ETV Bharat / state

ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ರೈತರ ಜಮೀನಿಗೆ ಹೆಚ್ಚಿನ ಪರಿಹಾರ ನೀಡಲು ನಿರ್ಧಾರ: ಸಚಿವ ಅಶೋಕ್ - ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಿಸಲು ನಿರ್ಧಾರ

ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತ ರೈತರಿಗೆ ಹೆಚ್ಚಿನ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಆದ್ರೆ ಎಷ್ಟು ಪರಿಹಾರ ಕೊಡಬೇಕು ಎಂಬುದರ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ಸಚಿವ ಅಶೋಕ್ ತಿಳಿಸಿದರು.

ಸಚಿವ ಅಶೋಕ್
ಸಚಿವ ಅಶೋಕ್
author img

By

Published : Oct 29, 2022, 5:29 PM IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ರೈತರ ಜಮೀನಿಗೆ ಹೆಚ್ಚಿನ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಸಂಬಂಧ ರೈತರ‌ ಜಮೀನಿಗೆ ಮಾರ್ಗಸೂಚಿ ಬೆಲೆ ನಿಗದಿ ವಿಚಾರವಾಗಿ ಸಂಪುಟ ಉಪ ಸಮಿತಿ ಸಭೆ ನಡೆಸಿ ಬಳಿಕ ಮಾತನಾಡಿದ ‌ಅವರು, 26 ಸಾವಿರ ಎಕರೆ ಭೂ ಸ್ವಾಧೀನಕ್ಕೆ ಪರಿಹಾರ ನೀಡಲಾಗಿದೆ. ಇನ್ನೂ 50 ಸಾವಿರ ಎಕರೆಗೆ ಪರಿಹಾರ ನೀಡಬೇಕಿದೆ. ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. ರೈತರು ಹೆಚ್ಚಿನ ಪರಿಹಾರಕ್ಕೆ ಆಗ್ರಹ ಮಾಡಿದ್ದಾರೆ. ಸದ್ಯ ಎಕರೆಗೆ ಪರಿಹಾರ 1.5 ಲಕ್ಷದಷ್ಟಿದೆ.
ಮೂರು ಪಟ್ಟು ಅಂದ್ರೆ 8 ಲಕ್ಷದಷ್ಟು ಆಗಬಹುದು. ಆದರೆ ರೈತರು ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ರೈತರಿಗೆ ಅನುಕೂಲ ಅಂತ ಭಾವಿಸಿ ಮಾನವೀಯತೆ ದೃಷ್ಟಿಯಿಂದ ಹೆಚ್ಚಳ ಮಾಡುತ್ತೇವೆ ಎಂದರು.

ವಿಶೇಷ ಪ್ರಕರಣ ಎಂದು ಭಾವಿಸಿ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದೇವೆ. ಇನ್ನೊಂದು ಸಭೆ ಮಾಡಿ ನಾವು ಪರಿಹಾರ ಎಷ್ಟು ನೀಡಬೇಕು ಅಂತ ನಿರ್ಧಾರ ಮಾಡುತ್ತೇವೆ. ಸುಪ್ರೀಂ ಕೋರ್ಟ್​ನಲ್ಲಿ ಪ್ರಕರಣ ಇದ್ರೂ, ನಮ್ಮ ಪರವಾಗಿ ತೀರ್ಪು ಆಗಲಿದೆ ಅಂತ ಭಾವಿಸಿದ್ದೇವೆ. ಒಟ್ಟಿನಲ್ಲಿ‌ ರೈತರ ಹಿತ ಕಾಪಾಡುವುದು ನಮ್ಮ ಆದ್ಯತೆ ಆಗಲಿದೆ. ಯೋಜನೆಯನ್ನು ಬೇಗ ಕಾರ್ಯಗತಗೊಳಿಸುವುದು ಬಹಳ ಮುಖ್ಯವಾಗಿದೆ. ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಕಂದಾಯ, ಜಲಸಂಪನ್ಮೂಲ, ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

(ಓದಿ: ಅಪ್ಪುಗೆ ಕರ್ನಾಟಕ ರತ್ನ ಪ್ರದಾನ ಸಮಾರಂಭದಲ್ಲಿ ರಜನೀಕಾಂತ್, ಜೂ ಎನ್​ಟಿಆರ್ ಭಾಗಿ: ಸಚಿವ ಅಶೋಕ್ )

ETV Bharat Logo

Copyright © 2024 Ushodaya Enterprises Pvt. Ltd., All Rights Reserved.