ಬೆಂಗಳೂರು: ತಡರಾತ್ರಿ ಕುಖ್ಯಾತ ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹರೀಶ್ ಮಾರಣಾಂತಿಕ ಹಲ್ಲೆಗೊಳಗಾದ ರೌಡಿ. ಇವನ ವಿರುದ್ಧ ಯಲಹಂಕ ಉಪನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಅಪರಾಧ ಪ್ರಕರಣ ದಾಖಲಾಗಿದ್ದವು. ಹಳೇ ದ್ವೇಷದ ಶಂಕೆ ಮೇರೆಗೆ ಯಲಹಂಕ ನ್ಯೂ ಟೌನ್ ಬಳಿಯ ಚಿತ್ರ ಲೇಔಟ್ ನಲ್ಲಿ ಹರೀಶ್ ಹೋಗುತ್ತಿದ್ದಾಗ ಗುರಿಯಾಗಿಸಿಕೊಂಡ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಹರೀಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿದ, ಪೊಲೀಸರು ಪರಿಶೀಲನೆ ನಡೆಸಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ.
ಓದಿ : PHOTOS: ಕುದುರೆಗೆ ಕಿಚ್ಚು ಹಾಯಿಸಿದ ‘ಸಾರಥಿ’, ಹೀಗಿತ್ತು ನೋಡಿ ‘ಒಡೆಯ’ನ ಸಂಕ್ರಾಂತಿ ಸಂಭ್ರಮ