ETV Bharat / state

ಹಸು ಮಾಂಸ ತ್ಯಾಜ್ಯ ಸಾಗಾಟ ಶಂಕೆ: ನಟಿಯ ಆರೋಪಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸ್ಪಷ್ಟನೆ - ಸಿ ಕೆ ಬಾಬಾ ಸ್ಪಷ್ಟನೆ

ಟ್ರಕ್‌ನಲ್ಲಿ ಹಸು ಮಾಂಸ ತ್ಯಾಜ್ಯ ಸಾಗಣೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿ ನಟಿ ಐಂದ್ರಿತಾ ರೈ ಮಾಡಿದ್ದ ಆರೋಪಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ ಸ್ಪಷ್ಟನೆ ಕೊಟ್ಟಿದ್ದಾರೆ.

DCP CK Baba
ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ
author img

By ETV Bharat Karnataka Team

Published : Sep 8, 2023, 1:19 PM IST

ಬೆಂಗಳೂರು: ಟ್ರಕ್​ನಲ್ಲಿ ಹಸು ಮಾಂಸ ತ್ಯಾಜ್ಯ ಸಾಗಣೆ ಆರೋಪದ ಕುರಿತು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ ಸಾಮಾಜಿಕ ಮಾಧ್ಯಮ ಎಕ್ಸ್​(ಹಿಂದಿನ ಟ್ವಿಟರ್​)ನಲ್ಲಿ ಪ್ರತಿಕ್ರಿಯಿಸಿದ್ದಾರೆ. "ಟ್ರಕ್​ನಲ್ಲಿ ಇದ್ದದ್ದು ಹಸು ಮಾಂಸದ ತ್ಯಾಜ್ಯವಲ್ಲ. ಅದರಲ್ಲಿ ಪತ್ತೆಯಾದ ಮೂಳೆಗಳು, ಕೊಂಬುಗಳು, ಚರ್ಮ ಹಸುವಿನದ್ದಲ್ಲ. ಹಾಗೂ ಅದು ಬಿಬಿಎಂಪಿ ಪೂರ್ವ ವಿಭಾಗದ ಪಶುಸಂಗೋಪನೆ ಕಸಾಯಿಖಾನೆಯಿಂದ ಅಧಿಕೃತ ವ್ಯಾಪಾರಿಗೆ ಪ್ರಮಾಣೀಕರಿಸಲಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

'ಟ್ರಕ್​ನಲ್ಲಿ ಮಾಂಸದ ತ್ಯಾಜ್ಯ ಸಾಗಿಸಲಾಗುತ್ತಿದೆ. ಅದು ಹಸುವಿನ ಮಾಂಸದ ತ್ಯಾಜ್ಯ ಎಂಬ ಅನುಮಾನವಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಬೊಮ್ಮನಹಳ್ಳಿ ಠಾಣಾ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಗೋ ಹತ್ಯೆ ಕಾನೂನು ಬಾಹಿರ' ಎಂದು ಬುಧವಾರ ತಮ್ಮ ಸಾಮಾಜಿಕ ಜಾಲತಾಣ ಖಾತೆ ಎಕ್ಸ್​ನಲ್ಲಿ ನಟಿ ಐಂದ್ರಿತಾ ರೈ ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ, ನಗರ ಪೊಲೀಸ್ ಆಯುಕ್ತರು ಹಾಗೂ ಆಗ್ನೇಯ ವಿಭಾಗದ ಡಿಸಿಪಿಗೆ ಟ್ಯಾಗ್ ಮಾಡಿ ವಿಡಿಯೋ ಪೋಸ್ಟ್​ ಮಾಡಿದ್ದರು.

  • Enquiry into the incident @bommanalli PS it's been confirmed that the commodities found in the vehicle included bones,horns,hides &animal byproducts were not from the cows& it was certified by BBMP Animal husbandry East slaughter house to the authorized trader.

    — C K Baba, IPS (@DCPSEBCP) September 7, 2023 " class="align-text-top noRightClick twitterSection" data=" ">

ನಟಿಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ಟ್ರಕ್​ನಲ್ಲಿದ್ದ ಮಾಂಸದ ತ್ಯಾಜ್ಯ ಪರಿಶೀಲನೆ ನಡೆಸಲಾಗಿದೆ. ಅದು ಹಸುವಿನದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಗೋಮಾಂಸ ಮಾರಾಟಕ್ಕೆ ಯತ್ನ- ಆರೋಪಿಗಳು ವಶಕ್ಕೆ: ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ದೇವದಾನ ಗ್ರಾಮದಲ್ಲಿ ಹಸುವನ್ನ ಕೊಂದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಭಜರಂಗದಳ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ದೇವದಾನ ಸಮೀಪದ ಕಡ್ಲೆಮಕ್ಕಿ ಗ್ರಾಮದ ಇಬ್ರಾಹಿಂ ಹಾಗೂ ಷರೀಫ್ ಬಂಧಿತ ಆರೋಪಿಗಳು. ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಗೋಮಾಂಸ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಗೋಮಾಂಸ ಸಾಗಿಸುತ್ತಿದ್ದವರಿಂದ ಸುಲಿಗೆ: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಸೇರಿದಂತೆ ಇಬ್ಬರು ಆರೋಪಿಗಳನ್ನ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಸುಂಕದಕಟ್ಟೆಯ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಪ್ರಶಾಂತ್ ಹಾಗೂ ಸೋಮುಗೌಡ ಬಂಧಿತ ಆರೋಪಿಗಳು.

ಪ್ರಕರಣದ ವಿವರ: ಜೂ.21 ರಂದು ಬೆಳಗ್ಗೆ 8.30ರ ಸುಮಾರಿಗೆ ಮಾಗಡಿಯಿಂದ ಗೋಮಾಂಸ ಖರೀದಿಸಿ ಶಿವಾಜಿನಗರಕ್ಕೆ ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ಸಾಗಣೆ ಮಾಡುತ್ತಿದ್ದ ಖಾಜಾ ಮೊಯಿನುದ್ದೀನ್ ಹಾಗೂ ಉಮೇಶ್ ಎಂಬುವವರನ್ನ ತುಮಕೂರು ರಸ್ತೆಯಲ್ಲಿ ಅಡ್ಡಗಟ್ಟಿದ್ದ ಆರೋಪಿ ಪ್ರಶಾಂತ್ ಹಾಗೂ ಸ್ನೇಹಿತರು ನಿಮ್ಮ ವಾಹನ ನಮ್ಮ ಇನ್ನೋವಾ ಕಾರಿಗೆ ಟಚ್ ಆಗಿ ಡ್ಯಾಮೇಜ್ ಆಗಿದೆ. ಹಣ ಕಟ್ಟಿಕೊಡುಬೇಕೆಂದು ಧಮ್ಕಿ ಹಾಕಿದ್ದರು. ಪರಸ್ಪರ ವಾಗ್ವಾದದ ನಡುವೆ ಸ್ಕಾರ್ಪಿಯೋ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿರುವುದನ್ನ ಕಂಡು ಬೆದರಿಸಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದವರಿಂದ ಸುಲಿಗೆ: ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.