ETV Bharat / state

ಬಬಲೇಶ್ವರ, ತಿಕೋಟಾದಲ್ಲಿ ಕುಡಿವ ನೀರು ಯೋಜನೆ ಪರಿಷ್ಕರಿಸಲು ತೀರ್ಮಾನ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾದ ಜನರಿಗೆ ನೀರು ಪೂರೈಕೆ ಯೋಜನೆಗಳನ್ನು ಪರಿಷ್ಕರಿಸಿ, ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

decision-to-revise-drinking-water-scheme
ನೀರು ಪೂರೈಕೆ ಯೋಜನೆಗಳಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಚಿವ ಎಂ.ಬಿ.ಪಾಟೀಲ್
author img

By

Published : Aug 11, 2023, 6:52 AM IST

ಬೆಂಗಳೂರು: ಮೊದಲು ಗ್ರಾಮ ಪಂಚಾಯಿತಿಗಳಾಗಿದ್ದು, ಈಗ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾಗಳಿಗೆ ಪ್ರತಿಯೊಬ್ಬರಿಗೂ ದಿನಕ್ಕೆ 135 ಲೀಟರ್ ನೀರು ಒದಗಿಸುವ ರೀತಿಯಲ್ಲಿ ನೀರು ಪೂರೈಕೆ ಯೋಜನೆಗಳನ್ನು ಪರಿಷ್ಕರಿಸಿ, ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ವಿಜಯಪುರ ನಗರ ಮತ್ತು ಬಬಲೇಶ್ವರ, ತಿಕೋಟಾ ಪಟ್ಟಣಗಳ ಕುಡಿವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ಗುರುವಾರ ಸಂಜೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಬಬಲೇಶ್ವರ ಮತ್ತು ತಿಕೋಟಾಗಳಿಗೆ ಮೊದಲು ಪ್ರತೀ ವ್ಯಕ್ತಿಗೆ ದಿನಕ್ಕೆ 55 ಲೀ. ನೀರು ಒದಗಿಸುವ ಮಾನದಂಡಕ್ಕೆ ಅನುಗುಣವಾಗಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆ ಮಂಜೂರಾಗಿ, ಇದಕ್ಕೆ 82 ಕೋಟಿ ರೂ. ಒದಗಿಸಲಾಗಿತ್ತು.

decision-to-revise-drinking-water-scheme
ನೀರು ಪೂರೈಕೆ ಯೋಜನೆಗಳಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಚಿವ ಎಂ.ಬಿ.ಪಾಟೀಲ್​

ಆದರೆ, ಈಗ ಎರಡೂ ಊರುಗಳು ಪಟ್ಟಣ ಪಂಚಾಯಿತಿಗಳಾಗಿವೆ. ಹೀಗಾಗಿ, ನಗರ/ಪಟ್ಟಣ ಕುಡಿವ ನೀರು ಪೂರೈಕೆ ಯೋಜನೆಯಂತೆ ಯೋಜನೆಗಳ ಮರುವಿನ್ಯಾಸ ಮಾಡಿ, ಇನ್ಮುಂದೆ 24/7 ನೀರು ಪೂರೈಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

ಹಾಗೆಯೇ, ವಿಜಯಪುರ ನಗರಕ್ಕೆ ಕೊಲಾರದಿಂದ ನೀರನ್ನು ಹೊತ್ತು ತರುವ 10.74 ಕಿ.ಮೀ. ಉದ್ದದ ಕಾಂಕ್ರೀಟ್‌ ಪೈಪುಗಳಲ್ಲಿ ಸೋರಿಕೆ ಕಂಡು ಬರುತ್ತಿದೆ. ಆದ್ದರಿಂದ ಇಲ್ಲಿ ಉತ್ಕೃಷ್ಟ ದರ್ಜೆಯ ಎಂಎಸ್‌ ಪೈಪ್‌ ಹಾಕಬೇಕು. 2018ರಲ್ಲಿ ಇದಕ್ಕೆ 32 ಕೋಟಿ ರೂ. ಮಂಜೂರಾಗಿದ್ದರೂ ಟೆಂಡರ್​ ರದ್ದಾಗಿತ್ತು. ಈಗ ಇದನ್ನು ಪರಿಷ್ಕರಿಸಿದ್ದು, 52 ಕೋಟಿ ರೂ. ಅಂದಾಜು ವೆಚ್ಚವಾಗಲಿದೆ ಎಂದು ನಿರ್ಧರಿಸಲಾಗಿದೆ. ಈ ವಿಷಯವನ್ನು ತ್ವರಿತವಾಗಿ ಸಚಿವ ಸಂಪುಟದ ಮುಂದೆ ಮಂಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರ ಅಗಾಧವಾಗಿ ಬೆಳೆಯುತ್ತಿದ್ದು, 90 ಕಿ.ಮೀ. ದೂರದ ಆಲಮಟ್ಟಿ ಅಣೆಕಟ್ಟೆಯಿಂದ ನೀರು ಪೂರೈಸಲಾಗುತ್ತಿದೆ. ಇಲ್ಲಿಗೆ ಮುಂದಿನ 50 ವರ್ಷಗಳ ಅಗತ್ಯವನ್ನು ಮನಗಂಡು, ದೂರದೃಷ್ಟಿಯಿಂದ ಕುಡಿಯುವ ನೀರು ಪೂರೈಕೆ ಯೋಜನೆ ರೂಪಿಸಬೇಕಾಗಿದೆ. ಇವೆಲ್ಲವನ್ನೂ ನಗರಾಭಿವೃದ್ಧಿ ಇಲಾಖೆ ಒಪ್ಪಿಕೊಂಡಿದ್ದು, ತ್ವರಿತ ಕ್ರಮ ಕೈಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.

ಇದಲ್ಲದೇ, ವಿಜಯಪುರ ನಗರದಲ್ಲಿ ಸುಗಮ ಓಡಾಟ ಮತ್ತು ಸುರಕ್ಷತೆ ಹಾಗೂ ವಿದ್ಯುತ್‌ ಉಳಿತಾಯದ ದೃಷ್ಟಿಯಿಂದ ಎಲ್‌ಇಡಿ ದೀಪಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ. ಈ‌ ಸಂಬಂಧ ಟೆಂಡರ್​ಗೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಒಪ್ಪಿಗೆ ಸೂಚಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅನೇಕ ಯೋಜನೆಗಳ ಪರಿಷ್ಕರಣೆ, ದೂರದೃಷ್ಟಿಯ ಅನುಷ್ಠಾನ ಮತ್ತು ಪರಿಣಾಮಕಾರಿ ಸೇವೆಗಳ ಒದಗಿಸುವಿಕೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಆಯುಕ್ತ ಶರತ್, ಗ್ರಾಮೀಣ ಕುಡಿವ ನೀರು ಯೋಜನೆ ಆಯುಕ್ತ ನಾಗೇಂದ್ರ ಪ್ರಸಾದ್, ಮುಖ್ಯ ಎಂಜಿನಿಯರ್​ಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಮುಂಗಾರು ಹಂಗಾಮಿನ ಬೆಳೆ ಬೆಳೆಯಲು ಭದ್ರಾ ನಾಲೆಗಳಿಗೆ ಇಂದಿನಿಂದ ಹರಿಯಲಿದೆ ನೀರು.. ರೈತರಲ್ಲಿ ಮೊಗದಲ್ಲಿ ಮಂದಹಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.