ETV Bharat / state

ಸೈಕಲ್​ ಜಾಥಾ ನಡೆಸಿದ ಕಾಂಗ್ರೆಸ್​​ ನಾಯಕರ ವಿರುದ್ಧ ಪ್ರಕರಣ: ಡಿಸಿಪಿ ಚೇತನ್ ಸಿಂಗ್ ರಾಥೋಡ್

author img

By

Published : Jun 29, 2020, 2:45 PM IST

ಕೊರೊನಾದ ಕಾರಣ ಕಾಂಗ್ರೆಸ್​ ಪಕ್ಷದ ಸೈಕಲ್​ ಜಾಥಾಗೆ ಅನುಮತಿ ನಿರಾಕರಿಸಲಾಗಿತ್ತು. ಆದರೆ, ಇದ್ಯಾವುದನ್ನೂ ಲೆಕ್ಕಿಸದೇ ಕಾನೂನು ನಿಯಮಗಳನ್ನು ಉಲ್ಲಂಘಿಸಿರುವ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.

DCP Chetan Singh
ಡಿಸಿಪಿ ಚೇತನ್ ಸಿಂಗ್ ರಾಥೋಡ್

ಬೆಂಗಳೂರು: ಪೊಲೀಸ್ ಇಲಾಖೆ ಅನುಮತಿ ನೀಡದ ಹೊರತಾಗಿಯೂ ಕಾಂಗ್ರೆಸ್​​ ಪಕ್ಷದಿಂದ ಸೈಕಲ್​​ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಗಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.

ಡಿಸಿಪಿ ಚೇತನ್ ಸಿಂಗ್ ರಾಥೋಡ್
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾಥಾ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ನಿನ್ನೆ ಮನವಿ ಬಂದಿತ್ತು. ಆದರೆ ಕೊರೊನಾದ ಕಾರಣ ಇದಕ್ಕೆ ಅನುಮತಿ ನಿರಾಕರಿಸಿ ನೋಟಿಸ್ ಕೂಡ ನೀಡಲಾಗಿತ್ತು. ಇದನ್ನು ಲೆಕ್ಕಿಸದ ಮುಖಂಡರು ಕಾನೂನು ಉಲ್ಲಂಘನೆ ಮಾಡಿ ಸೈಕಲ್ ಜಾಥಾ ನಡೆಸಿದ್ದಾರೆ. ಈ ಸಂಬಂದ ಕಾನೂನು ತಜ್ಞರ ಜೊತೆ ಚರ್ಚಿಸಿ ಪ್ರತಿಭಟನಾಕಾರರ ವಿರುದ್ಧ ಎನ್​ಡಿಎಂಎ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗುವುದೆಂದು ತಿಳಿಸಿದರು.
ಇನ್ನು ಇವರ ಜಾಥಾದಿಂದಾಗಿ ಕಬ್ಬನ್ ಪಾರ್ಕ್ ಸುತ್ತಮುತ್ತ ಟ್ರಾಫಿಕ್​​ ಜಾಮ್​​ ಕೂಡ ಉಂಟಾಗಿತ್ತು. ಮತ್ತೊಂದೆಡೆ ಈಗಾಗಲೇ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಪೊಲೀಸರು ದೂರದಿಂದಲೇ ನಿಂತು ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಯತ್ನಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.