ETV Bharat / state

ಶರಾವತಿ ಸಂತ್ರಸ್ತರ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನಿರ್ಧಾರ: ಸಚಿವ ಈಶ್ವರ್ ಖಂಡ್ರೆ

ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಅವರು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಕಲ್ಪಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ
author img

By ETV Bharat Karnataka Team

Published : Dec 19, 2023, 5:19 PM IST

ಬೆಂಗಳೂರು : ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂ ಹಕ್ಕು ಪತ್ರ ನೀಡುವಂತೆ 6 ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್​ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಕಲ್ಪಿಸುವ, ಅರಣ್ಯ ಹಕ್ಕು ಕಾಯಿದೆಯಡಿ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಹಾಗೂ ಹುಲಿ ಉಗುರು ಸೇರಿದಂತೆ ವನ್ಯ ಜೀವಿಗಳ ಅಂಗಾಂಗದ ಫಲಕಗಳು, ಆಭರಣಗಳೇ ಮೊದಲಾದ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಒಂದು ಬಾರಿ ಅವಕಾಶ ನೀಡುವ ನಿಟ್ಟಿನಲ್ಲಿ ಕಾನೂನಾತ್ಮಕ ವಿಷಯಗಳ ಕುರಿತಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

1958ರಿಂದ 1969ರ ನಡುವೆ ರಾಜ್ಯಕ್ಕೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ ಮತ್ತು ಜಲ ವಿದ್ಯುತ್ ಯೋಜನೆಯ ನಿರ್ಮಾಣದ ವೇಳೆ ರೈತರು ಗಣನೀಯ ಪ್ರಮಾಣದಲ್ಲಿ ತಮ್ಮ ಭೂಮಿ ಕಳೆದುಕೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಸುಮಾರು 9136 ಎಕರೆ 27 ಗುಂಟೆ ಅರಣ್ಯ ಭೂಮಿಯನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನು ಅಂದಿನ ಮೈಸೂರು ಅರಣ್ಯ ನಿಯಂತ್ರಣ -1900 ಸೆಕ್ಷನ್ 30ರಡಿ ಡಿ ರಿಸರ್ವ್ ಮಾಡಲಾಗಿತ್ತು.

ಆದರೆ, ಅದು ಅಧಿಸೂಚನೆ ಆಗಿರಲಿಲ್ಲ, ಬಿಡುಗಡೆಯಾದ ಈ ಜಾಗದಲ್ಲಿ ಸಂತ್ರಸ್ತ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ಸರ್ಕಾರದ ಸೌಲಭ್ಯ ಲಭಿಸುತ್ತಿಲ್ಲ. ಹೀಗಾಗಿ ಸಮಸ್ಯೆ ಉಂಟಾಗಿದೆ. ಇದನ್ನು ಮನಗಂಡು ಸರ್ಕಾರ 2015-2017ರ ನಡುವೆ ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡಿತು. ಆದರೆ, ಈ ಆದೇಶಕ್ಕೆ ಮುನ್ನ ಭಾರತ ಸರ್ಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ನ್ಯಾಯಾಲಯದ ಆದೇಶದ ಅನ್ವಯ ಸರ್ಕಾರ ತನ್ನ ಆದೇಶ ಹಿಂಪಡೆಯಿತು. ಈಗ 23.03.203ರಂದು 9,129 ಎಕರೆ ಭೂಮಿ ಡಿ ರಿಸರ್ವ್ ಮಾಡವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಇಂದು ಕಾನೂನು ಇಲಾಖೆ ಉನ್ನತಾಧಿಕಾರಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಲಾಗಿದ್ದು, ಎಲ್ಲ ಸಂತ್ರಸ್ತರಿಗೂ ನ್ಯಾಯ ದೊರಕಬಹುದು ಎಂಬ ಭರವಸೆಯನ್ನು ಎಂದು ಈಶ್ವರ್​ ಖಂಡ್ರೆ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ವಿಕಾಸಸೌಧದ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೇಂದ್ರ ಸರ್ಕಾರದ ಉನ್ನತಾಧಿಕಾರಿ ಮಹೇಶ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್, ಅರಣ್ಯ ಮತ್ತು ಕಾನೂನು ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ : ಜಾತಿ ಜನಗಣತಿ ದೃಷ್ಟಿಯಿಂದ ವೀರಶೈವ ಮಹಾಸಭಾ ಅಧಿವೇಶನ ಆಯೋಜನೆ ಮಾಡಿಲ್ಲ: ಜಗದೀಶ್ ಶೆಟ್ಟರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.