ETV Bharat / state

ಬೆಳಗಾವಿ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರಿಂದ ಆಶ್ವಾಸನೆ: ಸಿಎಂ

ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಸ್ತಾಪಗಳ ಕುರಿತು ಮಾತುಕತೆ ನಡೆಸಿದರು.

defence-minister-has-assured-to-transfer-700-acres-of-land-in-belagavi-cm-bommai
ಬೆಳಗಾವಿ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರಿಂದ ಆಶ್ವಾಸನೆ: ಸಿಎಂ
author img

By

Published : May 11, 2022, 11:02 PM IST

ನವದೆಹಲಿ/ಬೆಂಗಳೂರು: ಬೆಳಗಾವಿಯಲ್ಲಿ ರಾಜ್ಯ ಸರ್ಕಾರಕ್ಕೆ ಸೇರಿದ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದ್ದು, ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ.

ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ, ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಸ್ತಾಪಗಳ ಕುರಿತು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗಿದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜೊತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

defence-minister-has-assured-to-transfer-700-acres-of-land-in-belagavi-cm-bommai
ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದರು.

ಇದನ್ನೂ ಓದಿ: ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು​ ಟಾರ್ಗೆಟ್ ಮಾಡಿದ್ದಾರೆ: ಸಿ.ಟಿ. ರವಿ ಟಾಂಗ್​

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.