ETV Bharat / state

ಸಾರ್ವಜನಿಕ ಶೌಚಾಲಯಗಳ ಕೊರತೆ: ಮಾಹಿತಿ ಕೇಳಿದ ಹೈಕೋರ್ಟ್ - Bangalore

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಷ್ಟು ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ಪಾಲಿಕೆಗೆ ಸೂಚಿಸಿದೆ.

High Court
ಹೈಕೋರ್ಟ್
author img

By

Published : Oct 5, 2020, 10:46 PM IST

ಬೆಂಗಳೂರು: ಸಾರ್ವಜನಿಕ ಶೌಚಾಲಯಗಳ ಕೊರತೆ, ಅಸಮರ್ಪಕ ನಿರ್ವಹಣೆ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಷ್ಟು ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ಪಾಲಿಕೆಗೆ ಸೂಚಿಸಿದೆ.

ಈ ಕುರಿತು ಲೆಟ್ಜ್ ಕಿಟ್ಜ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಅರ್ಜಿದಾರರ ಪರ ವಕೀಲರು ವಾದಿಸಿ, ಸ್ವಚ್ಛ ಭಾರತದ ಮಾನದಂಡಗಳ ಪ್ರಕಾರ ಬೆಂಗಳೂರು ನಗರದಲ್ಲಿ 1,100 ಸಾರ್ವಜನಿಕ ಶೌಚಾಲಯಗಳು ಇರಬೇಕು. ಪ್ರತಿ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಸಾರ್ವಜನಿಕ ಶೌಚಾಲಯ ಇರಬೇಕು. ಆದರೆ, ನಗರದಲ್ಲಿ ಕೇವಲ 479 ಶೌಚಾಲಯಗಳಿವೆ. ಇವುಗಳಲ್ಲಿ ಶೇಕಡಾ 50ರಷ್ಟು ಶೌಚಾಲಯಗಳು ಅಸಮರ್ಪಕ ನಿರ್ವಹಣೆಯಿಂದ ಕೂಡಿವೆ ಎಂದು ಪೀಠಕ್ಕೆ ವಿವರಿಸಿದರು.

ಅಲ್ಲದೇ ಮಾನವ ತ್ಯಾಜ್ಯವನ್ನು ಅನಿಲ ಹಾಗೂ ಗೊಬ್ಬರವಾಗಿ ಪರಿವರ್ತಿಸುವ ಪರಿಸರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸುವ ಅಗತ್ಯವಿದೆ ಎಂದು ತಿಳಿಸಿದರು. ವಾದ ಆಲಿಸಿದ ಪೀಠ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಷ್ಟು ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ, ನಿರ್ವಹಣೆ ಹೇಗಿದೆ, ನಿರ್ಮಾಣವಾಗಬೇಕಿರುವ ಶೌಚಾಲಯಗಳ ಸಂಖ್ಯೆ ಎಷ್ಟು? ಮಹಿಳೆಯರಿಗೆ ಲಭ್ಯವಿರುವ ಶೌಚಾಲಯಗಳ ಸಂಖ್ಯೆ ಎಷ್ಟು ಎಂಬ ವಿವರಗಳನ್ನು ಸಲ್ಲಿಸುವಂತೆ ಪಾಲಿಕೆಗೆ ನಿರ್ದೇಶಿಸಿತು.

ಇದೇ ವೇಳೆ, ರಾಜ್ಯ ಸರ್ಕಾರಕ್ಕೆ ಪೀಠ ರಾಜ್ಯದ ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.