ETV Bharat / state

ದೆಹಲಿ ಏಮ್ಸ್ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ..!

ಕನಕಪುರದಲ್ಲಿ ದೆಹಲಿ ಏಮ್ಸ್ ಆಸ್ಪತ್ರೆ ಮಾದರಿಯ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ತಲೆ ಎತ್ತಲಿದೆ . ಅಂದಾಜು 600 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಆಪರೇಷನ್ ಥಿಯೇಟರ್​
author img

By

Published : Jun 25, 2019, 3:20 PM IST

ಬೆಂಗಳೂರು: ಕನಕಪುರದಲ್ಲಿ ತಲೆ ಎತ್ತಲಿದೆ ದೆಹಲಿ ಏಮ್ಸ್ ಆಸ್ಪತ್ರೆ ಮಾದರಿಯ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಬೃಹತ್ ಆಸ್ಪತ್ರೆ. ಅಂದಾಜು 600 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ದೆಹಲಿಯ ಏಮ್ಸ್ ಆಸ್ಪತ್ರೆ ದೇಶದಲ್ಲೇ ಪ್ರಸಿದ್ದವಾದ ಆಸ್ಪತ್ರೆಯಾಗಿದೆ. ಏಮ್ಸ್​ ದರ್ಜೆ ಆಸ್ಪತ್ರೆಯನ್ನು ನಮ್ಮ ರಾಜ್ಯದಲ್ಲೂ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕನಕಪುರದಲ್ಲಿ ಈ ಪ್ರತಿಷ್ಠಿತ ಆಸ್ಪತ್ರೆ ನಿರ್ಮಿಸುವ ಮೂಲಕ ಐಟಿ ಹಬ್ ಎನ್ನಿಸಿಕೊಂಡಿರುವ ಕರ್ನಾಟಕಕ್ಕೆ ಮತ್ತೊಂದು ಖ್ಯಾತಿ ದಕ್ಕಿಸಿಕೊಡಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಿದ್ದಗೊಳಿಸುತ್ತಿದೆ. ಸದ್ಯದಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಇ. ತುಕಾರಾಂ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದಿಟ್ಟು ಈ ಆಸ್ಪತ್ರೆ ನಿರ್ಮಾಣಕ್ಕೆ ಅಂಗೀಕಾರ ಪಡೆಯಲಿದ್ದಾರೆ. ಅದೇ ರೀತಿ ಮೈಸೂರು, ಮಂಡ್ಯ, ಹುಬ್ಬಳ್ಳಿ ಹಾಗೂ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 15 ಕೋಟಿ ರೂಪಾಯಿ ವೆಚ್ಚದ ಅತ್ಯಾಧುನಿಕ ಆಪರೇಷನ್ ಥಿಯೇಟರ್​ಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಆರಂಭಿಕ ಹಂತದ ಆಪರೇಷನ್ ಥಿಯೇಟರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿದೆ. ಈ ತಿಂಗಳ ಅಂತ್ಯದ ವೇಳೆಗೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಆನಂತರ ಮಂಡ್ಯ, ಮೈಸೂರು, ಹುಬ್ಬಳ್ಳಿ ಹಾಗೂ ಬಳ್ಳಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಇಂತಹ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ನಂತರದ ದಿನಗಳಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಇಂತಹ ಶಸ್ತ್ರ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದರ ವಿಶೇಷತೆಗಳೇನು ಎಂದು ನೋಡುವುದಾದ್ರೆ?
ಪ್ರಸ್ತುತ ಇರುವ ಆಪರೇಷನ್ ಥಿಯೇಟರ್​ಗಳಲ್ಲಿ ನಾಲ್ಕು ಅಥವಾ ಐದು ಶಸ್ತ್ರ ಚಿಕಿತ್ಸೆಗಳನ್ನು ಒಟ್ಟಿಗೆ ಮಾಡಬಹುದು. ಆದರೆ, ನಿರ್ಮಾಣವಾಗಲಿರುವ ಅತ್ಯಾಧುನಿಕ ಆಪರೇಷನ್ ಥಿಯೇಟರ್​ಗಳಲ್ಲಿ ಹದಿನೈದರಿಂದ ಇಪ್ಪತ್ತು ಶಸ್ತ್ರ ಚಿಕಿತ್ಸೆಗಳನ್ನು ನಡೆಸಬಹುದು. ಅನಸ್ತೇಶಿಯಾ ವಿಭಾಗ, ವಿಶೇಷ ಏರ್ ಕಂಡೀಷನ್ ವ್ಯವಸ್ಥೆ, ಶಸ್ತ್ರ ಚಿಕಿತ್ಸೆಗಳನ್ನು ನಡೆಸಲು ಬೇಕಾಗುವ ವಿಶಾಲ ಜಾಗದ ವ್ಯವಸ್ಥೆ ವ್ಯವಸ್ಥಿತವಾಗಿರುತ್ತದೆ. ಜೊತೆಗೆ ಹೆಚ್ಚುವರಿ ವೈದ್ಯರ ತಂಡಗಳನ್ನು ಸಹ ಒದಗಿಸಲಾಗುತ್ತದೆ.

ಇನ್ನು, ಮೆಡಿಕಲ್ ಕಾಲೇಜುಗಳಿರುವ ಜಿಲ್ಲೆಗಳ ಮುಖ್ಯ ಆಸ್ಪತ್ರೆಯ ಹಾಸಿಗೆಗಳ ಸಾಮರ್ಥ್ಯವನ್ನು 400 ರಿಂದ 650ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆಯಂತೆ. ಈಗಾಗಲೇ ನಾಲ್ಕು ಜಿಲ್ಲಾಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳದ ಕೆಲಸವೂ ನಡೆದಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಉಳಿದ ಮೆಡಿಕಲ್ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಜಿಲ್ಲಾ ಆಸ್ಪತ್ರೆಗಳಿಗೂ ಈ ಸೌಲಭ್ಯ ವಿಸ್ತರಿಸಲು ತೀರ್ಮಾನಿಸಲಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಘಟಕವನ್ನು ಮೈಸೂರಿನಲ್ಲಿ ಆರಂಭಿಸಿದ ರೀತಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಘಟಕಗಳನ್ನು ಮೈಸೂರು, ಹುಬ್ಬಳ್ಳಿಯಲ್ಲಿ ಆರಂಭಿಸಲಾಗಿದೆ. ಅದೇ ರೀತಿ, ಕಲಬುರಗಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಕಿದ್ವಾಯಿ ಆಸ್ಪತ್ರೆ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಇನ್ಫೋಸಿಸ್ ನೆರವಿನೊಂದಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಕಟ್ಟಡವನ್ನು ವಿಸ್ತರಿಸಲಾಗಿದೆ. ಆದರೂ, ಕ್ಯಾನ್ಸರ್ ರೋಗಿಗಳ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಡೆ ಕಿದ್ವಾಯಿ ಆಸ್ಪತ್ರೆಯ ಘಟಕಗಳನ್ನು ತೆರೆದು ರೋಗಿಗಳಿಗೆ ಅನುಕೂಲ ಮಾಡಿಕೊಡುವುದು ಸರ್ಕಾರದ ಉದ್ದೇಶ ಎಂದು ತಿಳಿಸಲಾಗಿದೆ.

Intro:ಬೆಂಗಳೂರು : ದೆಹಲಿಯ ಏಮ್ಸ್ ಆಸ್ಪತ್ರೆಯ ಮಾದರಿಯಲ್ಲಿ ಕನಕಪುರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂಬ ಬೃಹತ್ ಆಸ್ಪತ್ರೆಯನ್ನು ಅಂದಾಜು 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.Body:ದೆಹಲಿಯ ಏಮ್ಸ್ ಆಸ್ಪತ್ರೆ ದೇಶದಲ್ಲೇ ಪ್ರಸಿದ್ದವಾಗಿದ್ದು, ಅದೇ ದರ್ಜೆಯ ಆಸ್ಪತ್ರೆಯನ್ನು ಕನಕಪುರದಲ್ಲಿ ನಿರ್ಮಿಸುವ ಮೂಲಕ ಐಟಿ ಹಬ್ ಎನ್ನಿಸಿಕೊಂಡ ಕರ್ನಾಟಕಕ್ಕೆ ಮತ್ತೊಂದು ಖ್ಯಾತಿ ದಕ್ಕಿಸಿಕೊಡಲು ಸರ್ಕಾರ ಮುಂದಾಗಿದೆ.
ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತಾವನೆಯನ್ನು ಸಿದ್ದಗೊಳಿಸುತ್ತಿದ್ದು, ಸದ್ಯದಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಇ..ತುಕಾರಾಂ ಅವರು ಸಚಿವ ಸಂಪುಟದ ಮುಂದಿಟ್ಟು ಈ ಆಸ್ಪತ್ರೆಯ ನಿರ್ಮಾಣಕ್ಕೆ ಅಂಗೀಕಾರ ಪಡೆಯಲಿದ್ದಾರೆ ಉನ್ನತ ಮೂಲಗಳು ತಿಳಿಸಿವೆ.
ಅದೇ ರೀತಿ ಮೈಸೂರು, ಮಂಡ್ಯ, ಹುಬ್ಬಳ್ಳಿ ಹಾಗೂ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 15 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಆಪರೇಷನ್ ಥಿಯೇಟರ್ ಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಮೂಲಗಳು ಹೇಳಿವೆ.
ಆರಂಭಿಕ ಹಂತದಲ್ಲಿ ಇಂತಹ ಆಪರೇಷನ್ ಥಿಯೇಟರ್ ಅನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ.
ಆನಂತರ ಮಂಡ್ಯ,ಮೈಸೂರು,ಹುಬ್ಬಳ್ಳಿ ಹಾಗೂ ಬಳ್ಳಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಇಂತಹ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕಗಳನ್ನು ಸ್ಥಾಪಿಸಲಾಗುವುದು. ನಂತರದ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳಿರುವ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಇಂತಹ ಶಸ್ತ್ರ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಲಾಗುತ್ತದೆ.
ಇದರ ವಿಶೇಷತೆಯೇನು ? : ಉಳಿದ ಆಪರೇಷನ್ ಥಿಯೇಟರ್ ಗಳಲ್ಲಿ ನಾಲ್ಕು ಅಥವಾ ಐದು ಶಸ್ತ್ರ ಚಿಕಿತ್ಸೆಗಳನ್ನು ಒಟ್ಟಿಗೆ ಮಾಡಬಹುದು. ಆದರೆ ಈ ಅತ್ಯಾಧುನಿಕ ಆಪರೇಷನ್ ಥಿಯೇಟರ್ ಗಳಲ್ಲಿ ಹದಿನೈದರಿಂದ ಇಪ್ಪತ್ತು ಶಸ್ತ್ರ ಚಿಕಿತ್ಸೆಗಳನ್ನು ನಡೆಸಬಹುದು.
ಅನಸ್ತೇಸಿಯಾ ವಿಭಾಗದಿಂದ ಹಿಡಿದು ವಿಶೇಷ ಏರ್ ಕಂಡೀಷನ್ ವ್ಯವಸ್ಥೆಯ ತನಕ, ಇಷ್ಟೊಂದು ಶಸ್ತ್ರ ಚಿಕಿತ್ಸೆಗಳನ್ನು ನಡೆಸಲು ಅನುಕೂಲವಾಗುವ ಜಾಗದ ವ್ಯವಸ್ಥೆಯಿಂದ ಹಿಡಿದು ಹೆಚ್ಚುವರಿ ವೈದ್ಯರ ತಂಡಗಳನ್ನು ಇಲ್ಲಿಗೆ ಒದಗಿಸಲಾಗುತ್ತದೆ.
ಮೂಲಗಳ ಪ್ರಕಾರ, ಮೆಡಿಕಲ್ ಕಾಲೇಜುಗಳಿರುವ ಜಿಲ್ಲೆಗಳ ಮುಖ್ಯ ಆಸ್ಪತ್ರೆಯ ಹಾಸಿಗೆಗಳ ಸಾಮರ್ಥ್ಯವನ್ನು 400 ರಿಂದ 650 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದ್ದು, ಈಗಾಗಲೇ ನಾಲ್ಕು ಜಿಲ್ಲಾಸ್ಪತ್ರೆಗಳಲ್ಲಿ ಈ ಹಾಸಿಗೆ ಹೆಚ್ಚಳದ ಸಾಮರ್ಥ್ಯವನ್ನು ಹೆಚ್ಚಳ ಮಾಡುವ ಕೆಲಸ ನಡೆದಿದೆ.
ಆನಂತರದ ದಿನಗಳಲ್ಲಿ ಹಂತ ಹಂತವಾಗಿ ಉಳಿದ ಮೆಡಿಕಲ್ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಜಿಲ್ಲಾ ಆಸ್ಪತ್ರೆಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ.
ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕವನ್ನು ಮೈಸೂರಿನಲ್ಲಿ ಆರಂಭಿಸಿದ ಹಾಗೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಮೈಸೂರು, ಹುಬ್ಬಳ್ಳಿಯಲ್ಲಿ ಆರಂಭಿಸಲಾಗಿದ್ದು, ಇದೇ ರೀತಿ ಗುಲ್ಬರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಕಿದ್ವಾಯಿ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಲಾಗುವುದು.
ಇನ್ ಫೋಸಿಸ್ ನೆರವಿನೊಂದಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಕಟ್ಟಡವನ್ನು ವಿಸ್ತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಷ್ಟಾದರೂ ಕ್ಯಾನ್ಸರ್ ರೋಗಿಗಳ ಪ್ರಮಾಣ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿದೆಡೆ ಕಿದ್ವಾಯಿ ಆಸ್ಪತ್ರೆಯ ಘಟಕಗಳನ್ನು ತೆರೆದು ರೋಗಿಗಳಿಗೆ ಅನುಕೂಲ ಮಾಡಿಕೊಡುವುದು ಸರ್ಕಾರದ ಉದ್ದೇಶ ಎಂದಿವೆ ಮೂಲಗಳು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.