ETV Bharat / state

ಕೊಡಗಿನಲ್ಲಿ ಭೂ ಪರಿವರ್ತನೆಗೆ ಅನುಮತಿ ನೀಡಲು ನಿರ್ಧಾರ: ಸಚಿವ ಆರ್.ಅಶೋಕ್ - ಅನಧಿಕೃತವಾಗಿ ಮನೆ ಕಟ್ಟಿದವರಿಗೂ ಬಾಡಿಗೆ ಕೊಡಲು ಆದೇಶ

ಕಳೆದ ಒಂದು ವರ್ಷದಿಂದ ಕೊಡಗಿನಲ್ಲಿ ಸ್ಥಗಿತಗೊಳಿಸಲಾಗಿದ್ದ ಭೂ ಪರಿವರ್ತನೆ ಪುನರಾರಂಭಿಸಲು ಕಂದಾಯ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

KN_BNG_03_KODAGU_RASHOKBYTE_SCRIPT_7201951
ಕೊಡಗಿನಲ್ಲಿ ಭೂ ಪರಿವರ್ತನೆಗೆ ಅನುಮತಿ ನೀಡಲು ನಿರ್ಧಾರ: ಸಚಿವ ಆರ್.ಅಶೋಕ್
author img

By

Published : Feb 10, 2020, 4:54 PM IST

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೊಡಗಿನಲ್ಲಿ ಸ್ಥಗಿತಗೊಳಿಸಲಾಗಿದ್ದ ಭೂ ಪರಿವರ್ತನೆ ಪುನರಾರಂಭಿಸಲು ಕಂದಾಯ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕೊಡಗಿನಲ್ಲಿ ಭೂ ಪರಿವರ್ತನೆಗೆ ಅನುಮತಿ ನೀಡಲು ನಿರ್ಧಾರ: ಸಚಿವ ಆರ್.ಅಶೋಕ್
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಭೂ ಪರಿವರ್ತನೆ ಸ್ಥಗಿತಗೊಳಿಸಿರುವುದರ ವಿರುದ್ಧ ಕೊಡಗು ಜನರು ಹಾಗೂ ಶಾಸಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಭೂ ಪರಿವರ್ತನೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಕೆಲ ನಿಬಂಧನೆಗಳೊಂದಿಗೆ ಭೂ ಪರಿವರ್ತನೆಗೆ ಅನುಮತಿ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ನದಿ, ಹಳ್ಳ, ಡ್ರೈನೇಜ್​ನಿಂದ 10 ಮೀಟರ್ ದೂರ ಬಫರ್ ಜೋನ್ ಸುತ್ತಮುತ್ತ ಭೂ ಪರಿವರ್ತನೆಗೆ ಅವಕಾಶ ಇಲ್ಲ. ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇಲ್ಲ.‌ ಡಿಸಿ ಎನ್‌ಒಸಿ ಪಡೆದ ನಂತರ ಗ್ರಾಮ ಪಂಚಾಯತಿ ಅನುಮತಿ ಪಡೆಯಬೇಕು. ಇನ್ನು ಭೂಕುಸಿತವಾದ ಪ್ರದೇಶಗಳಲ್ಲಿ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದರು.
ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ರೆಡ್ ಅಲರ್ಟ್ ಪ್ರದೇಶಗಳ ವರದಿ ನೀಡಲಿದ್ದು, ಅದರ ಆಧಾರದಲ್ಲಿ ಭೂ ಪರಿವರ್ತನೆಗೆ ಅವಕಾಶ ನೀಡಲಾಗುವುದು. ಮುಂದೆ ಕೊಡಗಿನಲ್ಲಿ ಭೂಕುಸಿತ ಆಗದ ರೀತಿಯಲ್ಲಿ ನಿರ್ಬಂಧಿತ ಭೂ ಪರಿವರ್ತನೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಇನ್ನು ಕೊಡಗಿನಲ್ಲಿ ಅನಧಿಕೃತವಾಗಿ ಮನೆ ಕಟ್ಟಿದವರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಅನಧಿಕೃತವಾಗಿ ಮನೆ ಕಟ್ಟಿದವರಿಗೂ ಬಾಡಿಗೆ ಕೊಡಲು ಆದೇಶ ನೀಡಲಾಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.