ETV Bharat / state

ಬೆಂವಿವಿ ಪಿಜಿ ಕೋರ್ಸ್​​​​ಗಳ ಸೀಟು ಹಂಚಿಕೆ ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ವಿಳಂಬ - Bangalore Latest News Update

2020-21ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಜ.18ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯಲಿದೆ ಎಂದು ವಿವಿ ಘೋಷಣೆ ಮಾಡಿತ್ತು. ಆದರೆ, ತಾಂತ್ರಿಕ ದೋಷದ ಕಾರಣದಿಂದಾಗಿ 18ಕ್ಕೆ ಸೀಟು ಹಂಚಿಕೆ ನಡೆಯದೆ ವಿಳಂಬವಾಗಿದೆ.

delay-in-bvv-pg-course-seat-allocation-process
ಬೆಂವಿವಿ ಪಿಜಿ ಕೋರ್ಸ್ ಗಳ ಸೀಟು ಹಂಚಿಕೆ ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ವಿಳಂಬ..
author img

By

Published : Jan 20, 2021, 11:57 AM IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ತಾಂತ್ರಿಕ ದೋಷದ ಕಾರಣದಿಂದ ವಿಳಂಬವಾಗಿದೆ.

2020-21ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಜ.18ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯಲಿದೆ ಎಂದು ವಿವಿ ಘೋಷಣೆ ಮಾಡಿತ್ತು. ಆದರೆ, 18ಕ್ಕೆ ಸೀಟು ಹಂಚಿಕೆ ನಡೆದಿರಲಿಲ್ಲ.

ತಾಂತ್ರಿಕ ಕಾರಣದಿಂದ ವಿದ್ಯಾಾರ್ಥಿಗಳಿಗೆ ಸೀಟು ಹಂಚಿಕೆಯ ಮಾಹಿತಿಯೇ ಸಿಗುತ್ತಿರಲಿಲ್ಲ. ಹೀಗಾಗಿ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಜ.18ರಂದು ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ಜನವರಿ 20ರಂದು ಅಣಕು ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲು, ಅದರಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷ ಎದುರಾಗದೇ ಇದ್ದರೆ ಸಂಜೆ 6 ಗಂಟೆಗೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಸಲು ಸಿದ್ದತೆ ನಡೆದಿದೆ. ಈಗಾಗಲೇ ತಾಂತ್ರಿಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿವಿಯ ಕುಲಪತಿ ಪ್ರೊ. ಕೆ. ಆರ್. ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.