ETV Bharat / state

ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂಬಂಧ ಪಟಾಕಿ ಮಾರಾಟ: ಬಳಕೆ ಸಂಬಂಧ ಮಾರ್ಗಸೂಚಿ ಪ್ರಕಟ

ದೀಪಾವಳಿ ಹಬ್ಬದ ಹಿನ್ನೆಲೆ ಪಟಾಕಿ ಮಾರಾಟ, ಬಳಕೆ ಸಂಬಂಧ ರಾಜ್ಯಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದೆ.

ದೀಪಾವಳಿ ಮಾರ್ಗಸೂಚಿ
ದೀಪಾವಳಿ ಮಾರ್ಗಸೂಚಿ
author img

By ETV Bharat Karnataka Team

Published : Nov 2, 2023, 9:04 PM IST

ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಪೌರಾಡಳಿತ ನಿರ್ದೇಶನಾಲಯ ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮಹಾನಗರಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ನಿಯಂತ್ರಿಸಲು ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯದ ಎಲ್ಲ ಮಹಾನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರುಗಳು, ಆರೋಗ್ಯಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು, ಆಸಕ್ತ ನಾಗರಿಕರು ಹಾಗು ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು. ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ತಿಳಿಸಿದೆ.

ಎಲ್ಲ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿರುತ್ತದೆ ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ, ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸೂಚಿಸಿದೆ.

ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ್ಯಾಂಡಮ್​ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೆ, ಮುಟ್ಟುಗೋಲು ಹಾಕಿ ಕೊಳ್ಳಬೇಕು. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು ಎಂದು ನಿರ್ದೇಶನ‌ ನೀಡಿದೆ.

ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಇದನ್ನು ಎಲ್ಲ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್‌ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್‌ಗಳಲ್ಲಿ ಕರಪತ್ರ ಭಿತ್ತಿಪತ್ರಗಳನ್ನು ಹಂಚುವ ಮೂಲಕ, ವಿಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಬೇಕು‌ ಎಂದು ತಿಳಿಸಿದೆ.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಣೆ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆ ಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮತ್ತು ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: 'ಬರ'ದ ಬರೆ ಮಧ್ಯೆ ರಾಜ್ಯಕ್ಕೆ ಮತ್ತೊಂದು ಕಂಟಕ: ಕೇಂದ್ರ ಸಹಾಯಾನುದಾನ ಬಿಡುಗಡೆಯಲ್ಲಿ ಭಾರಿ ಕುಸಿತ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.