ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಬಹುದಿನಗಳ ನಂತರ ಇಳಿಮುಖ ಕಂಡಿದೆ. ಪ್ರತಿದಿನ 10 ಸಾವಿರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 78,581 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 5,018 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿನ ಪ್ರಮಾಣ ಶೇಕಡ 6.38% ರಷ್ಟು ಇದೆ.
ರಾಜ್ಯದಲ್ಲಿ ಇದೀಗ ಸೋಂಕಿತರ ಸಂಖ್ಯೆ 7,70,604 ಇದ್ದು, 1,06,214 ಸಕ್ರಿಯ ಪ್ರಕರಣಗಳಿವೆ. ಇಂದು 8,005 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 6,53,829 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಚಿಕಿತ್ಸೆ ಫಲಿಸದೇ 64 ಸೋಂಕಿತರು ಬಲಿಯಾಗಿದ್ದು, ಈವರೆಗೆ 10,542 ಮೃತಪಟ್ಟಿದ್ದಾರೆ. ಅನ್ಯ ಕಾರಣದಿಂದ 19 ಸೋಂಕಿತರು ಸಾವನ್ನಪ್ಪಿದ್ದಾರೆ. ಇತ್ತ ಸಾವಿನ ಪ್ರಮಾಣ ಶೇ 1.27% ರಷ್ಟು ಇದೆ. 932 ಸೋಂಕಿತರು ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಮಾನ ನಿಲ್ದಾಣದಲ್ಲಿ 664 ಪ್ರಯಾಣಿಕರು ಆಗಮಿಸಿದ್ದು, ಅವರನ್ನ ಕೊರೊನಾ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 7 ದಿನಗಳಲ್ಲಿ 1,01,047 ಜನರು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ಸೋಂಕಿತರ ಸಂಪರ್ಕದಲ್ಲಿ ಪ್ರಾಥಮಿಕವಾಗಿ 5,48,811 ದ್ವಿತೀಯ ಸಂಪರ್ಕದಲ್ಲಿ 5,06,424 ಮಂದಿ ಇದ್ದಾರೆ.