ETV Bharat / state

ಬಿಎಸ್‌ವೈ ಆಡಿಯೋ ಕ್ಲಿಪ್ ಬಗ್ಗೆ ರಾಷ್ಟ್ರಪತಿಗೆ ದೂರು: ಸಿದ್ದರಾಮಯ್ಯ ಹೇಳಿಕೆ

author img

By

Published : Nov 7, 2019, 3:56 PM IST

ಆಪರೇಷನ್​ ಕಮಲದ ವಿಚಾರವಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಇದೀಗ ಈ ಬಗ್ಗೆ ರಾಷ್ಟ್ರಪತಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲ ಸಂಬಂಧದ ಯಡಿಯೂರಪ್ಪ ಆಡಿಯೋ ಕ್ಲಿಪ್ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ‌.

ಕೆಪಿಸಿಸಿ ಕಚೇರಿಯಲ್ಲಿ ‌ಮಾತನಾಡಿದ ಅವರು, ಆಪರೇಷನ್ ಕಮಲದ ಆಡಿಯೋ ಕ್ಲಿಪ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಸಿಎಂ ಯಡಿಯೂರಪ್ಪ ಭಾಗಿಯಾಗಿವುದು ಸ್ಪಷ್ಟವಾಗಿದೆ. ಈ ಮೂಲಕ ಪಕ್ಷಾಂತರ ಹಾಗು ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದಾರೆ. ಕುದುರೆ ವ್ಯಾಪಾರ ಮಾಡಿದ್ದು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ. ಹಾಗಾಗಿ ಈ ಬಗ್ಗೆ ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಲಿದ್ದೇವೆ ಎಂದರು.

ಸಾಂವಿಧಾನಿಕ ಹುದ್ದೆಯಲ್ಲಿರುವವರು ಈ ರೀತಿ ಮಾಡಿದರೆ ಹೇಗೆ? ಇದು 10ನೇ ಶೆಡ್ಯೂಲ್‌ನ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಷ್ಟ್ರಪತಿಗಳ ಮೂಲಕ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ‌ ಕೊಡಬೇಕೆಂದು ಒತ್ತಾಯಿಸಲಿದ್ದೇವೆ ಎಂದು ತಿಳಿಸಿದ್ರು.

ಉಪ ಚುನಾವಣೆ ಅಭ್ಯರ್ಥಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಂಟು ಕ್ಷೇತ್ರಗಳ ಟಿಕೆಟ್ ಘೋಷಣೆ‌ಯಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಉಳಿದ ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಿದ್ದೇವೆ‌ ಎಂದು ಮಾಹಿತಿ ನೀಡಿದ್ರು.

ಟಿಪ್ಪು ವಿಚಾರ ಪಠ್ಯದಿಂದ ತೆಗೆಯುವ ವಿಚಾರವಾಗಿ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಸಭೆ ನಡೆಯುತ್ತಿರುವ ಬಗ್ಗೆ ಗೊತ್ತಾಗಿದೆ. ಒಂದು ವೇಳೆ ಪಠ್ಯದಿಂದ ಟಿಪ್ಪು ವಿಚಾರಗಳನ್ನು ತೆಗೆದರೆ ಮೈಸೂರು ಇತಿಹಾಸ ಅಪೂರ್ಣವಾಗುತ್ತದೆ ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.

Intro:Body:KN_BNG_02_SIDDARAMYYA_BYTE_SCRIPT_7201951

ಬಿಎಸ್ ವೈ ಆಡಿಯೋ ಕ್ಲಿಪ್ ಬಗ್ಗೆ ರಾಷ್ಟ್ರಪತಿಗೆ ದೂರು ನೀಡಲು ನಿರ್ಧಾರ: ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲ ಸಂಬಂಧದ ಯಡಿಯೂರಪ್ಪ ಆಡಿಯೋ ಕ್ಲಿಪ್ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ‌

ಕೆಪಿಸಿಸಿ ಕಚೇರಿಯಲ್ಲಿ ‌ಮಾತನಾಡಿದ ಅವರು, ಸಿಎಂ ಯಡಿಯೂರಪ್ಪರ ಆಪರೇಷನ್ ಕಮಲ ಸಂಬಂಧದ ಆಡಿಯೋ ಕ್ಲಿಪ್ ಬಗ್ಗೆ ರಾಷ್ಟ್ರಪತಿಗಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ. ರಾಷ್ಟ್ರಪತಿಗಳಿಗೆ ಈ ಸಂಬಂಧ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಈ ಆಪರೇಷನ್ ಕಮಲದ ಆಡಿಯೋ ಕ್ಲಿಪ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಸಿಎಂ ಯಡಿಯೂರಪ್ಪ ಭಾಗಿಯಾಗಿಯಾಗಿರುವುದು ಸ್ಪಷ್ಟವಾಗಿದೆ. ಪಕ್ಷಾಂತರ ಮಾಡಲು ಇವರೇ ಕಾರಣರಾಗಿದ್ದಾರೆ. ಮೈತ್ರಿ ಸರ್ಕಾರ ಬೀಳಲು ಇವರೇ ಕಾರಣರಾಗಿದ್ದಾರೆ. ಅವರು ಕುದುರೆ ವ್ಯಾಪಾರ ಮಾಡಿದ್ದಾರೆ, ಸಂವಿಧಾನಕ್ಕೆ ವಿರೋಧವಾಗಿ ವರ್ತಿಸಿದ್ದಾರೆ. ಈ ಸಂಬಂಧ ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಲಿದ್ದೇವೆ ಎಂದು ತಿಳಿಸಿದರು.

ಸಂವಿಧಾನಿಕ ಹುದ್ದೆಯಲ್ಲಿರುವವರು ಈ ರೀತಿ ಮಾಡಿದರೆ ಹೇಗೆ?. ಅವರು ಆಯಾ ರಾಂ ಗಯಾರಾಂ ಮಾಡಿಸಿದ್ದಾರೆ. ಇದು 10ನೇ ಶೆಡ್ಯೂಲ್ ನ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಷ್ಟ್ರಪತಿ ಭೇಟಿಯಾಗಿ ಅವರಲ್ಲಿ ಮನವಿ ಮಾಡಿ, ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ರಾಜೀನಾಮೆ‌ ಕೊಡಬೇಕೆಂದು ಮನವರಿಕೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಉಪಚುನಾವಣೆ ಅಭ್ಯರ್ಥಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಂಟು ಕ್ಷೇತ್ರಗಳ ಟಿಕೆಟ್ ಘೋಷಣೆ‌ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಉಳಿದ ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಿದ್ದೇವೆ‌. ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯುತ್ತಿದ್ದೇವೆ‌ ಎಂದು ತಿಳಿಸಿದರು.

ಟಿಪ್ಪು ವಿಚಾರ ಪಠ್ಯದಿಂದ ತೆಗೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಸಭೆ ನಡೆಯುತ್ತಿರುವ ಬಗ್ಗೆ ಗಮನಕ್ಕೆ‌ ಬಂದಿದೆ. ಒಂದು ವೇಳೆ ಪಠ್ಯದಿಂದ ಟಿಪ್ಪು ವಿಚಾರಗಳನ್ನು ತೆಗೆದರೆ ಮೈಸೂರು ಇತಿಹಾಸ ಅಪೂರ್ಣವಾಗುತ್ತದೆ ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.