ETV Bharat / state

ಜು.26ರಿಂದ ಡಿಗ್ರಿ ಕಾಲೇಜುಗಳು ಪುನಾರಂಭ.. ಈವರೆಗೆ ಕೋವಿಡ್​ ಲಸಿಕೆ ಪಡೆದ ವಿದ್ಯಾರ್ಥಿಗಳೆಷ್ಟು?

ಜುಲೈ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಪುನಾರಂಭವಾಗುತ್ತಿದ್ದು, ತರಗತಿಗಳಿಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್‌ ಲಸಿಕೆ ಪಡೆದಿರಬೇಕು ಎಂದು ತಿಳಿಸಲಾಗಿದೆ.

narayan
ಡಿಸಿಎಂ ಅಶ್ವತ್ಥ್​ ನಾರಾಯಣ್​
author img

By

Published : Jul 21, 2021, 7:16 PM IST

Updated : Jul 21, 2021, 7:24 PM IST

ಬೆಂಗಳೂರು: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಪುನಾರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ್​ ನಾರಾಯಣ್ ತಿಳಿಸಿದ್ರು.

ಇಂದು ಟೋಕಿಯೋ ಒಲಿಂಪಿಕ್‌-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡು ವರ್ಚುವಲ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕ್ರೀಡಾಪಟುಗಳಿಗೆ ಡಿಸಿಎಂ ಶುಭ ಕೋರಿದರು. ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜೊತೆಗೆ ಬೋಧಕರು, ಬೋಧಕೇತರ ಸಿಬ್ಬಂದಿಗೂ ವ್ಯಾಕ್ಸಿನ್‌ ನೀಡಲಾಗುತ್ತಿದ ಎಂದು ಹೇಳಿದ್ರು.

narayan
ಡಿಸಿಎಂ ಅಶ್ವತ್ಥ್​ ನಾರಾಯಣ್

ಲಭ್ಯವಿರುವ, ಲಭ್ಯವಾಗುತ್ತಿರುವ ಲಸಿಕೆಯನ್ನು ನ್ಯಾಯೋಚಿತವಾಗಿ ಎಲ್ಲರಿಗೂ ಹಂಚಿಕೆ ಮಾಡಲಾಗುತ್ತಿದೆ. ಹೀಗಾಗಿ ಭೌತಿಕ ತರಗತಿಗಳಿಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್‌ ಲಸಿಕೆ ಪಡೆದಿರಲೇಬೇಕು ಎಂದು ಡಿಸಿಎಂ ಹೇಳಿದರು.

ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿ:

ಕೋವಿಡ್‌ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ನಡುವೆ ಡಿಜಿಟಲ್‌ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್)‌ ಯನ್ನು ಜಾರಿಗೆ ತರಲಾಗಿದೆ. ಅದನ್ನು ಕಲಿಯಲು ಲ್ಯಾಪ್‌ಟಾಪ್‌ ಮತ್ತು ಟ್ಯಾಬ್ಲೆಟ್‌ ಪಿಸಿಗಳನ್ನು ವಿದ್ಯಾರ್ಥಿಗಳಿಗೆ ಕೊಡಲಾಗಿದೆ ಎಂದು ಮಾಹಿತಿ ನೀಡಿದರು.

Last Updated : Jul 21, 2021, 7:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.