ಬೆಂಗಳೂರು: ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆಯಲು ವಿದ್ಯಾರ್ಥಿಗಳ ಸಹಕಾರವೇ ಕಾರಣ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದು ಎರಡನೇ ದಿನದ ಸಿಇಟಿ ಪರೀಕ್ಷೆ ನಡೆಯುತ್ತಿದ್ದ ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿಗೆ ಭೇಟಿ ನೀಡಿ, ಕಾಲೇಜಿನ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ಸಂದರ್ಭವನ್ನೂ ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಯಲು ಸಹಕರಿಸಿದ ವಿದ್ಯಾರ್ಥಿಗಳಿಗೆ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸುತ್ತೇನೆ. ಈ ಸಂದರ್ಭದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ನೀಡಿದ ಸಹಕಾರ ಪರೀಕ್ಷೆ ಯಶಸ್ವಿಯಾಗಲು ಕಾರಣವಾಯಿತು ಎಂದರು.