ETV Bharat / state

ಕೊರೊನಾದಿಂದ ಪೌರ ಕಾರ್ಮಿಕರ ಸಾವು: ವಿಮೆ ಪರಿಹಾರದ ಮಾಹಿತಿ ಕೇಳಿದ ಹೈಕೋರ್ಟ್

ಕೊರೊನಾ ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

author img

By

Published : Jul 23, 2020, 7:01 PM IST

High Court
ಹೈಕೋರ್ಟ್

ಬೆಂಗಳೂರು: ಕೊರೊನಾ ಸೋಂಕು ತಗುಲಿ ಸಾವನ್ನಪ್ಪುವ ಪೌರ ಕಾರ್ಮಿಕರಿಗೆ ಗರೀಬ್ ಕಲ್ಯಾಣ್ ಯೋಜನೆ ಅಡಿ ವಿಮೆ ಲಭ್ಯವಿದೆಯೇ? ಕೊರೊನಾ ವಾರಿಯರ್ಸ್ ನೀಡುತ್ತಿರುವಂತೆ ಇವರಿಗೂ 50 ಲಕ್ಷ ರೂ ಪರಿಹಾರ ನೀಡಲು ಅವಕಾಶವಿದೆಯೇ? ಎಂಬುದನ್ನು ಸ್ಪಷ್ಟಪಡಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಪೌರ ಕಾರ್ಮಿಕರಿಗೆ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳನ್ನು ನೀಡಿಲ್ಲ. ಹೀಗಾಗಿಯೇ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವರು ಸೋಂಕಿಗೆ ಒಳಗಾಗಿದ್ದಾರೆ. ಶಿವಾಜಿನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಎರಡು ತಿಂಗಳಿಂದ ವೇತನವನ್ನೇ ಪಾವತಿಸಿಲ್ಲ. ಕನಿಷ್ಟ ವಿಮೆ ಕೂಡ ನೀಡಿಲ್ಲ ಎಂದು ಆರೋಪಿಸಿದರು.

ಪಾಲಿಕೆ ಪರ ವಕೀಲ ಶ್ರೀನಿಧಿ ವಾದಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ 17,419 ಪೌರ ಕಾರ್ಮಿಕರಿಗೂ ಪಿಪಿಇ ಕಿಟ್ ಕೊಡಲಾಗಿದೆ. ಇವರಿಗೆ ತಲಾ 18,200 ರೂಪಾಯಿ ಪ್ರತಿ ತಿಂಗಳೂ ವೇತನ ನೀಡಲಾಗುತ್ತಿದೆ. ಹಾಗಿದ್ದೂ ಕೊರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, 15 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚವಾಗಿ ತಲಾ 20 ಸಾವಿರ ರೂ ನೀಡಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ನೀಡದಿರುವ ಕುರಿತು ಆರೋಪಗಳಿದ್ದು ಇದಕ್ಕೆ ಸ್ಪಷ್ಟನೆ ನೀಡಬೇಕು. ವಿಮೆ ನೀಡುವ ವಿಚಾರದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ವಿಮೆ ಲಭ್ಯವಿರುವ ಬಗ್ಗೆ ಮತ್ತು ಈಗಾಗಲೇ ಕೊರೊನಾ ವಾರಿಯರ್ಸ್ ಗೆ ಘೋಷಿಸಲಾಗಿರುವ 50 ಲಕ್ಷ ರೂ ವಿಮೆ ಪರಿಹಾರ ಇವರಿಗೂ ನೀಡಲು ಸಾಧ್ಯವಿರುವ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡಬೇಕು. ಈ ಯೋಜನೆಯ ಲಾಭ ಪಾಲಿಕೆಯ ಗುತ್ತಿಗೆ ಕಾರ್ಮಿಕರಿಗೂ ಅನ್ವಯಿಸುತ್ತದೆಯೇ ಎಂಬುದರ ಕುರಿತು ಮಾಹಿತಿ ನೀಡಬೇಕೆಂದು ಸೂಚಿಸಿ ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.