ETV Bharat / state

ಗೋಲಿಬಾರ್​ನಲ್ಲಿ ಸತ್ತವರು ಆಮಾಯಕರು, ಪರಿಹಾರ ನೀಡಿ: ಹೆಚ್​.ಡಿ ದೇವೇಗೌಡ ಟ್ವೀಟ್​ - ಮಂಗಳೂರು ಗೋಲಿಬಾರ್​

ಸರ್ಕಾರ ಇರುವುದು ಪ್ರಜೆಗಳ ರಕ್ಷಣೆಗೆ, ಕಾನೂನು,ಶಿಸ್ತು ಕಾಪಾಡಲು ಆದ್ಯತೆ ನೀಡಿ. ಶಾಂತಿ ಕದಡುವವರನ್ನು ಗುರುತಿಸಿ ಬಂಧಿಸಿ. ಆದರೆ ಅಮಾಯಕರನ್ನು ಕೊಲ್ಲಬೇಡಿ ಎಂದು ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಟ್ವೀಟ್​ ಮಾಡಿದ್ದಾರೆ.

fff
ಗೋಲಿಬಾರ್​ನಲ್ಲಿ ಸತ್ತವರು ಆಮಾಯಕರು:ಹೆಚ್​.ಡಿ ದೇವೇಗೌಡ ಟ್ವೀಟ್​
author img

By

Published : Dec 20, 2019, 5:36 PM IST

ಬೆಂಗಳೂರು : ಮಂಗಳೂರಿನಲ್ಲಿ ಅಮಾಯಕ ಯುವಕರಿಬ್ಬರು ಪೊಲೀಸರ ಗೋಲಿಬಾರ್​ಗೆ ಬಲಿಯಾಗಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟ್ವೀಟ್​ ಮೂಲಕ ಆಗ್ರಹಿಸಿದ್ದಾರೆ.

dede
ಗೋಲಿಬಾರ್​ನಲ್ಲಿ ಸತ್ತವರು ಆಮಾಯಕರು:ಹೆಚ್​.ಡಿ ದೇವೇಗೌಡ ಟ್ವೀಟ್​

ಸರ್ಕಾರದ ಸಚಿವರುಗಳೇ ಗಲಭೆಗೆ ಕುಮ್ಮಕ್ಕು ಕೊಡುವಂತಹ ಹೇಳಿಕೆ ನೀಡಿ ಜನರನ್ನು ಪ್ರಚೋದಿಸುತ್ತಿರುವುದು ಖಂಡನಾರ್ಹ.ನಾನು ಕೇರಳದಲ್ಲಿ ಚಿಕಿತ್ಸೆಯಲ್ಲಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರಾದ ಬಿಎಂ ಫಾರೂಕ್ ಮಂಗಳೂರಿನಲ್ಲಿದ್ದು, ಜನರಿಗೆ ನೆರವಾಗುತ್ತಿದ್ದಾರೆ. ಅಲ್ಲಿಂದ ಎಲ್ಲ ಮಾಹಿತಿಯನ್ನು ನನಗೆ ತಿಳಿಸಿದ್ದಾರೆ. ಜನರು ಶಾಂತಿ ಕಾಪಾಡಬೇಕು. ಸರ್ಕಾರ ಕೂಡಾ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೆಚ್​ಡಿಡಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.ಎನ್ ಆರ್ ಸಿ ಮತ್ತು ಸಿಎಎ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಇರುವುದನ್ನು ನಿವಾರಿಸುವುದು ಸರ್ಕಾರದ ಕರ್ತವ್ಯ. ಅದನ್ನು ಅಧಿಕಾರಿಗಳ ಮೂಲಕ ಮಾಡುವುದು ಬಿಟ್ಟು ಪೊಲೀಸ್ ಬಲ ಪ್ರಯೋಗಿಸಿ ಜನರನ್ನು ಹೆದರಿಸಿ ಸೆಕ್ಷನ್ ವಿಧಿಸಿ ನಾಗರಿಕರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳಬೇಡಿ ಎಂದಿದ್ದಾರೆ.

frf
ಪೇಜಾವವರ ಬಗ್ಗೆ ದೇವೇಗೌಡ ಟ್ವೀಟ್​

ಇನ್ನೂ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು ಶೀಘ್ರ ಗುಣಮುಖರಾಗಲಿ ಎಂದು ದೇವೇಗೌಡರು ಹಾರೈಸಿದ್ದಾರೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲಿ. ಅವರ ಆರೋಗ್ಯ ಸುಧಾರಿಸಿ ಶ್ರೀಕೃಷ್ಣನ ಸೇವೆ ಇನ್ನಷ್ಟು ದಿನ ಮಾಡುವಂತಾಗಲಿ ಎಂದು ಟ್ವೀಟ್ ಮೂಲಕ ದೇವೇಗೌಡ ಪ್ರಾರ್ಥಿಸಿದ್ದಾರೆ.

Intro:ಬೆಂಗಳೂರು : ಮಂಗಳೂರಿನಲ್ಲಿ ನಡೆದಿರುವ ಘಟನೆ ದುರದೃಷ್ಟಕರ. ಅಮಾಯಕ ಯುವಕರಿಬ್ವರು ಪೊಲೀಸರ ಗೋಲಿಬಾರ್ ಗೆ ಬಲಿಯಾಗಿದ್ದಾರೆ. ಸರ್ಕಾರದ ಸಚಿವರುಗಳೇ ಗಲಭೆಗೆ ಕುಮ್ಮಕ್ಕು ಕೊಡುವಂತಹ ಹೇಳಿಕೆ ನೀಡಿ ಜನರನ್ನು ಪ್ರಚೋದಿಸುತ್ತಿರುವುದು ಖಂಡನಾರ್ಹ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.Body:ನಾನು ಕೇರಳದಲ್ಲಿ ಚಿಕಿತ್ಸೆಯಲ್ಲಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರಾದ ಬಿಎಂ ಫಾರೂಕ್ ಅವರು ಮಂಗಳೂರಿನಲ್ಲಿದ್ದು, ಜನರಿಗೆ ನೆರವಾಗುತ್ತಿದ್ದಾರೆ. ಅಲ್ಲಿಂದ ಎಲ್ಲ ಮಾಹಿತಿಗಳನ್ನೂ ನನಗೆ ತಿಳಿಸಿದ್ದಾರೆ. ಜನರು ಶಾಂತಿ ಕಾಪಾಡಬೇಕು. ಸರ್ಕಾರ ಕೂಡಾ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಎನ್ ಆರ್ ಸಿ ಮತ್ತು ಸಿಎಎ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಇರುವುದನ್ನು ನಿವಾರಿಸುವುದು ಸರ್ಕಾರದ ಕರ್ತವ್ಯ. ಅದನ್ನು ಅಧಿಕಾರಿಗಳ ಮೂಲಕ ಮಾಡುವುದು ಬಿಟ್ಟು ಪೊಲೀಸ್ ಬಲ ಪ್ರಯೋಗಿಸಿ ಜನರನ್ನು ಹೆದರಿಸಿ ಸೆಕ್ಷನ್ ವಿಧಿಸಿ ನಾಗರಿಕರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳಬೇಡಿ. ಸರಕಾರ ಇರುವುದು ಪ್ರಜೆಗಳ ರಕ್ಷಣೆಗೆ. ಕಾನೂನು ಶಿಸ್ತು ಪರಿಸ್ಥಿತಿ ಕಾಪಾಡಲು ಆದ್ಯತೆ ನೀಡಿ. ಶಾಂತಿ ಕದಡುವವರನ್ನು ಗುರುತಿಸಿ ಬಂಧಿಸಿ. ಆದರೆ ಅಮಾಯಕರನ್ನು ಕೊಲ್ಲಬೇಡಿ. ಸಾರ್ವಜನಿಕರು ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೃತರಾದವರ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸಲು ಸರ್ಕಾರ ಸೂಕ್ತ ಬಂದೋಬಸ್ತ್ ಒದಗಿಸಬೇಕು ಎಂದು ದೇವೇಗೌಡರು ಒತ್ತಾಯಿಸಿದ್ದಾರೆ.
ಪ್ರಾರ್ಥನೆ : ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಶೀಘ್ರ ಗುಣಮುಖರಾಗಲಿ ಎಂದು ದೇವೇಗೌಡರು ಹಾರೈಸಿದ್ದಾರೆ.
ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲಿ. ಅವರ ಆರೋಗ್ಯ ಸುಧಾರಿಸಿ ಶ್ರೀಕೃಷ್ಣನ ಸೇವೆಯನ್ನು ಇನ್ನಷ್ಟು ದಿನ ಮಾಡುವಂತಾಗಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.