ಬೆಂಗಳೂರು: ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನ 189ನೇ ಪುಣ್ಯ ಸ್ಮರಣೆ ಹಿನ್ನೆಲೆ, ಸಿಎಂ ಬಿ.ಎಸ್. ಯಡಿಯೂರಪ್ಪ ಆನಂದ್ ರಾವ್ ವೃತ್ತದ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಸಿಎಂ, ಆನಂದ್ ರಾವ್ ವೃತ್ತದ ಬಳಿ ಇರುವ ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು ಇಡಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದರು.
ಸಂಗೊಳ್ಳಿ ರಾಯಣ್ಣ ಚಿಂತನೆಯಿಂದ ನಾವೆಲ್ಲe ಪ್ರೇರಣೆ ಪಡೆಯಬೇಕು. ಸ್ವಾತಂತ್ರ ಹೋರಾಟದಲ್ಲಿ ಸಂಗೊಳ್ಳಿ ರಾಯಣ ಮಹತ್ವದ ಪಾತ್ರ ವಹಿಸಿದ್ದರು. ರಾಯಣ್ಣ ಅವರು ಒಂದು ಜನಾಂಗಕ್ಕೆ ಸೀಮಿತರಾದವರಲ್ಲ, ಅವರು ಸಮಸ್ತ ಕನ್ನಡಿಗರ ಶೌರ್ಯದ ಪ್ರತೀಕರಾಗಿದ್ದಾರೆ ಎಂದು ಸ್ಮರಿಸಿದರು.