ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕುರಿತ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಈಗ ಆ ಕಾನೂನಿಗೆ ತಿದ್ದುಪಡಿ ತರಬೇಕಿದೆ. ಕೆಲ ದಿನಗಳಲ್ಲಿ ಈ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ನಮ್ಮ ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡಲಾಗುವುದು. ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಯಾರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೋ, ಅವರಿಂದ ಅಷ್ಟು ಕಟ್ಟಿಸಿಕೊಳ್ಳಿ. ಯಾರಾದರೂ ಹೆಚ್ಚುವರಿ ತೆರಿಗೆ ಪಾವತಿ ಮಾಡಿದ್ದರೆ ಮುಂದಿನ ವರ್ಷ ಅದನ್ನು ಸರಿದೂಗಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ತಳ್ಳುವ ಗಾಡಿಯಲ್ಲಿ ಮಾತ್ರ ಬೀದಿ ವ್ಯಾಪಾರಕ್ಕೆ ಅವಕಾಶ: ಶಾಸಕ ಅಶ್ವತ್ ನಾರಾಯಣ ಅವರು ಆಸ್ತಿ ತೆರಿಗೆ ಮತ್ತು ಪಾದಚಾರಿ ಮಾರ್ಗ ವಿಚಾರವಾಗಿ ಗಮನ ಸೆಳೆದರು. ಈ ವಿಚಾರವಾಗಿ ಹೈಕೋರ್ಟ್ ಆದೇಶ ಕೂಡ ಬಂದಿದೆ. ಆ ಆದೇಶ ಪಾಲನೆ ಆಗದಿದ್ದರೆ ಪಾಲಿಕೆ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು. ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಎಂದು ಹೇಳುವುದಿಲ್ಲ. ನೀವು ನೋಂದಣಿ ಮಾಡಿಸಿಕೊಂಡು, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು. ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕಿಕೊಂಡರೆ ಜನ ಸಾಮಾನ್ಯರು ಎಲ್ಲಿ ಓಡಾಡಬೇಕು? ಎಂದು ಪ್ರಶ್ನಿಸಿದರು.

ಅನಧಿಕೃತ ಫ್ಲೆಕ್ಸ್ ವಿರುದ್ಧ ಪ್ರಕರಣ: ನಾವು ಅನಧಿಕೃತ ಜಾಹೀರಾತು ಫ್ಲೆಕ್ಸ್​ಗಳ ನಿಷೇಧ ಮಾಡಿದ್ದೇವೆ. ನನ್ನ ಮನೆ ಬಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಹಬ್ಬ, ಹೊಸ ವರ್ಷದ ಶುಭಾಶಯಗಳ ಫ್ಲೆಕ್ಸ್ ಹಾಕಲಾಗಿದೆ. ಇವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಯಾವುದೇ ಪಕ್ಷದವರಾಗಿರಲಿ, ನನ್ನ ಫೋಟೋ ಹಾಕಿರಲಿ ಅಥವಾ ಬೇರೆಯವರ ಫೋಟೋ ಹಾಕಿರಲಿ ಎಲ್ಲ ಅನಧಿಕೃತ ಫ್ಲೆಕ್ಸ್ ತೆರವು ಮಾಡಬೇಕು ಎಂದು ಸೂಚಿಸಿದ್ದೇನೆ. ಮುಂದೆ ಇದನ್ನು ನಿಯಂತ್ರಿಸಲು ಹೊಸ ಜಾಹೀರಾತು ನೀತಿ ತರಲಾಗುವುದು ಎಂದರು.

ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಇದರ ಹಿಂದೆ ಮಾಫಿಯಾ ಇದೆ. ಇದನ್ನು ನಾವು ಹತೋಟಿಗೆ ತರಬೇಕಿದೆ. ನೀವು ನಿಮ್ಮ ಮನೆ ಕಸವನ್ನು ಚರಂಡಿಯಲ್ಲಿ ಹಾಕಿದರೆ ಆಗುವುದಿಲ್ಲ. ನಮ್ಮ ನಗರದಲ್ಲಿ ಕಸ ವಿಲೇವಾರಿ ಹಾಗೂ ಸಂಚಾರ ದಟ್ಟಣೆ ನಿಯಂತ್ರಣ ಮಾಡಿದರೆ ಎಲ್ಲವೂ ಹತೋಟಿಗೆ ಬರುತ್ತದೆ ಎಂದರು.

ಹಿಂದಿನ ಸರ್ಕಾರ ಬಡವರಿಗೆ 1 ಲಕ್ಷ ಮನೆ ಕಟ್ಟಿಕೊಡುವುದಾಗಿ ಹೇಳಿದ್ದು, ಯಾರಿಗೂ ಮನೆ ಸಿಕ್ಕಿಲ್ಲ. ಈ ವಿಚಾರವಾಗಿ ಅನೇಕರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ವಸತಿ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕೆಲವರು ಹಣ ಕಟ್ಟಿದ್ದು, ಮತ್ತೆ ಕೆಲವರು ಹಣ ಕಟ್ಟದೇ ವಿನಾಯಿತಿ ಕೇಳುತ್ತಿದ್ದಾರೆ. ಬಡವರಿಗೆ ವಸತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಕಾರ್ಯಕ್ರಮದಲ್ಲಿ ವಸತಿ ಬಗ್ಗೆ ಬಂದಿರುವ ಅರ್ಜಿಗಳನ್ನು ಲೆಕ್ಕ ಹಾಕಿ ಅರ್ಹರ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಕೇಳಿದಾಗ, ಅವರ ಪಕ್ಷ, ಅವರ ಕರ್ತವ್ಯ. ಅವರು ಏನಾದರೂ ಮಾಡಿಕೊಳ್ಳಲಿ. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದವರು, ಈಗ ಅವರೇ ಗ್ಯಾರಂಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದರು.

ಇದನ್ನೂ ಓದಿ: ಆಧುನಿಕ ತಂತ್ರಜ್ಞಾನ ಆಧಾರಿತ ಉಪಕರಣಗಳನ್ನ ಬಳಸಿ ಅಪರಾಧಿಗಳಿಗೆ ಶಿಕ್ಷಿಸುವ ಕೆಲಸವಾಗಬೇಕು: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.