ETV Bharat / state

ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ವಾರ್ನಿಂಗ್​​​ - ವಿಧಾನಸೌಧದಲ್ಲಿ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ

ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನೂ ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

http://10.10.50.85//karnataka/09-May-2022/kn-bng-05-cm-meeting-speech-script-7208083_09052022214422_0905f_1652112862_685.jpg
ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ
author img

By

Published : May 9, 2022, 10:17 PM IST

Updated : May 9, 2022, 10:24 PM IST

ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ ಸಭೆ ನಡೆಯಿತು. ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ನೀವೆಲ್ಲರೂ ಯುವಕರಿದ್ದೀರಿ. ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಭ್ರಷ್ಟಾಚಾರ ಸಹಿಸಲ್ಲ ಎಂದು ಎಚ್ಚರಿಕೆ: ಬಡವರ, ದೀನ ದಲಿತರ ಪರವಾದ ಕೆಲಸಗಳನ್ನು ಮಾಡಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ ಎಂದು ಸಿಎಂ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಅಭಯ ನೀಡಿದರು. ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ. ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸೂಚನೆ ನೀಡಿದರು.

Delay in the implementation of budget plans will not be tolerated CM
ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ:ಅಧಿಕಾರಿಗಳಿಗೆ ಸಿಎಂ ವಾರ್ನಿಂಗ್​​​

ಶಾಲಾ ಮಕ್ಕಳಿಗೆ, ಮಹಿಳಾ ಸಬಲೀಕರಣ, ಸ್ತ್ರೀಶಕ್ತಿ ಸಂಘಗಳಿಗೆ ವಿಶೇಷ ಕಾರ್ಯಕ್ರಮ ಇವೆಲ್ಲ ಪ್ರಮುಖ ಕಾರ್ಯಕ್ರಮಗಳು. ಸಾರ್ವಜನಿಕರಿಗೆ ಒಳಿತು ಮಾಡುವ ನಿರ್ಧಾರಗಳನ್ನು ಧೈರ್ಯವಾಗಿ ತೆಗೆದುಕೊಳ್ಳಿ. ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ. ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಹೇಳಿದಿಷ್ಟು : ಅಧಿಕಾರದ ವಿಕೇಂದ್ರೀಕರಣವಾಗಿ 3 ದಶಕಗಳ ಮೇಲಾಗಿದೆ. ಅದರ ಲಾಭವನ್ನು ಒಮ್ಮೆ ಹಿಂದುರಿಗಿ ನೋಡಬೇಕಾಗಿದೆ‌. ಕೇಂದ್ರೀಕೃತವಾದ ಆಡಳಿತ ಮಾಡಿದರೆ ಜನರಿಗೆ ಆಡಳಿತದ ಲಾಭ, ಸರ್ಕಾರದ ಕಾರ್ಯಕ್ರಮಗಳು ಮುಟ್ಟುವುದಿಲ್ಲ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಜನರಿಂದ ಜನರಿಗೋಸ್ಕರ ಆಡಳಿತವಾಗಬೇಕು. ಅಧಿಕಾರದ ಸುತ್ತಲೂ ಜನ ಓಡಾಡಬಾರದು. ಜನರ ಸುತ್ತಲೂ ಅಭಿವೃದ್ಧಿಯಾಗಬೇಕು ಎನ್ನುವ ಕಲ್ಪನೆ ಇದಾಗಿದೆ ಎಂದು ಸಿಎಂ ಹೇಳಿದರು.

ಬಡವರ ಪರವಾಗಿ ಕೆಲಸ ಮಾಡಲು ಧೈರ್ಯವಾಗಿ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯಬಾರದು. ಎಲ್ಲಾ ಜಿ,ಪಂ ಸಿಇಒ ಗಳು ಸ್ವತಂತ್ರವಾಗಿ ಕೆಲಸ ಮಾಡಬೇಕು. ಕೆಳಹಂತದ ಅಧಿಕಾರಿಗಳ ಮೇಲೆ ನಿಯಂತ್ರಣವೂ ಇರಬೇಕು. ತಪ್ಪಾದರೆ ಕೇಳುವ ನೈತಿಕತೆ ಇರಬೇಕು. ಲಿಂಕ್ ಡಾಕ್ಯುಮೆಂಟ್ ತೆಗೆದು ನೋಡಬೇಕು. ಜಿಲ್ಲಾ ಪಂಚಾಯತ್ ಸ್ವತಂತ್ರ ಸರ್ಕಾರವಿದ್ದಂತೆ. ಸಿಇಒಗಳು ತಮ್ಮ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಅಧಿಕಾರದ ಮಹತ್ವವನ್ನು ಅರಿತು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಪಿಡಿಒಗಳನ್ನು ಶಿಸ್ತಿನಲ್ಲಿಡಬೇಕು. ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಬೇಕು. ನಿಮ್ಮ ಪಾತ್ರ, ಕರ್ತವ್ಯ ಹಾಗೂ ಅಧಿಕಾರದ ಬಗ್ಗೆ ಸ್ಪಷ್ಟತೆ ಇರಬೇಕು. ಸರ್ಕಾರದ ಆಯವ್ಯಯದ ಬಹುತೇಕ ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ್ ಸಿಇಒಗಳು ಅನುಷ್ಠಾನ ಮಾಡುತ್ತಾರೆ ಎಂದರು.

ರೋಡ್​ ಮ್ಯಾಪ್ ಸಿದ್ಧ ಮಾಡಿಟ್ಟುಕೊಳ್ಳಿ: ಬಜೆಟ್ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರೋಡ್ ಮ್ಯಾಪ್ ಮಾಡಿಕೊಳ್ಳಬೇಕು. ಸಿಇಒಗಳು ಜಿಲ್ಲೆಯ ಸಿಎಸ್ (ಮುಖ್ಯ ಕಾರ್ಯದರ್ಶಿಗಳು)ಗಳಂತೆ ಕಾರ್ಯ ನಿರ್ವಹಿಸಬೇಕು. ಜಿಲ್ಲೆಗಳಲ್ಲಿ ಮನೆ ನಿರ್ಮಾಣ, ಫಲಾನುಭವಿಗಳ ಆಯ್ಕೆ ಶೀಘ್ರವಾಗಿ ಮುಗಿಸಬೇಕು. ಪಡಿತರ ಚೀಟಿ ವಿತರಣೆ, ಶಾಲಾ ಕೊಠಡಿಗಳು, ಆಸ್ಪತ್ರೆಗಳ ವಸ್ತುಸ್ಥಿತಿ ಬಗ್ಗೆ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಆಯಾ ವರ್ಷದ ಕ್ರಿಯಾ ಯೋಜನೆಗಳು ಅದೇ ವರ್ಷದಲ್ಲಿ ಅನುಷ್ಠಾನವಾಗುವುದಿಲ್ಲ. ಅನುಷ್ಠಾನ ಅವಧಿ 10 ತಿಂಗಳೊಳಗೆ ಆಗಬೇಕು ಕಾಲಮಿತಿಯೊಳಗೆ ಕಾರ್ಯಕ್ರಮಗಳ ಅನುಷ್ಠಾನವಾಗಬೇಕೆಂಬ ಧ್ಯೇಯವಿರಬೇಕು. ಯೋಜನೆಯ ಅನುಷ್ಠಾನದ ಎಲ್ಲ ಹಂತಗಳ ಬಗ್ಗೆ ಗಮನಹರಿಸಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯ ಯೋಜನೆಗಳೇ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ನಿರ್ಭರವಾಗಿದೆ. ಇವುಗಳ ಶೀಘ್ರ ಅನುಷ್ಠಾನಕ್ಕೆ ಗಮನಹರಿಸಬೇಕು ಎಂದು ಸೂಚನೆ ಕೊಟ್ಟರು.

ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಿ: ಗ್ರಾಮಪಂಚಾಯತಿಗಳ ಪರಿಶೀಲನೆ ನಡೆಸಬೇಕು. ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಬೇಕು. ಕಚೇರಿಗಳಿಗೆ ಸೀಮಿತವಾಗದೇ ಸ್ಥಳಗಳಿಗೆ ತೆರಳಿ ಪರಿಶೀಲನೆಗಳನ್ನು ಮಾಡಬೇಕು. ರಾಯಚೂರಿನಲ್ಲಿ ಇಷ್ಟು ವರ್ಷಗಳ ಕಾರ್ಯಕ್ರಮಗಳ ಹೊರತಾಗಿಯೂ ಅನೀಮಿಯಾ ಪ್ರಮಾಣದಲ್ಲಿ ಹೆಚ್ಚಳವಿದೆ. ಅಪೌಷ್ಟಿಕತೆ ನಿವಾರಣೆಗೆ ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದ ಯೋಜನೆಗಳು ನಿಗದಿತ ಅವಧಿಯಲ್ಲಿ ಮುಗಿಯಲೇಬೇಕು. ತಳಹಂತದ ಜನರ ಬದುಕನ್ನು ಬದಲಿಸುವ ಇಂತಹ ಯೋಜನೆಗಳ ಅನುಷ್ಠಾನದ ಬಗ್ಗೆ ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು. ಸಮಾಜ ಕಲ್ಯಾಣ ಕಾರ್ಯಕ್ರಮಗಳು, ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಅಪೌಷ್ಟಿಕತೆ ನಿವಾರಣೆ ಬಗ್ಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗಳಲ್ಲಿ ಇರುವ ಅಪೌಷ್ಟಿಕತೆಯ ಮಟ್ಟ , ಎಂಎಂಆರ್, ಐಎಂಆರ್ ಗಳ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದ ಸರಾಸರಿ ಪೌಷ್ಟಿಕತೆಯ ಮಟ್ಟವನ್ನು ತಲುಪಲು ಸಿಇಒಗಳು ಶ್ರಮಿಸಬೇಕು ಎಂದು ಕಟ್ಟಪ್ಪಣೆ ನೀಡಿದರು.

ಬದಲಾವಣೆ ಆಗಬೇಕು.. ಇದು ಎಲ್ಲರಿಂದಲೂ ಆಗಬೇಕು: ಜಿಲ್ಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ, ಕುಂಠಿತ ಬೆಳವಣಿಗೆಗಳ ಬಗ್ಗೆ ಗಮನಹರಿಸಿ ಇವುಗಳನ್ನು ಅಭಿವೃದ್ಧಿಗೊಳಿಸಲು ಶಾಲೆಗಳಲ್ಲಿ ಆರೋಗ್ಯ ಶಿಬಿರ,ಆಸ್ಪತ್ರೆಗಳ ಸಹಕಾರ ಪಡೆದು ಕಾರ್ಯಕ್ರಮಗಳನ್ನು ಮಾಡಬೇಕು. ಇಂದಿನಿಂದ ಬದಲಾವಣೆಯಾಗಬೇಕು. ಬದಲಾವಣೆ ಎಲ್ಲರಿಂದಲೂ ಆಗಬೇಕು. ಜನಕ್ಕೆ ಈ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ಮಾಡಬೇಕು. ಸಾಮಾಜಿಕ ಮತ್ತು ಅಭಿವೃದ್ಧಿಯ ಹೊಣೆಗಾರಿಕೆ ಇದೆ ಎಂದು ಸಿಇಒಗಳಿಗೆ ಆದೇಶ ನೀಡಿದರು.

100 ಪಶು ಚಿಕಿತ್ಸಾಲಯ, 70 ಗೋಶಾಲೆ ನಿರ್ಮಾಣ, ಪುಣ್ಯಕೋಟಿ ದತ್ತು ಯೋಜನೆ, ಕರಾವಳಿಯಲ್ಲಿ ಸಮುದ್ರದಾಳದಲ್ಲಿ ಮೀನುಗಾರಿಕೆ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ , ಅಪೌಷ್ಟಿಕತೆ ನಿವಾರಣೆಗೆ ಎಸ್.ಡಿ ಪಿಯಲ್ಲಿ , ಕೆಕೆಆರ್ ಡಿಬಿ ಮೂಲಕ ಅನುದಾನ ಒದಗಿಸಿದೆ. ಸುಮಾರು 7000 ಶಾಲಾ ಕೊಠಡಿಗಳ ನಿರ್ಮಾಣ ಸರ್ಕಾರದ ಬೃಹತ್ ಕಾರ್ಯಕ್ರಮವಾಗಿದ್ದು, ಸೂಕ್ತ ರೀತಿಯಲ್ಲಿ ಆಯ್ಕೆ ಮತ್ತು ಅನುಷ್ಠಾನ ಆಗಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದರು.

ಆರೋಗ್ಯ, ಸಮಾಜ ಕಲ್ಯಾಣಕ್ಕೆ ಒತ್ತು ನೀಡುವಂತೆ ಸೂಚನೆ: 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು, ಸಮಾಜ ಕಲ್ಯಾಣ ಇಲಾಖೆಯಡಿ 100 ವಸತಿ ನಿಲಯಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 50 ವಸತಿ ನಿಲಯಗಳ ನಿರ್ಮಾಣ ಆದ್ಯತೆ ಮೇರೆಗೆ ಕೈಗೊಳ್ಳುವುದು. ಮುಖ್ಯಮಂತ್ರಿ ಆರೋಗ್ಯ ವಾಹಿನಿ ಬೀದರ್, ಹಾವೇರಿ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಸಿಇಒಗಳು ಗಮನ ಹರಿಸಬೇಕು ಎಂದು ಸಿಎಂ ಸಭೆಯಲ್ಲಿ ಹೇಳಿದರು.

ಇದನ್ನು ಓದಿ:ದಕ್ಷತೆ, ಸಮಯ ಬದ್ಧತೆಯಿಂದ ಕೆಲಸ ಮಾಡಿ : ಸಿಇಒಗಳಿಗೆ ಸಿಎಂ ಖಡಕ್ ಸೂಚನೆ

Last Updated : May 9, 2022, 10:24 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.