ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸಲು ವಿಧಾನಸಭೆ ಸ್ಪೀಕರ್ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ನ್ಯಾಯವಾದಿ ಎಸ್.ನಟರಾಜ್ ಶರ್ಮಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಒಟ್ಟು 13 ಶಾಸಕರು ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೂ ಸ್ಪೀಕರ್ ರಾಜೀನಾಮೆ ಅಂಗೀಕರಿಸಲು ತಡ ಮಾಡುತ್ತಿದ್ದಾರೆ. ವಿಳಂಬ ನೀತಿ ಅನುಸರಿಸಿದರೆ ಸಮಾಜದಲ್ಲಿ ಗದ್ದಲದ ವಾತಾವರಣ ಉಂಟಾಗುತ್ತದೆ. ಆದ್ದರಿಂದ ಈ ಕೂಡಲೇ ರಾಜೀನಾಮೆ ಅಂಗೀಕರಿಸಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅರ್ಜಿ ಇನ್ನಷ್ಟೇ ಸಲ್ಲಿಸಿದ್ದರಿಂದ ವಿಚಾರಣೆಗೆ ಬರುವವರೆಗೂ ಕಾಯಬೇಕಿದೆ.