ಬೆಂಗಳೂರು: ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಕೋರ್ಟ್ ವಿಚಾರಣೆ ಬಳಿಕ ನಿರ್ಧರಿಸುತ್ತೇವೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.
ಧವಳಗಿರಿಯಲ್ಲಿ ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪರನವರು ಸಿಎಂ ಆದ ಮೇಲೆ ನಾನು ವೈಯಕ್ತಿಕವಾಗಿ ಭೇಟಿ ಮಾಡಿರಲಿಲ್ಲ. ಇವತ್ತು ಭೇಟಿ ಮಾಡಿ ಅಭಿನಂದನೆ ತಿಳಿಸಿದ್ದೇನೆ. ಕ್ಷೇತ್ರದ ಸಮಸ್ಯೆ ಬಗ್ಗೆ ಮಾತಾಡಿದ್ದೇನೆ ಎಂದರು.
ನಾನು ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಕುಟುಂಬದವರನ್ನು ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾನೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಅನರ್ಹರಾದರೆ ಚುನಾವಣೆಗೆ ಸ್ಪರ್ಧಿಸಬಾರದೆಂಬ ನಿಯಮ ಇಲ್ಲ. ಆದರೆ ಮಾಜಿ ಸ್ಪೀಕರ್ ಅವರು ತಪ್ಪು ಆದೇಶ ಕೊಟ್ಟಿದ್ದಾರೆ. ನ್ಯಾಯಾಲಯದಲ್ಲಿ ನಮ್ಮ ಪರ ತೀರ್ಪು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿದ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಫೋನ್‌ಗಳೂ ಸಹ ಟ್ಯಾಪಿಂಗ್ ಆಗಿರಬಹುದು. ತುಂಬಾ ಜನರ ಫೋನ್ಗಳ ಕದ್ದಾಲಿಕೆ ಆಗಿದೆ. ಪ್ರಕರಣ ಸಿಬಿಐಗೆ ವಹಿಸಿರುವುದು ಸ್ವಾಗತಾರ್ಹ. ತನಿಖೆ ನಂತರ ತಪ್ಪಿಸ್ಥರ ವಿರುದ್ಧ ಕ್ರಮ ಆಗಲಿದೆ ಎಂದು ಹೇಳಿದರು